ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

Date:

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಧುಗಿರಿ ತಾಲ್ಲೂಕಿನ ಶ್ರಾವಂಡನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

- Advertisement -

ಮೃತರನ್ನು ಗ್ರಾಮದ ನಿವಾಸಿಗಳಾದ ಲಕ್ಷ್ಮಣನಾಯ್ಕ್ (52) ಮತ್ತು ಅವರ ಪತ್ನಿ ನಾಗಮ್ಮ (50) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ದಂಪತಿಯ ಅಡಿಕೆ ತೋಟದಲ್ಲಿ ಕೆಲಸ ಮಾಡಲು ಕೂಲಿ ಕಾರ್ಮಿಕರು ಬಂದಿದ್ದರು. ಅವರಿಗೆ ಕುಡಿಯಲು ನೀರು ತರಲು ನಾಗಮ್ಮ ಜಮೀನಿನಲ್ಲಿದ್ದ ಕೃಷಿ ಹೊಂಡದ ಸಮೀಪದ ಕೊಳವೆಬಾವಿಯಿಂದ ನೀರು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.

ಪತ್ನಿ ಬಹಳ ಹೊತ್ತಾದರೂ ವಾಪಸ್ ಬಾರದಿರುವುದನ್ನು ಗಮನಿಸಿದ ಲಕ್ಷ್ಮಣನಾಯ್ಕ್, ಕೃಷಿ ಹೊಂಡದ ಬಳಿ ತೆರಳಿದ್ದಾರೆ. ಈ ವೇಳೆ ಪತ್ನಿ ನೀರಿನಲ್ಲಿ ಮುಳುಗುತ್ತಿದ್ದುದನ್ನು ಕಂಡು ಆಕೆಯನ್ನು ರಕ್ಷಿಸಲು ಹೊಂಡಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ನಾಗಮ್ಮ ಪತಿಯನ್ನು ಬಿಗಿಯಾಗಿ ಹಿಡಿದುಕೊಂಡ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಗಮನಿಸಿದ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥ ಕಿರಣ್ ಅವರು ತಕ್ಷಣ ಹೊಂಡದಿಂದ ಇಬ್ಬರನ್ನೂ ಹೊರತೆಗೆದಿದ್ದಾರೆ. ಆದರೆ, ನಾಗಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ವಲ್ಪ ಉಸಿರಾಡುತ್ತಿದ್ದ ಲಕ್ಷ್ಮಣನಾಯ್ಕ್ ಅವರನ್ನು ತಕ್ಷಣ ಗೌರಿಬಿದನೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಸಾವಿನಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...