ಮಧುಗಿರಿ | ಯುವಪೀಳಿಗೆ ದೇಶದ ಭವಿಷ್ಯ : ಶಾಸಕ ಕೆ.ಎನ್.ರಾಜಣ್ಣ

Date:

 ಯುವ ಸಮೂಹ ಶಿಕ್ಷಣದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ದೇಶದ ಉಜ್ವಲ ಭವಿಷ್ಯ ನಿರ್ಮಾತೃಗಳಾಗಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕ – ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ರಾಜ್ಯದ ಆರ್ಥಿಕ ಬಜೆಟ್ ಅಧಿವೇಶನ ಮೇಲಿನ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗಳ ಚರ್ಚೆಯ ಕಲಾಪ ವೀಕ್ಷಿಸಲು ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಕಾರ್ಯವೈಖರಿಯನ್ನು ನೇರವಾಗಿ ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಕಲಾಪ ವೀಕ್ಷಣೆ ಜ್ಞಾನವರ್ಧನೆಗೆ ಸಹಕಾರಿಯಾಗಲಿದೆ, ಸಮಾಜದ ಸಮಸ್ಯೆಗಳ ಅರಿವು ಹೊಂದಿ ಪ್ರಶ್ನೆಗಳನ್ನು ಕೇಳುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಯಾವುದೇ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು, ಉದ್ಯೋಗ ಆಧಾರಿತ ಶಿಕ್ಷಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಟಿಟಿಸಿ ಸ್ಥಾಪನೆ, ನಿರುದ್ಯೋಗಿ ಯುವಕ ಯುವತಿಯರಿಗಾಗಿ ಉದ್ಯೋಗ ಮೇಳ, ಉತ್ತಮವಾದ ಸಾರಿಗೆ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ದಕ್ಷತೆಯಿಂದ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತಮ ನಾಗರೀಕರಾಗಿ ಮಾದರಿ ಜೀವನವನ್ನು ಕಟ್ಟಿಕೊಳ್ಳಬೇಕು ಎಂದರು.

ಕಲಾಪಗಳನ್ನು ನೇರವಾಗಿ ವೀಕ್ಷಿಸಿ ಮಾತನಾಡಿದ ವಿದ್ಯಾರ್ಥಿಗಳು ಇಲ್ಲಿಯವರೆಗೂ ಕೇವಲ ಪುಸ್ತಕಗಳಲ್ಲಿ ಅಡಕವಾಗಿರುವ ಜ್ಞಾನದ ಆಧಾರದ ಮೇಲೆ ಕಲ್ಪನೆ ಮಾಡಿಕೊಳ್ಳುತ್ತಿದ್ದೇವು, ಕಲಾಪಗಳ ನೇರ ವೀಕ್ಷಣೆಯಿಂದಾಗಿ  ವಾಸ್ತಾವಿಕವಾಗಿ ಹೇಗೆ ಕಾರ್ಯನಿರ್ವಹಣೆ ಮಾಡುತ್ತವೆ ಎಂದು ತಿಳಿಯಲು ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.ವಿಧಾನ ಪರಿಷತ್ ಸದಸ್ಯ ರಾಜೇಂದ್ರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಮತ್ತು ನೆನಪಿನ ಕಾಣಿಕೆಯನ್ನು ವ್ಯವಸ್ಥೆ ಮಾಡಿದ್ದರು.

ಕಾಲೇಜಿನ 170 ವಿದ್ಯಾರ್ಥಿಗಳು ಹಾಗೂ 14 ಜನ ಬೋಧಕ ಸಿಬ್ಬಂದಿ ಕಲಾಪ ವೀಕ್ಷಣೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಶ್ಮಿ ರಾಜಣ್ಣ, ಯುವ ಮುಖಂಡ ಹರ್ಷ ಕುರುಬರಹಳ್ಳಿ, ಪ್ರಾಂಶುಪಾಲರಾದ ಪ್ರೊ.ಕುಮಾರ್.ಕೆ.ಎಸ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್,  ಪ್ರಾಧ್ಯಾಪಕರಾದ ಡಾ.ರಂಜಿತಾ ಬಿ.ಆರ್, ಡಾ.ನಾಗರಾಜು ಎಂ.ಎಸ್, ಡಾ.ದುರ್ಗಪ್ಪ, ಡಾ.ಲತಾ, ಡಾ.ಲೀಲಾವತಿ, ಸಂಜೀವ ಮೂರ್ತಿ, ರಾಮಮೂರ್ತಿ, ಡಾ.ಮಂಜುನಾಥ್ ಬುಡಸನಹಳ್ಳಿ, ಮುರುಳಿಧರ್,ಪತ್ರಾಂಕಿತ ವ್ಯವಸ್ಥಾಪಕಿ ಚಂದ್ರಕಲಾ,ರಂಗಸ್ವಾಮಯ್ಯ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಬೀದಿ ನಾಯಿಗಳ ದಾಳಿಗೆ 30 ಕುರಿಗಳು ಬಲಿ ; ರೈತ ಶನಿವಾರಪ್ಪಗೆ ಭಾರಿ ನಷ್ಟ

ಮಧುಗಿರಿ ತಾಲೂಕಿನ ಕೊಡಗೆನಹಳ್ಳಿ ಸಮೀಪದ ಸಿಂಗನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಿಂಡು...

ಮಧುಗಿರಿ | ಸಂಜೀವ ಮೂರ್ತಿಗೆ ಪಿಎಚ್.ಡಿ ಪ್ರದಾನ

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ...

ಮಧುಗಿರಿ | ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ವಾಣಿಜ್ಯ ಶಾಸ್ತ್ರ ಕ್ಷೇತ್ರವು ಇಂದಿನ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ...

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು...