ಶಿರಾ ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಆಲದಮರ (ಹನುಮಂತನಗರ)ದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ವಿವಿಧ ಜನಪರ ಯೋಜನೆಗಳು ಮತ್ತು ಸಾರ್ವಜನಿಕ ಮಹತ್ವದ ವಿಷಯಗಳ ಕುರಿತು ಬೃಹತ್ ಜಾಗೃತಿ ಅಭಿಯಾನ ನಡೆಯಿತು.
ವಿಬಿ-ಜಿ- ರಾಮ್ ಜಿ (VB-G RAM G) ಯೋಜನೆ, ಕುಡಿಯುವ ನೀರಿನ ಮಿತ ಬಳಕೆ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR), ಗ್ರಾಮ ಪಂಚಾಯಿತಿಗಳ ಕಂದಾಯ ವಸೂಲಾತಿ ಹಾಗೂ ಗ್ರಾಮಗಳ ಸ್ವಚ್ಛತೆ ಮತ್ತು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಸಂತೆ ಪ್ರಾಂಗಣದಲ್ಲಿ ಕರಪತ್ರಗಳನ್ನು ವಿತರಿಸುವುದು, ಮೈಕ್ ಮೂಲಕ ಘೋಷಣೆ ಮಾಡುವುದರ ಜೊತೆಗೆ ಮಾನವ ಸರಪಳಿ ನಿರ್ಮಿಸಿ ವಿವಿಧ ಯೋಜನೆಗಳ ಉದ್ದೇಶ ಹಾಗೂ ಸಾರ್ವಜನಿಕರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಆರ್. ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಂಗನಾಥ್ ಆರ್., ಸಹಾಯಕ ನಿರ್ದೇಶಕ (ಗ್ರಾ.ಉ.) ಕರಿಯಪ್ಪ ಪಿ., ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, VB-G RAM G ಯೋಜನೆಯ ತಾಂತ್ರಿಕ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಸಿಬ್ಬಂದಿ, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.





