ಮಧುಗಿರಿ | ಲಂಚಕ್ಕೆ ಮೂಲಂಗಿ ನೀಡಲು ತಂದ ರೈತ : ತಾಲೂಕು ಕಚೇರಿ ಮುಂದೆ ಏಕಾಂಗಿ ಹೋರಾಟ

Date:

ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಬಂದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
1002786841

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಜಕ್ಕೇನಹಳ್ಳಿಯ ರೈತ ಪ್ರಸನ್ನಕುಮಾರ್ ರವರಿಗೆ ಈ ಸ್ಥಿತಿ ಬಂದಿದ್ದು ಇಂದು ತಾಲೂಕು ಕಚೇರಿಯ ಮುಂದೆ ಮೈಕ್ ಹಿಡಿದು ನನಗೆ ಲಂಚ ನೀಡಲು ಹಣವಿಲ್ಲ. ಬದಲಿಗೆ ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಬನ್ನಿ ಎಂದು ಘೋಷಣೆ ಕೂಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಏನಿದು ಪ್ರಕರಣ :

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯ ರೈತ  ಇರುವ ಸ.ನಂ. 8/1 ಜಮೀನಿನಲ್ಲೇ ತರಕಾರಿ ಇತರೆ ವ್ಯವಸಾಯೋತ್ಪನ್ನವನ್ನು ಬೆಳೆದು ಜೀವನ ನಡೆಸುತ್ತಾನೆ. ಆದರೆ ಈತನ ಜಮೀನಿಗೆ ರಸ್ತೆಯಿಲ್ಲದ ಕಾರಣ ರಸ್ತೆಗಾಗಿ 2 ವರ್ಷದ ಹಿಂದೆ ತಾಲೂಕು ಆಡಳಿತಕ್ಕೆ ಮನವಿ ನೀಡಿದ್ದಾರೆ. ಇತ್ತ ದಾರಿ ಒತ್ತುವರಿ ಬಿಡಿಸಿಕೊಡದೆ ಅತ್ತ ಹೊಸ ದಾರಿ ಮಾಡಿಕೊಡದೆ ನನ್ನ ಮನವಿಗೆ ಕಿವಿಗೊಡದ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ ಲೋಕಾಯುಕ್ತ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಇದರಿಂದ ರೈತನ ಜಮೀನಿಗೆ ಕಾನೂನು ಬದ್ಧವಾಗಿ 1 ತಿಂಗಳಲ್ಲಿ ರಸ್ತೆ ನಿರ್ಮಿಸಿಕೊಡಲು ಸೂಚಿಸಿತ್ತು. ಈಗ 2 ತಿಂಗಳಾದರೂ ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಕಾನೂನು ಬದ್ಧ ಪರಿಶೀಲನೆಗೆ ಬರಲು ಕೆಲವು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದು ಹಣವಿಲ್ಲದ ರೈತ ಪ್ರಸನ್ನಕುಮಾರ್ ಅಧಿಕಾರಿಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿದ್ದು ವಿಧಿಯಿಲ್ಲದೆ ತಹಶೀಲ್ದಾ‌ರ್ ಬಳಿಯಲ್ಲೂ ಮನವಿ ಮಾಡಿದ್ದಾಗ ರಸ್ತೆ ಮಾಡಿಕೊಡಲು ಸೂಚಿಸಿದ್ದರು. ಆದರೂ ಇಲ್ಲಿಯವರೆಗೂ ರಸ್ತೆ ನಿರ್ಮಾಣಕ್ಕೆ ಬಾರದ ಹಣಕ್ಕಾಗಿ ಸತಾಯಿಸಿದ್ದ ಕಂದಾಯಾಧಿಕಾರಿ ಹಾಗೂ ಶಿವನಗೆರೆ ಗ್ರಾಮಲೆಕ್ಕಿಗರ ಮೇಲೆ ಇಂದು ಆಡಳಿತ ಕಚೇರಿಯ ಮುಂದೆ ಮೈಕ್ ಹಿಡಿದು ಲಂಚ ನೀಡಲು ಹಣವಿಲ್ಲ. ಹಾಗಾಗಿ ಬೆಳೆದ ಮೂಲಂಗಿ ನೀಡುವುದಾಗಿ ಕೂಗಿದ್ದು ಅಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದರು.

1002786842

ವಾರದಲ್ಲಿ ಸಮಸ್ಯೆ ಈಡೇರಿಸದಿದ್ದರೆ ಆತ್ಮಹತ್ಯೆ  :

ಜಮೀನಿಗೆ ರಸ್ತೆ ಲಂಚಕೊಡಲು ಹಣವಿಲ್ಲದೆ ತಾನು ಬೆಳೆದ ಮೂಲಂಗಿ ನೀಡಲು ನಾನು ಬಂದಿದ್ದೇನೆ. ಅದೂ ಸಾಲದಿದ್ದರೆ ನನ್ನ ಮನೆ ಬರೆದು ಕೊಡ್ತೀನಿ ಇಲ್ಲ ನನಗೆ ತಹಶೀಲ್ದಾರ್ ಕೆಲಸ ಕೊಡಿ. ನನ್ನ ಅಸ್ತಿಯನ್ನೇ ಬರೆದು ಕೊಡ್ತೀನಿ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತಪ್ರಸನ್ನ ಕುಮಾ‌ರ್ ಈ ಬಗ್ಗೆ ಸಿಎಂ ಬಳಿಗೂ ಹೋಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಜಮೀನಿಗೆ ದಾರಿ ಬಿಡಿಸಿಕೊಡುವಂತೆ ಅದೇಶ ತಂದಿದ್ದೆ. ನಕಾಶೆಯಲ್ಲೂ ರಸ್ತೆಯಿದ್ದು ನನಗೆ ರಸ್ತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ನೀಡದಿದ್ದರೆ ವಾರದಲ್ಲಿ ಇದೇ ಕಚೇರಿಯಲ್ಲಿ ನೇಣು ಹಾಕಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

 ” ರೈತನ ಸಮಸ್ಯೆಗೆ ಕಂದಾಯ ಇಲಾಖೆ ಪರಿಹಾರ ನೀಡಲಿದೆ. ನಮ್ಮದು ಎಂದಿಗೂ ಪಾರದರ್ಶಕ ಕೆಲಸಕ್ಕೆ ಬೆಲೆ ನೀಡುವ ಇಲಾಖೆ, ಈ ರೈತನ ಬಗ್ಗೆ ತಿಳಿದಿದ್ದು ನಮ್ಮ ಅಧಿಕಾರಿಗಳ ತಪ್ಪಿದ್ದರೆ ಕಾನೂನು ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ಹಾಗೂ ನಕಾಶೆ ರಸ್ತೆಯಿದ್ದರೆ ವಾರದೊಳಗೆ ರಸ್ತೆ ನಿರ್ಮಿಸುವ ಕೆಲಸ ಮಾಡಿಕೊಡುತ್ತೇವೆ ಬಬ್ಬ ರೈತ ಈ ನಾಡಿನ ಅಸ್ತಿ, ಅವರು ಸಾಯುವ ಮಾತಾಡಬಾರದು ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾಹಿತಿ ನೀಡಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...