ಕಳೆದ 30 ವರ್ಷಗಳಿಂದ ವಾಲ್ಮೀಕಿ ಸಮುದಾಯದ ಪ್ರಮುಖ ಬೇಡಿಕೆಯಾಗಿರುವ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ, ಸಿರಾ ತಾಲೂಕು ವಾಲ್ಮೀಕಿ ಸಮಾಜದ ಮುಖಂಡರು ಸೋಮವಾರ ತಾಲೂಕು ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅಕ್ಟೋಬರ್ 26ರಂದು ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಮನವಿ ಸಲ್ಲಿಸಲಾಯಿತು. ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮುದಾಯದ ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ್ ಸಂತೆಪೇಟೆ, ಕ್ರಿಯಾ ಸಮಿತಿ ಅಧ್ಯಕ್ಷ ಚಿಕ್ಕ ಕೆಂಪಯ್ಯ, ಗೌರವಾಧ್ಯಕ್ಷ ಬಂಡೆ ರಾಮಕೃಷ್ಣ, ಜಿಲ್ಲಾ ನಾಯಕ ಸಂಘದ ಕಾರ್ಯದರ್ಶಿ ಸಿ. ದಾಸಪ್ಪ ಮಾಗೋಡು, ವಿಎಸ್‌ಎಸ್‌ಎನ್ ಅಧ್ಯಕ್ಷ ರಂಗರಾಜು, ಮಾಜಿ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ ಕುಮಾರ್, ಎಸ್.ಎಸ್. ಧರಣಿ ಕುಮಾರ್, ಎಸ್. ರಂಗರಾಜು, ಭಾನು, ರಾಮಲಿಂಗಪ್ಪ, ಪಾಂಡು, ಬೂವನಹಳ್ಳಿ ಕೃಷ್ಣಪ್ಪ, ಚಂಗಾವರ ರಾಕೇಶ್, ಡಿ.ಡಿ. ನಾಯಕ, ಓಕೇಶ್, ಕೊಟ್ಟಿ ಮಂಜುನಾಥ್, ಪಂಜಿಗಾನಹಳ್ಳಿ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.





