ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

Date:

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ ತೇಲುವ ಸಂಗೀತ ಕಾರಂಜಿ ಅಳವಡಿಕೆ ಹಾಗೂ ಶ್ರೀ ಶಿವಕುಮಾರಸ್ವಾಮಿ ವೃತ್ತದಲ್ಲಿ ‘ತುಮಕೂರು ಸ್ಕ್ವೇರ್’ ನಿರ್ಮಾಣ ಸೇರಿದಂತೆ ಎರಡು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.

- Advertisement -

ನಗರದ ಅಮಾನಿಕೆರೆಯಲ್ಲಿ ಶುಕ್ರವಾರ ತೇಲುವ ಸಂಗೀತ ಕಾರಂಜಿ ಹಾಗೂ ತುಮಕೂರು ಸ್ಕ್ವೇರ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಗಳನ್ನು ಕೇವಲ ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿಲ್ಲ. ಇವು ನಗರವಾಸಿಗಳಿಗೆ ಮನರಂಜನೆ ಒದಗಿಸುವುದರ ಜೊತೆಗೆ ತುಮಕೂರು ನಗರದ ಸೌಂದರ್ಯವನ್ನು ಹೆಚ್ಚಿಸಲಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಅಮಾನಿಕೆರೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಸಂಗೀತ ಕಾರಂಜಿ ಕಾರ್ಯಾಚರಿಸುವಂತೆ ಯೋಜನೆ ರೂಪಿಸಲಾಗಿದೆ. ಕಾರಂಜಿಯು 100 ಮೀಟರ್‌ಗೂ ಹೆಚ್ಚು ಎತ್ತರಕ್ಕೆ ಚಿಮ್ಮಲಿದ್ದು, ಸುಮಾರು 300 ಅಡಿ ವಿಸ್ತೀರ್ಣದಲ್ಲಿ ಪ್ರದರ್ಶನ ನೀಡಲಿದೆ. ಇದು ಸಾರ್ವಜನಿಕರಿಗೆ ಕಣ್ಮನ ಸೆಳೆಯುವ ದೃಶ್ಯವಾಗಲಿದೆ ಎಂದು ಹೇಳಿದರು.

ವಿದೇಶಗಳ ಪ್ರಮುಖ ನಗರಗಳಲ್ಲಿ ಜನಾಕರ್ಷಣೆಯ ಕೇಂದ್ರಗಳಾಗಿ ನಿರ್ಮಿಸಿರುವ ಸ್ಕ್ವೇರ್‌ಗಳ ಮಾದರಿಯಲ್ಲಿ ತುಮಕೂರಿನಲ್ಲಿಯೂ ‘ತುಮಕೂರು ಸ್ಕ್ವೇರ್’ ನಿರ್ಮಿಸಲಾಗುತ್ತಿದೆ. ಸುಮಾರು ₹7 ಕೋಟಿ ವೆಚ್ಚದಲ್ಲಿ ಶ್ರೀ ಶಿವಕುಮಾರಸ್ವಾಮಿ ವೃತ್ತದಲ್ಲಿ ಬೃಹತ್ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ಬೋರ್ಡ್ ಅಳವಡಿಸಲಾಗುವುದು ಎಂದರು

ಶ್ರೀ ಶಿವಕುಮಾರಸ್ವಾಮಿ ವೃತ್ತದ ಹೆಸರನ್ನು ಬದಲಾಯಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಎಸ್‌ಎಸ್ ಸರ್ಕಲ್ ಎಂಬ ಹೆಸರು ಹಾಗೆಯೇ ಮುಂದುವರಿಯಲಿದೆ. ಆದರೆ ವೃತ್ತದಲ್ಲಿ ನಾಲ್ಕೂ ದಿಕ್ಕುಗಳಿಂದ ಕಾಣುವಂತೆ ‘ತುಮಕೂರು ಸ್ಕ್ವೇರ್’ ಹೆಸರಿನ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ವ್ಯವಸ್ಥೆ ಅಳವಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಡಿಸ್‌ಪ್ಲೇ ಬೋರ್ಡ್‌ನಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳು, ತುಮಕೂರಿನ ಐತಿಹಾಸಿಕ ಮಹತ್ವ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು, ದೇವಸ್ಥಾನಗಳು ಹಾಗೂ ಜಿಲ್ಲೆಯ ಸಂಸ್ಕೃತಿಯನ್ನು ಪ್ರದರ್ಶಿಸಲಾಗುವುದು. ಮನರಂಜನಾ ಕಾರ್ಯಕ್ರಮಗಳಿಗೂ ಇದನ್ನು ಬಳಸಿಕೊಳ್ಳಲಾಗುವುದು. ಇದರಿಂದ ತುಮಕೂರಿನ ಜನರಿಗೆ ದೂರದ ಊರುಗಳ ಪ್ರಮುಖ ಸ್ಥಳಗಳ ಪರಿಚಯವೂ ದೊರೆಯಲಿದೆ ಎಂದರು.

ಸುಮಾರು 23 ಲಕ್ಷ ಪಿಂಚಣಿದಾರರ ಪಿಂಚಣಿ ಸ್ಥಗಿತಗೊಳಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಾ.ಜಿ. ಪರಮೇಶ್ವರ, ರಾಜ್ಯ ಸರ್ಕಾರವು ಪಿಂಚಣಿ ಪಡೆಯಲು ಇದ್ದ ಗರಿಷ್ಠ ಆದಾಯ ಮಿತಿಯನ್ನು ₹33 ಸಾವಿರದಿಂದ ₹1.20 ಲಕ್ಷಕ್ಕೆ ಏರಿಕೆ ಮಾಡಿದೆ ಎಂದರು.

ಪಿಂಚಣಿ ಸ್ಥಗಿತಗೊಂಡಿರುವ ಅರ್ಹ ಪಿಂಚಣಿದಾರರು ಸೂಕ್ತ ವಯಸ್ಸಿನ ದೃಢೀಕರಣ ಪತ್ರ, ಆದಾಯ ಪ್ರಮಾಣಪತ್ರ ಹಾಗೂ ವಿಳಾಸ ಪ್ರಮಾಣಪತ್ರಗಳನ್ನು ಸಲ್ಲಿಸಿದರೆ ಪಿಂಚಣಿ ಮುಂದುವರಿಸಲಾಗುವುದು. ವಯೋಮಿತಿ ಪೂರೈಸದವರು, ಆದಾಯ ತೆರಿಗೆ ಪಾವತಿಸುವವರು ಹಾಗೂ ಸರ್ಕಾರಿ ನೌಕರರು ಪಿಂಚಣಿ ಪಡೆಯುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಾಲಿಕೆ ಆಯುಕ್ತೆ ಶುಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...