ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಡ್ಡಿ: ಮುರಳಿಧರ ಹಾಲಪ್ಪ ಆರೋಪ

Date:

ಕೇಂದ್ರ ಸರ್ಕಾರ ಕಾರ್ಪೊರೇಟ್‌ ಸಂಸ್ಥೆಗಳಿಗೆ, ಅಂಬಾನಿ, ಅದಾನಿಗಳಿಗೆ ಸಾವಿರಾರು ಎಕರೆ ಜಮೀನು ನೀಡಿದೆ. ಆದರೆ ಸಣ್ಣಪುಟ್ಟ ತಪ್ಪುಗಳನ್ನು ಎತ್ತಿ ಹಿಡಿದು ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ ಬಿ ಕ್ರಾಸ್ ಬಳಿ ಹಾದುಹೋಗುವ ಎತ್ತಿನಹೊಳೆ ಯೋಜನೆ ನಾಲಾ ಕಾಮಗಾರಿ ಸ್ಥಳದಲ್ಲಿ ನಡೆದ ಆಂದೋಲನ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“2014ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅಲ್ಲಿಂದ ಈವರೆಗೆ ₹23 ಸಾವಿರ ಕೋಟಿ ಖರ್ಚಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ. ಸಂಪೂರ್ಣ ಕಾಮಗಾರಿಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಹೊತ್ತಿದೆ. ಈ ಯೋಜನೆ ಪೂರ್ಣಗೊಂಡರೆ ಚಿಕ್ಕಮಗಳೂರು, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ರೈತರ ಬದುಕು ಹಸನಾಗುವುದರ ಜತೆಗೆ ಅಂತರ್ಜಲ ವೃದ್ಧಿಗೂ ಸಹಕಾರಿಯಾಗುತ್ತದೆ” ಎಂದು ಹೇಳಿದರು.

“ಕಾಮಗಾರಿ ಶೇ.90ರಷ್ಟು ಮುಗಿಯುವ ಹಂತ ತಲುಪುವ ಮಟ್ಟಕ್ಕೆ ಬಂದಾಗ ಅರಣ್ಯ ಮತ್ತು ಪರಿಸರ ಇಲಾಖೆ ತಕರಾರು ತೆಗೆದು ನಾಲೆ ಪಕ್ಕ ಹೆಚ್ಚುವರಿಯಾಗಿ ಜಾಗ ತೆಗೆದುಕೊಂಡಿದ್ದೀರ ಎಂದು 11 ಪ್ರಶ್ನೆಗಳನ್ನು ಕೇಳಿದೆ. ನವೆಂಬರ್‌ನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರನ್ನು ಬೇಟಿ ಮಾಡಿ ಯೋಜನೆಯಿಂದ 76 ಲಕ್ಷ ಜನರಿಗೆ ಅನುಕೂಲವಾಗುತ್ತದೆಂದು ಮನವರಿಕೆ ಮಾಡಿದಾಗ ತೊಡಕು ನಿವಾರಣೆಯ ಭರವಸೆ ನೀಡಿದ್ದರು. ಆದರೆ ಈಗ ಯಾವುದೇ ಬೆಳವಣಿಗೆಯೂ ಕಾಣುತ್ತಿಲ್ಲ. ಜಿಲ್ಲೆಯ ಸಚಿವರು, ಜನಪ್ರತಿನಿಧಿಗಳನ್ನು ಆಹ್ವಾನಿಸಿ ಲಕ್ಷಾಂತರ ಜನರನ್ನು ಸೇರಿಸಿ ಜನಾಂದೋಲನ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಬಿ ಲಕ್ಕಪ್ಪ ಮಾತನಾಡಿ, “ಎತ್ತಿನಹೊಳೆ ನೀರು ಹರಿದರೆ ಕೆರೆಗಳು ತುಂಬಿ ಅಂತರ್ಜಲ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೊಡ್ಡ ಮನಸ್ಸು ಮಾಡಿ ಸಣ್ಣಪುಟ್ಟ ಲೋಪಗಳನ್ನ ಎತ್ತಿ ಹಿಡಿಯಬಾರದು. ನೀರಿಗಾಗಿ ಹೋರಾಟಕ್ಕೆ ಸಿದ್ಧ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟಗಾರರ ಬಿಡುಗಡೆಗೆ ಎಸ್‌ಯುಸಿಐ ಆಗ್ರಹ

ಮಾಜಿ ಶಾಸಕ ಗಂಗಹನುಮಯ್ಯ, ತಾಲೂಕು ಅಧ್ಯಕ್ಷ ಪಿ ಟಿ ಚಿಕ್ಕಣ್ಣ, ಕಾಂತರಾಜು, ವೆಂಕಟೇಶ್, ಶಂಕರಪ್ಪ, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಜಯರಾಂ, ಸಾವಯುವ ಕೃಷಿಕ ತರಬೇನಹಳ್ಳಿ ಷಡಾಕ್ಷರಿ, ದೇವರಾಜು, ನಾಗರಾಜು, ಲಕ್ಷ್ಮೀದೇವಮ್ಮ, ಪ್ರಸನ್ನಕುಮಾರ್, ಭಾಗ್ಯಮ್ಮ, ರಾಧಮ್ಮ, ಸುಕನ್ಯಾ, ಆದಿಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...