ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ-ಪ್ರಾಧ್ಯಾಪಕರಾದ ಸಂಜೀವ ಮೂರ್ತಿ ಹೆಚ್ ಅವರು ಕೊಡಗು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಾದ ಡಾ.ಸುರೇಶ ಎಂ ಮಾರ್ಗದರ್ಶನದಲ್ಲಿ “ಯ್ಯಾನ್ ಎಕಾನಾಮಿಕ್ ಅನಾಲಿಸಿಸ್ ಆಫ್ ಇನ್ಕಮ್ ಅಂಡ್ ಎಂಪ್ಲಾಯಿಮೆಂಟ್ ಜನರೇಶನ್ ಥ್ರೂ ಡೈರಿ ಫಾರ್ಮಿಂಗ್ ಇನ್ ಕರ್ನಾಟಕ” ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ಸಂಜೀವಮೂರ್ತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ನಿವಾಸಿಗಳಾದ ದಿ.ವೆಂಕಟಮ್ಮ, ದಿ.ಹನುಮಂತಯ್ಯ ದಂಪತಿಗಳ ಮಗನಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ.
ಪಿಎಚ್.ಡಿ ಪಡೆದ ಇವರಿಗೆ ಮಂಡ್ಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಕೆ.ಶಿವಚಿತ್ತಪ್ಪ , ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ, ತುಮಕೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ತಿಪ್ಪೇಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕುಮಾರ್ ಕೆ.ಎಸ್, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.





