ಮಧುಗಿರಿ | ಮಾನವೀಯ ಮೌಲ್ಯಗಳ ಪ್ರತಿಪಾದಕ ವಾಲ್ಮೀಕಿ ಸದಾ ಸ್ಮರಣೀಯರು: ಪ್ರೊ. ಕೆ.ಎಸ್. ಕುಮಾರ್

Date:

 ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣವನ್ನು ನೀಡಿದ ಮಹರ್ಷಿ ವಾಲ್ಮೀಕಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಶ್ರೇಷ್ಠ ಕವಿಯಾಗಿದ್ದು, ಸದಾ ಸ್ಮರಣೀಯರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಎಸ್. ಕುಮಾರ್ ಅಭಿಪ್ರಾಯಪಟ್ಟರು.

- Advertisement -

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಕೇವಲ ಋಷಿಯಲ್ಲ; ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಯ ನೆಲೆಗಟ್ಟನ್ನು ರೂಪಿಸಿದ ಮಹಾನ್ ಕವಿ ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ವಾಲ್ಮೀಕಿಯವರ ಜೀವನ ಮತ್ತು ಸಂದೇಶದ ಕುರಿತು ಮಾತನಾಡಿದ ಸಾಂಸ್ಕೃತಿಕ ಸಮಿತಿ ಸಂಚಾಲಕ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ. ಗೋವಿಂದರಾಯ, ಪ್ರತಿಯೊಬ್ಬ ವ್ಯಕ್ತಿಯೂ ಜ್ಞಾನ ಮತ್ತು ತಪಸ್ಸಿನ ಮೂಲಕ ಜಗತ್ತಿಗೆ ಬೆಳಕಾಗಬಹುದು ಎಂಬುದಕ್ಕೆ ವಾಲ್ಮೀಕಿಯವರ ಜೀವನವೇ ನಿದರ್ಶನವಾಗಿದೆ ಎಂದರು.

Advertisements

ಶೋಕವೇ ಶ್ಲೋಕವಾಗಿ ರೂಪುಗೊಂಡು 24,000 ಶ್ಲೋಕಗಳು ಹಾಗೂ ಏಳು ಕಾಂಡಗಳನ್ನು ಒಳಗೊಂಡ ರಾಮಾಯಣ ಮಹಾಕಾವ್ಯ ರಚನೆಯಾಯಿತು. ಸತ್ಯ, ತ್ಯಾಗ, ಧರ್ಮ, ಕರ್ತವ್ಯಪ್ರಜ್ಞೆ ಹಾಗೂ ತಂದೆ-ಮಗ, ಗಂಡ-ಹೆಂಡತಿ ಮತ್ತು ಅಣ್ಣ-ತಮ್ಮಂದಿರ ನಡುವಿನ ಸಂಬಂಧಗಳು ಹೇಗಿರಬೇಕು ಎಂಬುದನ್ನು ರಾಮಾಯಣ ಇಂದಿಗೂ ಆದರ್ಶವಾಗಿ ಬೋಧಿಸುತ್ತದೆ ಎಂದು ತಿಳಿಸಿದರು.

ವಾಲ್ಮೀಕಿಯಂತಹ ಕವಿ ಮತ್ತು ರಾಮಾಯಣದಂತಹ ಕೃತಿ ದೊರೆತಿರುವುದು ಭುವನದ ಭಾಗ್ಯ ಎಂಬ ಕುವೆಂಪು ಅವರ ಮಾತುಗಳು ಅರ್ಥಪೂರ್ಣವಾಗಿವೆ ಎಂದು ಹೇಳಿದರು.

ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ. ಎಚ್. ಮಂಜುನಾಥ್ ಮಾತನಾಡಿ, ರಾಮಾಯಣ ಮತ್ತು ಮಹಾಭಾರತದಂತಹ ಭಾರತೀಯ ಮಹಾಕಾವ್ಯಗಳು ಜಗತ್ತಿನ ಸಾಹಿತ್ಯದ ಮೇಲೆ ಪ್ರಭಾವ ಬೀರಿವೆ. ರಾಮಾಯಣದ ಪ್ರಭಾವವು ನಂತರದ ಭಾರತೀಯ ಭಾಷೆಗಳ ಸಾಹಿತ್ಯ ರಚನೆಯ ಮೇಲೂ ಬೀರಿದ್ದು, ಭಾರತೀಯ ಸಾಹಿತ್ಯದ ಬೆಳವಣಿಗೆಗೆ ಭದ್ರವಾದ ನೆಲೆಗಟ್ಟನ್ನು ಒದಗಿಸಿದೆ ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪ್ರೊ. ಬಿ. ಮಂಜುನಾಥ್ ಮಾತನಾಡಿ, ವಾಲ್ಮೀಕಿ ಎಂಬ ಹೆಸರು ಪರಿವರ್ತನೆ, ಸೃಜನಶೀಲತೆ, ಕರುಣೆ ಮತ್ತು ಮಾನವೀಯತೆಯ ಸಂಕೇತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಮುರಳೀಧರ, ಪ್ರಾಧ್ಯಾಪಕರಾದ ಡಾ. ಸಂಜೀವಮೂರ್ತಿ, ಡಾ. ಶ್ರೀನಿವಾಸಪ್ಪ, ಡಾ. ದುರ್ಗಪ್ಪ, ರಾಮಮೂರ್ತಿ, ನಟರಾಜ್, ಉಪನ್ಯಾಸಕರಾದ ಡಾ. ರಂಗಸ್ವಾಮಯ್ಯ, ಮೋಹನ್ ಕುಮಾರ್, ಹರೀಶ್, ಆದರ್ಶ್, ರಮೇಶ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...

ಗುಬ್ಬಿಯಲ್ಲಿ ಅರ್ಧಕ್ಕೆ ನಿಂತ ವೈಟ್ ಟಾಪಿಂಗ್ ರಸ್ತೆ: ಧೂಳು, ಗುಂಡಿಗಳ ನಡುವೆ ಜನರ ಪರದಾಟ

ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್...