ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

Date:

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಅನುಷ್ಠಾನಕ್ಕಾಗಿ ರೈತರು ಹೋರಾಟದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ತಾಲೂಕಿನ 63 ಕೆರೆಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷೆಯ ಯೋಜನೆಯ ತುಮಕೂರು ನಾಲೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲು ಶಿರಾದಲ್ಲಿ ರಾಜ್ಯದ ಗಮನ ಸೆಳೆಯುವ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

- Advertisement -

ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಭೂತಪ್ಪನಗುಡಿ ಎಸ್‌ಎಂಆರ್ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದ ಭದ್ರಾ ಮೇಲ್ದಂಡೆ ಯೋಜನೆ ಹೋರಾಟದ ಪೂರ್ವಭಾವಿ ಸಭೆಯಲ್ಲಿ ರೈತ ಮುಖಂಡರು ಈ ನಿರ್ಧಾರಕ್ಕೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಸಭೆ ಉದ್ಘಾಟಿಸಿ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್. ಶಶಿಧರ ಗೌಡ, “ಭದ್ರಾ ನೀರಾವರಿ ಯೋಜನೆಯ ಸೌಲಭ್ಯವನ್ನು ಪಡೆದೇ ತೀರಬೇಕೆಂಬ ದೃಢಸಂಕಲ್ಪದೊಂದಿಗೆ ರೈತರೆಲ್ಲರೂ ಒಗ್ಗಟ್ಟಾಗಿ ಹೋರಾಡಿದಾಗ ಮಾತ್ರ ಯಶಸ್ಸು ಸಾಧ್ಯ” ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬವಾಗುತ್ತಿದ್ದು, ಕಾಮಗಾರಿಗೆ ವೇಗ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವುದು ಅನಿವಾರ್ಯವಾಗಿದೆ. ಪ್ರತಿಯೊಬ್ಬ ರೈತರಲ್ಲೂ ಹೋರಾಟದ ಕಿಚ್ಚು ಹೊತ್ತಿಕೊಳ್ಳಬೇಕು. ಸಾವಿರಾರು ರೈತರು ಒಗ್ಗೂಡಿ ಶಿರಾ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಗಳ ಗಮನ ಸೆಳೆಯಬೇಕು ಎಂದು ಕರೆ ನೀಡಿದರು.

ನೀರಾವರಿ ಹೋರಾಟಗಾರ ಗೋಮಾರದನಹಳ್ಳಿ ಮಂಜುನಾಥ್ ಮಾತನಾಡಿ, ಗೌಡಗೆರೆ ಹೋಬಳಿ ನೀರಾವರಿ ವಿಚಾರದಲ್ಲಿ ನಿರಂತರ ಅನ್ಯಾಯಕ್ಕೆ ಒಳಗಾಗುತ್ತಿದೆ. ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದ್ದು, ಜನರು ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪಕ್ಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರೈತರು ಹೋರಾಟದ ಮೂಲಕ ಭದ್ರಾ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಶಿರಾ ತಾಲೂಕಿನ ರೈತರು ಕೂಡ ಒಗ್ಗಟ್ಟಿನಿಂದ ಹೋರಾಟಕ್ಕೆ ಧುಮುಕಬೇಕು. ರೈತರು ಹಾಗೂ ಹೋರಾಟಗಾರರು ಪರಸ್ಪರ ಕೈಜೋಡಿಸಿದಾಗ ಮಾತ್ರ ಪ್ರಬಲ ಜನಾಂದೋಲನ ರೂಪಿಸಲು ಸಾಧ್ಯ. ಹೀಗಾಗಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿ, ರಾಜ್ಯದ ಗಮನ ಸೆಳೆಯುವ ರೀತಿಯಲ್ಲಿ ಶಿರಾದಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಹೇಳಿದರು.

ಶಿರಾ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಬಾಕಿ ಇರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕು. ಯೋಜನೆ ಪೂರ್ಣಗೊಂಡರೆ ಶಿರಾ ತಾಲೂಕಿನ 63 ಕೆರೆಗಳಿಗೆ ನೀರು ಹರಿಯಲಿದ್ದು, ಅಂತರ್ಜಲ ಮಟ್ಟ ಸುಧಾರಿಸುವುದರೊಂದಿಗೆ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದರು.

ಈಗಾಗಲೇ ಶಿರಾ ತಾಲೂಕು ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ಸಾವಿರಾರು ರೈತರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಶಿರಾದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಿ, ಸರ್ಕಾರಗಳ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ನೀರು ಶಿರಾ ತಾಲೂಕಿನ ಕೆರೆಗಳಿಗೆ ಹರಿಯುವವರೆಗೂ ಹೋರಾಟ ಮುಂದುವರಿಯಬೇಕು ಎಂಬ ಒಮ್ಮತ ಸಭೆಯಲ್ಲಿ ವ್ಯಕ್ತವಾಯಿತು. ನೀರಾವರಿ ಸಮಸ್ಯೆ ರೈತರ ಬದುಕು ಮತ್ತು ಜನರ ಕುಡಿಯುವ ನೀರಿನ ಭವಿಷ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಯುವಶಕ್ತಿಯೂ ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಕರೆ ನೀಡಿದರು.

ಸಭೆಯಲ್ಲಿ ರೈತ ಮುಖಂಡರಾದ ಡಿ. ತಿಮ್ಮಯ್ಯ, ಆರ್. ಮುದ್ದುರಂಗೇಗೌಡ, ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ರಂಗನಾಥ್, ಮದ್ದಕ್ಕನಹಳ್ಳಿ ಗೊಲ್ಲರಹಟ್ಟಿಯ ಗೌಡಪ್ಪ, ಬರಗೂರು ಬಪ್ಪಣ್ಣ, ಜಯರಾಮಯ್ಯ, ಶ್ರೀಕಂಠಪ್ಪ, ಬಿ.ವಿ. ಗುಂಡಪ್ಪ, ಶಿವು ಸ್ನೇಹಪ್ರಿಯ, ಗೌಡಗೆರೆ ವೆಂಕಟೇಶ್, ನೇರಲಗುಡ್ಡ ಶಿವಕುಮಾರ್, ಹೊನ್ನೇನಹಳ್ಳಿ ಶಾಂತರಾಜು, ಸಂತೋಷ್, ಹನುಮಂತರಾಯಪ್ಪ, ಜೆ. ಹೊಸಹಳ್ಳಿ ತಿಪ್ಪೇಸ್ವಾಮಿ, ಮಹಾಂತೇಶ್, ವೀರಪುರ ರಾಮಣ್ಣ, ಧನಂಜಯ, ಶಿವಕುಮಾರ ನಾಯಕ, ಜಯಣ್ಣ, ರಾಮಣ್ಣ, ಹನುಮಂತರಾಯಪ್ಪ, ದೇವರಾಜ್ ಸೇರಿದಂತೆ ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗಳ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...