ಮಧುಗಿರಿ | ಕೃಷ್ಣಮೂರ್ತಿ ಜಿ.ಎನ್. ಅವರಿಗೆ ಪಿಎಚ್‌ಡಿ ಪದವಿ

Date:

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ಜಿ.ಎನ್. ಅವರು ಮಂಡಿಸಿದ “ಆ್ಯನ್ ಎಕನಾಮಿಕ್ ಅನಾಲಿಸಿಸ್ ಆಫ್ ಪ್ರೊಡಕ್ಷನ್ ಆ್ಯಂಡ್ ಮಾರ್ಕೆಟಿಂಗ್ ಆಫ್ ಕಾಂಟ್ರ್ಯಾಕ್ಟ್ ಫಾರ್ಮಿಂಗ್ ಆಫ್ ವೆಜಿಟೇಬಲ್ಸ್ ಅಂಡರ್ ಕಾಂಟ್ರ್ಯಾಕ್ಟ್ ಫಾರ್ಮಿಂಗ್ ಇನ್ ಕರ್ನಾಟಕ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

- Advertisement -

ಮಧುಗಿರಿ ತಾಲ್ಲೂಕಿನ ಗರಣಿ ಗ್ರಾಮದ ನಾರಾಯಣಪ್ಪ ಮತ್ತು ಭಾಗ್ಯಮ್ಮ ದಂಪತಿಯ ಪುತ್ರರಾದ ಕೃಷ್ಣಮೂರ್ತಿ ಅವರು ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೆ, 15ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ರಚಿಸಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಪ್ರಸ್ತುತ ಮಂಡ್ಯ ಜಿಲ್ಲೆಯ ಮದ್ದೂರಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ನಿಯೋಜನೆ ಮೇರೆಗೆ ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಿಎಚ್‌ಡಿ ಪದವಿ ಪಡೆದ ಕೃಷ್ಣಮೂರ್ತಿ ಅವರಿಗೆ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಮುನೀಂದ್ರಕುಮಾರ್ ಡಿ.ಎಸ್., ಪ್ರೊ. ದೊಡ್ಡಮಲ್ಲಯ್ಯ, ಗೌತಮಬುದ್ಧ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್, ರಾಜ್ಯ ಸರ್ಕಾರಿ ನೌಕರರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ರಂಗಪ್ಪ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ., ಪ್ರಾಧ್ಯಾಪಕರಾದ ಡಾ. ನಳಿನಿ ಎನ್.ಡಿ., ಡಾ. ಲೀಲಾವತಿ ಎಚ್., ಡಾ. ಮಂಜುನಾಥ್ ಬುಡಸನಹಳ್ಳಿ ಸೇರಿದಂತೆ ಗರಣಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...