ಮಧುಗಿರಿ | ರೈತರ ಬಳಿಗೆ ಬಂದು ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Date:

ಜನಸಂಪರ್ಕ ಸಭೆ ನಡೆಸುತ್ತಿದ್ದ ಜಿಲ್ಲಾಧಿಕಾರಿ  ಶುಭಾಕಲ್ಯಾಣ್ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಕಾಯುತ್ತಿರುವ ವಿಚಾರ ತಿಳಿದು ಸಭೆಯಿಂದ ಹೊರನಡೆದು ರೈತರ ಬಳಿ ಬಂದು ಅವರ ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

- Advertisement -

ಮಧುಗಿರಿ  ತಾಲೂಕು ಕಚೇರಿಯಲ್ಲಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜೆ.ಸಿ.ಶಂಕರಪ್ಪ ಮಾತನಾಡಿ, ತಾಲೂಕಿನ ಹತ್ತಿ ಹಾಗೂ ಹುಣಸೆ ಬೆಳೆಗಾರರು ಹೆಚ್ಚು ನಷ್ಟವನ್ನು ಅನುಭವಿಸುತ್ತಿದ್ದಾರೆ. ಹತ್ತಿ ಬೆಳೆಯುವ ರೈತರಿಗೆ ಮಧ್ಯವರ್ತಿಗಳ ತಪ್ಪಿಸಲು ಮನವಿ ಮಾಡಿ, ಹುಣಸೆ ಬೆಳೆಗಾರರಿಗೆ ಸಹಕಾರ ಸಂಘ ಸ್ಥಾಪನೆ ಅಥವಾ ಸಂಸ್ಕರಣಾ ಘಟಕ ನಿರ್ಮಿಸಲು ಒತ್ತಾಯಿಸಿದರು. ಹಾಗೂ ಮಳೆಯ ಆಭಾವದಿಂದ ಶೇಂಗಾ, ಜೋಳ, ದ್ವಿದಳ ಧಾನ್ಯಗಳ ಉತ್ಪಾದನೆ ನಿಂತಿದ್ದು ಶೀಘ್ರ ಎತ್ತಿನಹೊಳೆ ನೀರು ಕರೆಗಳಿಗೆ ಹರಿಸಬೇಕೆಂದರು. ಕೊಳವೆ ಬಾವಿಯ ಆಕ್ರಮ-ಸಕ್ರಮ ಯೋಜನೆ ಮುಂದುವರಿಕೆ ಸೇರಿ 30 ವರ್ಷದಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ ಅರಣ್ಯ ಇಲಾಖೆಯ ಕಾಟ ತಪ್ಪಿಸಿ ದಾಖಲೆ ನೀಡಬೇಕು. ಕಂದಾಯ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಕೆಲಸಗಳು ಮಾತ್ರ ನಡೆಯುತ್ತಿದ್ದು ಭ್ರಷ್ಟಾಚಾರ ಮಿತಿಮೀರಿದೆ. ಹಾಗೂ ಗ್ರಾ.ಪಂ.ಗಳಲ್ಲಿ ನರೇಗಾ ಯೋಜನೆ ಹಳ್ಳಹಿಡಿದ ವಾಹನವಾಗಿದೆ ಎಂದರಲ್ಲದೆ ಕೊಳವೆ ಬಾವಿ ಕೊರೆಯುವ ಲಾರಿ ಮಾಲೀಕರಿಗೆ ನಿರ್ದಿಷ್ಟ ದರ ಪಡೆಯುವಂತೆ ಸೂಚಿಸಲು ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಸ್ವತ್ತು ಸಮಸ್ಯೆಗೆ ಶೀಘ್ರ ಪರಿಹಾರ ರೈತರ ಮನವಿ ಆಲಿಸಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ , ಈ ಭಾಗದ ಹುಣಸೆ ಬೆಳೆಗೆ ಸಂಸ್ಕರಣಾ ಘಟಕ ಇಲ್ಲದೆ ಸಹಕಾರ ಮಂಡಳಿಯನ್ನು ಸ್ಥಾಪಿಸಲು ಗಂಭೀರವಾಗಿ ಚಿಂತಿಸಿದ್ದೇವೆ. ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನ ತಂದು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಚರ್ಚಿಸುತ್ತೇನೆ.ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಹತ್ತಿ ಬೆಳೆಗಾರರಿಗೆ ಕಂಪನಿಯವರಿಂದ ತೊಂದರೆಯಾಗದಂತೆ ಕ್ರಮವಹಿಸುತ್ತೇನೆ ಕೊಳವೆ ಬಾವಿ ಕೊರೆಯುವಲ್ಲಿ ರೈತರಿಗೆ ನ್ಯಾಯ ಕೊಡಿಸುತ್ತೇವೆ ಎತ್ತಿನಹೊಳೆ ಯೋಜನೆ ತ್ವಂತವಾಗಿ ನಡೆಯುತ್ತಿದ್ದು ಶೀಘ್ರವಾಗಿ ಕರೆಗಳಿಗೆ ನೀರು ಹರಿಯುತ್ತದೆ. ಕಂದಾಯ ಇಲಾಖೆಯ ವಿಳಂಬಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇ-ಸ್ವತ್ತು ಸಮಸ್ಯೆಗೆ ಆನ್ ಲೈನ್ ಸಮಸ್ಯೆಯಿದ್ದು ಹಂತ ಹಂತವಾಗಿ ಬಗೆಹರಿಯಲಿದೆ.

ಈ ಸಂದರ್ಭದಲ್ಲಿ ಎಸಿ ಗೊಟೂರು ಶಿವಪ್ಪ ತಹಶೀಲ್ದಾರ್  ಶ್ರೀನಿವಾಸ್ , ಇಓ ಲಕ್ಷ್ಮಣ್, ರೈತ ಸಂಘದ ರಾಜ್ಯ ವಿಭಾಗೀಯ ಕಾರ್ಯದರ್ಶಿ ದೊಡ್ಡಮಾಳಯ್ಯ, ಮಹಿಳಾಧ್ಯಕ್ಷೆ ನಾಗರತ್ನಮ್ಮ, ನಾಗರಾಜು, ನರಸಿಂಹಮೂರ್ತಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಸಂಜೀವ ಮೂರ್ತಿಗೆ ಪಿಎಚ್.ಡಿ ಪ್ರದಾನ

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ...

ಮಧುಗಿರಿ | ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ವಾಣಿಜ್ಯ ಶಾಸ್ತ್ರ ಕ್ಷೇತ್ರವು ಇಂದಿನ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ...

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು...

ತುಮಕೂರು | ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಯತ್ನ : ಡಿಸಿಎಂ ಡಾ. ಜಿ. ಪರಮೇಶ್ವರ್

ಕೆ. ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೆ ಪ್ರಯತ್ನಪಡುತ್ತಿದ್ದೇವೆ ಎಂದು...