ಮರ್ಯಾದೆಗೇಡು ಹತ್ಯೆ| ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಕುಟುಂಬ

Date:

ದಲಿತ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರೇ ಹತ್ಯೆಗೈದಿರುವ ಮರ್ಯಾದಾಗೇಡು ಹತ್ಯೆ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಣ್ಣ ಸೇರಿ ಕೊಲೆ ಮಾಡಿದ್ದಾರೆ.

- Advertisement -

ತಾಲೂಕಿನ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮರ್ಯಾದಾಗೇಡು ಹತ್ಯೆ ಪ್ರಕರಣದಲ್ಲಿ ಬಾಲಕಿಯ ತಂದೆ ಪರಶುರಾಮ, ಚಿಕ್ಕಪ್ಪ ತುಕಾರಾಮ ಮತ್ತು ಆಕೆಯ ಅಣ್ಣ ಶಿವರಾಜು ಅವರನ್ನು ಪೊಲೀಸರು ಜೂನ್ 10 ರಂದು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಾಯಕ ಸಮುದಾಯಕ್ಕೆ (ಎಸ್‌ಟಿ) ಸೇರಿದ ಯುವತಿ ಶಿರಾದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದರು. ಶಿರಾದಲ್ಲಿಯೇ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಅಲ್ಲಿಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ಓದುತಿದ್ದ ದಲಿತ ವಿದ್ಯಾರ್ಥಿ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.

ಇನ್ನು ಮೂರು ತಿಂಗಳಲ್ಲಿ ಯುವತಿ 18 ವರ್ಷ ತುಂಬುತ್ತಿತ್ತು. ಬಳಿಕ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಅವರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಆತನೊಂದಿಗಿನ ಪ್ರೀತಿಯನ್ನು ತೊರೆಯುವಂತೆ ಒತ್ತಾಯಿಸಿದ್ದರು.

“ಯುವತಿ ಪೋಷಕರಿಗೆ ತಿಳಿಸದೆ ಕೆಲಕಾಲ ಮನೆಯಿಂದ ನಾಪತ್ತೆಯಾಗಿದ್ದಳು. ಯುವತಿಯ ಕುಟುಂಬದವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ. ಬದಲಾಗಿ, ಅವರೇ ಆಕೆಯನ್ನು ಹುಡುಕಿ, ಜೂನ್ 9ರಂದು ಮನೆಗೆ ಕರೆತಂದಿದ್ದಾರೆ” ಎಂದು ತುಮಕೂರು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಜೂನ್ 9ರಂದು ಬಾಲಕಿಯ ತಂದೆ, ಚಿಕ್ಕಪ್ಪ ಮತ್ತು ಸಹೋದರ – ಮೂವರೂ ಸೇರಿ ಆಕೆಗೆ ವಿಷ ಕುಡಿಯುವಂತೆ ಒತ್ತಾಯಿಸಿದ್ದಾರೆ. ಬಾಲಕಿ ಇದಕ್ಕೆ ನಿರಾಕರಿಸಿದಾಗ ಕುರಿ ಕಟ್ಟಲು ಬಳಸುವ ಹಗ್ಗದಿಂದ ಕತ್ತನ್ನು ಬಿಗಿದು ಕೊಲೆ ಮಾಡಿದ್ದಾರೆ. ಕೊಲೆ ಪ್ರಕರಣವನ್ನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಬಿಂಬಿಸಿದ್ದಾರೆ. ಬಳಿಕ ಆಕೆಯ ಅಂತ್ಯಕ್ರಿಯೆಯನ್ನು ಸಹ ಮಾಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚೇಳೂರು ಪೊಲೀಸರು ವಿಚಾರಣೆ ನಡೆಸಿದ್ದು, ಬಾಲಕಿಯನ್ನು ಮನೆಯವರೇ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

“ಆತ್ಮಹತ್ಯೆ ಮತ್ತು ಸಾಕ್ಷ್ಯ ನಾಶದ ಪ್ರಕರಣವನ್ನು ದಾಖಲಿಸಿದ್ದೆವು. ವಿಚಾರಣೆ ನಡೆಸಿದ ನಂತರ ಕೊಲೆ ಪ್ರಕರಣ ದಾಖಲಿಸಲಾಗಿದೆ” ಎಂದು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...