ಮಧುಗಿರಿ | ಪಿಎಚ್‌ಡಿ ಪದವಿ ಪಡೆದ ಕೃಷ್ಣಮೂರ್ತಿಗೆ ಅಭಿನಂದನೆ

Date:

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ‘An Economic Analysis of Production and Marketing of Contract Farming of Vegetables under Contract Farming in Karnataka’ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಕೃಷ್ಣಮೂರ್ತಿ ಜಿ.ಎನ್. ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.

- Advertisement -

ಮಧುಗಿರಿ ತಾಲ್ಲೂಕಿನ ಗರಣಿ ಗ್ರಾಮದ ನಾರಾಯಣಪ್ಪ ಹಾಗೂ ಭಾಗ್ಯಮ್ಮ ದಂಪತಿಯ ಪುತ್ರರಾದ ಕೃಷ್ಣಮೂರ್ತಿ ಅವರು ಪದವಿ ಶಿಕ್ಷಣವನ್ನು ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಯುಜಿಸಿ-ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳಲ್ಲಿ ಅರ್ಹತೆ ಪಡೆದು ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಅವರು, 15ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ರಚಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿದ್ದಾರೆ.

ಪ್ರಸ್ತುತ ಮಂಡ್ಯ ಜಿಲ್ಲೆಯ ಮದ್ದೂರಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ನಿಯೋಜನೆ ಮೇರೆಗೆ ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಿಎಚ್‌ಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ., ವ್ಯವಸ್ಥಾಪಕಿ ಚಂದ್ರಕಲಾ, ಪ್ರಾಧ್ಯಾಪಕರಾದ ಡಾ. ಗೋವಿಂದರಾಯ, ಡಾ. ವಿಜಯಲಕ್ಷ್ಮೀ, ವೇದಲಕ್ಷ್ಮೀ, ಡಾ. ರಂಜಿತಾ, ಡಾ. ಮಂಜುನಾಥ್ ಬುಡಸನಹಳ್ಳಿ, ಡಾ. ನಾಗರಾಜು, ಮುರುಳಿಧರ್, ಡಾ. ಸಂಜೀವಮೂರ್ತಿ, ಡಾ. ಶ್ರೀನಿವಾಸಪ್ಪ, ಡಾ. ಲತಾ, ಡಾ. ದುರ್ಗಪ್ಪ, ಡಾ. ಲೀಲಾವತಿ, ರಾಮಮೂರ್ತಿ, ನಟರಾಜು, ಡಾ. ನಂದಿನಿ, ಭಾರ್ಗವಿ, ಮಂಜುನಾಥ್ ಪೂಜೇರಿ, ಪ್ರದೀಪ್, ಸಿದ್ದೇಶ್ವರ, ದರ್ಶನ್, ಮನೋಹರ್, ಚಂದ್ರಶೇಖರ್, ಹರಿಕುಮಾರ್ ಸೇರಿದಂತೆ ಹಲವರು ಅಭಿನಂದಿಸಿದರು.

ಶಾಸಕ ಕೆ.ಎನ್. ರಾಜಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಕೆ.ಎನ್.ಆರ್. ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ‘ಅಕ್ಷರ ಅಮೃತ’ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಕೃಷ್ಣಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶುಚಿ ಹಾಗೂ ರುಚಿಕರವಾದ ಆಹಾರ ಒದಗಿಸುವ ಮೂಲಕ ವಿದ್ಯಾರ್ಥಿಗಳಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸಲು ಹಾಗೂ ಅವರು ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಡಾ. ಗರಣಿ ಕೃಷ್ಣಮೂರ್ತಿ ಅವರು ನೂರಾರು ವಿದ್ಯಾರ್ಥಿನಿಯರ ಆರೋಗ್ಯದ ಹಿತದೃಷ್ಟಿಯಿಂದ ಸ್ಯಾನಿಟರಿ ಪ್ಯಾಡ್ ದಹನ ಯಂತ್ರವನ್ನು ಕಾಲೇಜಿಗೆ ಉಡುಗೊರೆಯಾಗಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...