ಮಧುಗಿರಿ | ಡಿಜಿಟಲ್ ಮಾಧ್ಯಮದಲ್ಲಿ ಗ್ರಾಹಕರೇ ವಿತರಕರು : ಪ್ರೊ. ಮುನೀಂದ್ರಕುಮಾರ್

Date:

ಡಿಜಿಟಲ್ ಯುಗದಲ್ಲಿ ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ . ಡಿ. ಎಸ್. ಮುನೀಂದ್ರ ಕುಮಾರ್ ಅಭಿಪ್ರಾಯಪಟ್ಟರು

- Advertisement -

ಮಧುಗಿರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಐಕ್ಯೂಎಸಿ, ಎನ್ ಎಸ್ ಎಸ್, ಪ್ಲೇಸ್ ಮೆಂಟ್ ಸೆಲ್ , ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಈದಿನ ಡಾಟ್ ಕಾಮ್ ಸಹಯೋಗದಲ್ಲಿ “ಡಿಜಿಟಲ್ ಮಾಧ್ಯಮ : ಸವಾಲು ಮತ್ತು ಸಾಧ್ಯತೆಗಳು” ವಿಷಯ ಕುರಿತು ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಸಾಮಾಜಿಕ ಸಂಪರ್ಕ ಗಟ್ಟಿಗೊಳಿಸಲು ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು, ಸಾಮಾಜಿಕ ಜಾಲತಾಣದಿಂದ ಸಾಮಾಜಿಕ ಸಂಪರ್ಕ ಬೆಳೆಯುವುದಿಲ್ಲ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1003285080

ಡಿಜಿಟಲ್ ಮಾಧ್ಯಮದಲ್ಲಿ ಕಂಟೆಟ್ ಕ್ರಿಯೇಟ್ ಮಾಡಲು ಮುಕ್ತ ಅವಕಾಶವಿರುವುದರಿಂದ ಸಾಮಾನ್ಯ ಜನರಲ್ಲಿಯೂ ಸೃಜನಶೀಲತೆ ಹೆಚ್ಚಾಗಿದೆ, ಡಿಜಿಟಲ್ ಮಾಧ್ಯಮದ ಸಾರ್ವತ್ರಿಕ ಶೇರ್ ಬಟನ್‌ನಿಂದ ಗ್ರಾಹಕರೇ ವಿತರಕರಾಗಿದ್ದಾರೆ ಎಂದರು.

ಹರ್ಷ ಆಫೀಸರ್ಸ್ ಅಕಾಡೆಮಿ ಸಂಸ್ಥಾಪಕ  ಹರ್ಷ ಆರ್ ಕುರುಬರಹಳ್ಳಿ ಮಾತನಾಡಿ ಡಿಜಿಟಲ್ ಮಾಧ್ಯಮಗಳು ಹೊಸ ಅವಕಾಶ ಸೃಷ್ಠಿಗೆ ವೇದಿಕೆಯಾಗಿವೆ. ಉದ್ಯಮ ಕಟ್ಟಲು ಮತ್ತು ಅದನ್ನು ವೇಗವಾಗಿ ಬೆಳೆಸಲು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇವುಗಳನ್ನು ಬಳಸಿಕೊಂಡು ಹೊಸ ಕಾಲದ ಸಮಸ್ಯೆಗೆ ಹೊಸ ಪರಿಹಾರ ಹುಡುಕಬೇಕು. ಆ ಕುರಿತು ಜನಾಭಿಪ್ರಾಯ ರೂಪಿಸಬೇಕು ಎಂದರು

1003285083

ಸಂಪನ್ಮೂಲ ವ್ಯಕ್ತಿ ಚಂದನ್ ಡಿ. ಎನ್ ಮಾತನಾಡಿ  ಕೈಯ್ಯಲ್ಲಿ ಮೊಬೈಲ್ ಫೋನ್ ಇರುವ ಪ್ರತಿಯೊಬ್ಬರೂ ಸುದ್ದಿಯನ್ನು, ಮಾಹಿತಿಯನ್ನು, ಅನಿಸಿಕೆಯನ್ನು ಬರೆಯಬಹುದು; ಮಾತಾಡಬಹುದು ಮತ್ತು ಅವರೇ ಅದನ್ನು ಪ್ರಸಾರ ಸಹಾ ಮಾಡಬಹುದು. ಇದೇ ಡಿಜಿಟಲ್ ಮೀಡಿಯಾದ ಸಾಧ್ಯತೆ. ಆದರೆ, ಅವನ್ನು ವ್ಯವಸ್ಥಿತವಾಗಿ, ಯೋಜಿತವಾಗಿ ಮತ್ತು ವೃತ್ತಿಪರವಾಗಿ ಮಾಡಲು ಸಂಘಟಿತರಾಗಬೇಕು ಎಂದರು

1003285082

ಲೋಕಲ್ ಮತ್ತು ಹೈಪರ್ ಲೋಕಲ್ ಕಂಟೆಟ್ ಕ್ರೀಯೆಟ್ ಮಾಡಲು ಡಿಜಿಟಲ್ ಮಾಧ್ಯಮದಲ್ಲಿ ಹೆಚ್ಚು ಅವಕಾಶಗಳಿವೆ, ಇದನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುವ ಮೂಲಕ ಸಾಮಾನ್ಯ ಜನರ ಜೊತೆ ಸಂಪರ್ಕ ಗಟ್ಟಿಗೊಳಿಸಿಕೊಳ್ಳಬೇಕು ಎಂದರು

 ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೊ. ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್.ಬಿ, ಪ್ರಾಧ್ಯಾಪಕರಾದ ಡಾ.ಮಂಜುನಾಥ್ ಬುಡಸನಹಳ್ಳಿ, ಡಾ.ಲೀಲಾವತಿ, ಡಾ.ರಂಜಿತಾ, ವೇದಲಕ್ಷ್ಮೀ, ಡಾ.ಶ್ರೀನಿವಾಸಪ್ಪ, ಮುರುಳಿಧರ್, ಡಾ.ದುರ್ಗಪ್ಪ, ರಾಮಮೂರ್ತಿ, ನಟರಾಜ್, ಭಾರ್ಗವಿ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...