ಮಧುಗಿರಿ | ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Date:

ವಾಣಿಜ್ಯ ಶಾಸ್ತ್ರ ಕ್ಷೇತ್ರವು ಇಂದಿನ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ. ಬಿ.ಕಾಂ ಪದವೀಧರರಿಗೆ ಬ್ಯಾಂಕಿಂಗ್, ವಿಮೆ, ತೆರಿಗೆ, ಲೆಕ್ಕಪತ್ರ, ಹಣಕಾಸು ನಿರ್ವಹಣೆ, ಮಾರುಕಟ್ಟೆ, ಮಾನವ ಸಂಪನ್ಮೂಲ ನಿರ್ವಹಣೆ ಹಾಗೂ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವಿಪುಲ ಅವಕಾಶಗಳು ಲಭ್ಯವಿದ್ದು, ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕುಮಾರ್ ಕೆ.ಎಸ್ ಕರೆ ನೀಡಿದರು.

- Advertisement -

ಅವರು ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಜೀವನದ ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು, ಕಾಲೇಜಿನಲ್ಲಿ ಪಡೆದ ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯುವಂತೆ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪ್ರಾಸ್ತಾವಿಕ ನುಡಿಗಳನ್ನಾಡಿದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರಂಜಿತಾ ಬಿ.ಆರ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಸಾಂಪ್ರಾದಾಯಿಕ ಉದ್ಯೋಗಗಳಿಗೆ ಮಾತ್ರ ಸೀಮಿತವಾಗದೆ ಆಧುನಿಕ ಮತ್ತು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಡಿಜಿಟಲ್ ಮಾರ್ಕೆಟಿಂಗ್,ಫಿನ್‌ಟೆಕ್ ಕ್ಷೇತ್ರ,ಡೇಟಾ ಅನಾಲಿಟಿಕ್ಸ್,

ಇ-ಕಾಮರ್ಸ್, ಸ್ಟಾಕ್ ಮಾರ್ಕೆಟ್ ಮತ್ತು ಹೂಡಿಕೆ ಸಲಹೆಗಾರಿಕೆ ಫೈನಾನ್ಷಿಯಲ್ ಪ್ಲಾನಿಂಗ್  ಅಂತರರಾಷ್ಟ್ರೀಯ ವ್ಯವಹಾರ ಕ್ಷೇತ್ರಗಳಲ್ಲೂ ಅಪಾರ ಪಾಂಡಿತ್ಯವನ್ನು ಪಡೆದು ತಮ್ಮ ಛಾಪನ್ನು ಮೂಡಿಸಬೇಕು ಎಂದರು‌.

1003442128

ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಲೀಲಾವತಿ ಎಚ್ ಮಾತನಾಡುತ್ತ ವಾಣಿಜ್ಯ ಶಿಕ್ಷಣವು ಉದ್ಯೋಗ ಪಡೆಯುವ ದಾರಿಯನ್ನು ಮಾತ್ರವಲ್ಲ, ಉದ್ಯೋಗ ಸೃಷ್ಟಿಸುವ ಸಾಮರ್ಥ್ಯವನ್ನೂ ನೀಡುತ್ತದೆ. ಜ್ಞಾನ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಂಡು ವಿಶ್ವದಾದ್ಯಂತವಿರುವ ವಿಪುಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಪ್ರೊ.ವೇದಲಕ್ಷ್ಮೀ, ಡಾ.ಗೋವಿಂದರಾಯ, ವ್ಯವಸ್ಥಾಪಕಿ ಚಂದ್ರಕಲಾ, ಮಂಜುನಾಥ್ ಬಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ದುರ್ಗಪ್ಪ, ಮುರುಳಿಧರ್, ಡಾ.ಮಂಜುನಾಥ್ ಬುಡಸನಹಳ್ಳಿ, ಡಾ.ನಾಗರಾಜು, ಡಾ.ಶ್ರೀನಿವಾಸಪ್ಪ, ರಾಮಮೂರ್ತಿ, ನಟರಾಜು, ಡಾ.ನಂದಿನಿ, ಭಾರ್ಗವಿ, ಮಂಜುನಾಥ್, ಆನಂದ್,ನಾಗೇಂದ್ರ, ವೀರದಿಮ್ಮಪ್ಪ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಈ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಯ ಮಾರ್ಗದರ್ಶನವನ್ನು ಸ್ಮರಿಸಿದರು. ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಬೀಳ್ಕೊಡುಗೆ ಸಮಾರಂಭವು ಸೌಹಾರ್ದಯುತವಾಗಿ ನೆರವೇರಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...