ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

Date:

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಕ್ಸಲ್ ಎಂದು ಹೇಳಲಾಗುತ್ತಿರುವ ಉಪ್ಪಾರ ವೆಂಕಟೇಶ್ ಎಂಬಾತನನ್ನು ಜಿಲ್ಲಾ ಪೊಲೀಸ್ ತಂಡ ಬಂಧಿಸಿದೆ.

- Advertisement -

ತಾಲ್ಲೂಕಿನ ಕಸಬಾ ಹೋಬಳಿ ಕಡಮಲಕುಂಟೆ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಈ ಹಿಂದೆ ತಾಲ್ಲೂಕಿನ ಕನಿಕಲಬಂಡೆ ಗ್ರಾಮದ ರೈತ ಕರಿಯಣ್ಣ ಅವರ ಹೊಲದಲ್ಲಿರುವ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಲಾಗಿತ್ತು ಎನ್ನಲಾಗಿದೆ. ಅಲ್ಲದೆ, ‘ಸಿಪಿಐ (ಮಾವೋವಾದಿ) ಹಾಗೂ ಸಿಪಿಎಂ ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿ ದೇವಣ್ಣ ದಳಂ’ ಹೆಸರಿನಲ್ಲಿ ರೈತನಿಗೆ ಪತ್ರ ಬರೆದು ₹5 ಲಕ್ಷ ನೀಡಬೇಕು. ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗಳಿಂದ ಕನಿಕಲಬಂಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.

ಎಎಸ್ಪಿ ಗೋಪಾಲ್ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ತಂಡ ಭಾನುವಾರದಿಂದ ತೀವ್ರ ಪತ್ತೆ ಕಾರ್ಯಾಚರಣೆ ನಡೆಸುತ್ತಿತ್ತು. ಮಂಗಳವಾರ ರಾತ್ರಿ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಧುಗಿರಿ ಡಿವೈಎಸ್ಪಿ ಮಂಜುನಾಥ, ಪಾವಗಡ ವೃತ್ತ ನಿರೀಕ್ಷಕ ಸುರೇಶ್, ಕೊಟ್ರೇಶ್, ಮಧುಗಿರಿ ಸಿಪಿಐ ಹನುಮಂತರಾಯಪ್ಪ, ಸಬ್ ಇನ್ಸ್‌ಪೆಕ್ಟರ್ ಸುನೀಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಡಮಲಕುಂಟೆ ಬೆಟ್ಟದ ತಪ್ಪಲಿನಲ್ಲಿ ಕಾರ್ಯಾಚರಣೆ ನಡೆಸಿ ಉಪ್ಪಾರ ವೆಂಕಟೇಶ್‌ನನ್ನು ಬಂಧಿಸಿದ್ದಾರೆ.

ಆರೋಪಿಯ ಬಂಧನದಿಂದ ಕನಿಕಲಬಂಡೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ವೆಂಕಟೇಶ್ ತಾನು ನಕ್ಸಲ್ ಸಂಘಟನೆಗೆ ಸೇರಿದವನೆಂದು ಹೇಳಿಕೊಂಡು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದನೇ ಅಥವಾ ಆತನಿಗೆ ನಿಜವಾಗಿಯೂ ಯಾವುದೇ ನಕ್ಸಲ್ ಸಂಘಟನೆಯೊಂದಿಗೆ ಸಂಪರ್ಕವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆರೋಪಿಯ ವಿಚಾರಣೆ ಹಾಗೂ ತನಿಖೆಯ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಮಧುಗಿರಿ | ಕೃಷ್ಣಮೂರ್ತಿ ಜಿ.ಎನ್. ಅವರಿಗೆ ಪಿಎಚ್‌ಡಿ ಪದವಿ

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ...

ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ...