ಮಧುಗಿರಿ | ಯುವಜನತೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಡಾ.ಶಿವಣ್ಣ

Date:

ಯುವಜನತೆ ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿ, ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಶಿವಣ್ಣ ಎಂ.ಜೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಕಾರ್ಯಕ್ರಮದಲ್ಲಿ ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಶಿಸ್ತು, ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಪ್ರಜ್ಞೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಹಕಾರಿ ಮಹಾಮಂಡಳದ ಮಾಜಿ ಅಧ್ಯಕ್ಷ ಗಂಗಣ್ಣ ಮಾತನಾಡಿ ಯುವಜನತೆ ಸ್ವಾರ್ಥದ ಚಿಂತನೆಗಳನ್ನು ಮೀರಿ ಸಮಾಜದ ಒಳಿತಿಗಾಗಿ ತಮ್ಮ ಸಮಯ, ಶ್ರಮ ಮತ್ತು ಜ್ಞಾನವನ್ನು ಬಳಸಿಕೊಂಡಾಗ ದೇಶದ ಪ್ರಗತಿಗೆ ಮಹತ್ವದ ಕೊಡುಗೆ ನೀಡಬಹುದು ಎಂದರು.

 ಪುರಸಭಾ ಮಾಜಿ ಅಧ್ಯಕ್ಷ ನಂಜುಂಡಯ್ಯ ಎಂ.ಕೆ ಮಾತನಾಡಿ ನಾನು ಮಾತ್ರವಲ್ಲ, ಸಮಾಜವೂ ಬೆಳೆಯಬೇಕು ಎಂಬ ಮನೋಭಾವ ಪ್ರತಿಯೊಬ್ಬ ಯುವಕ-ಯುವತಿಯಲ್ಲೂ ಬೆಳೆಸುವಲ್ಲಿ ಎನ್‌ಎಸ್‌ಎಸ್‌ ಪ್ರಮುಖ ವೇದಿಕೆಯಾಗಿದೆ ಎಂದರು.

ನಿವೃತ್ತ ಪ್ರಾಂಶುಪಾಲರಾದ ಪ್ರೊ.ಮುನೀಂದ್ರಕುಮಾರ್ ಡಿ.ಎಸ್ ಮಾತನಾಡಿ ಯುವಸಮೂಹ ಸಮಾಜದ ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ಪರಿಹಾರಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಕರೆ ನೀಡಿದರು.

 ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗೋವಿಂದರಾಯ ಎಂ ಮಾತನಾಡಿ ಎನ್ ಎಸ್ ಎಸ್ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 24 ರಂದು ಆಚರಿಸಲಾಗುತ್ತದೆ. 1969ರ ಸೆಪ್ಟೆಂಬರ್ 24ರಂದು ಭಾರತ ಸರ್ಕಾರವು ಮಹಾತ್ಮ ಗಾಂಧೀಜಿಯವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಎನ್ ಎಸ್ ಎಸ್ ನ್ನು ಆರಂಭಿಸಿದ ಹಿನ್ನೆಲೆಯಲ್ಲಿ ಈ ದಿನವನ್ನು ಎನ್ ಎಸ್ ಎಸ್ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್ ಬುಡಸನಹಳ್ಳಿ ಮಾತನಾಡಿ ಎನ್ ಎಸ್ ಎಸ್ ನ ಮುಖ್ಯ ಧ್ಯೇಯ ನಾನಲ್ಲ, ನೀನು ಎಂಬುದಾಗಿದ್ದು, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ, ಶಿಸ್ತು ಮತ್ತು ಸಹಕಾರದ ಮನೋಭಾವವನ್ನು ಬೆಳೆಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಂಜುನಾಥ್ ಬಿ, ಯುವ ಮುಖಂಡರಾದ ರಘು ಯಾದವ್,ಮನು, ಸಿದ್ದಿಕ್, ಪ್ರಾಧ್ಯಾಪಕರಾದ ಮಂಜುನಾಥ್ ಪೂಜೇರಿ, ಮುರುಳಿಧರ್, ವೇದಲಕ್ಷ್ಮೀ ಜಿ, ಡಾ.ರಂಜಿತಾ,ಡಾ.ನಾಗರಾಜು, ಡಾ.ಸಂಜೀವಮೂರ್ತಿ, ರಾಮಮೂರ್ತಿ, ಯೋಗೀಶ್ ಕುಮಾರ್, ನಾಗೇಂದ್ರ, ಗಿರೀಶ್, ಎನ್ ಎಸ್ ಎಸ್ ಸ್ವಯಂಸೇವಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿ ವಿವಿಧ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಆರೋಗ್ಯಕರ ಪರಿಸರವನ್ನು ಉಳಿಸುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...

ತುಮಕೂರು | ಹೊಸ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ (ಪಿಎಫ್) ನೀತಿಯಲ್ಲಿನ ಕಾರ್ಮಿಕ ವಿರೋಧಿ...

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...