ತುಮಕೂರು | ವಿದ್ಯಾರ್ಥಿನಿ ಜೊತೆ ಶಿಕ್ಷಕ ಅನುಚಿತ ವರ್ತನೆ; ಪೋಷಕರ ಪ್ರತಿಭಟನೆ

Date:

ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೋಷಕರು ಮತ್ತು ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಶಾಲೆಯ ಶಿಕ್ಷಕ ಲಕ್ಷ್ಮೀಕಾಂತ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಗೆ ಹಣದ ಆಮಿಷವೊಡ್ಡಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಗ್ರಾಮಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆರೋಪಿ ಶಿಕ್ಷಕನನ್ನು ವರ್ಗಾವಣೆ ಮಾಡಬೇಕು ಮತ್ತು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ: ಶಾಸಕರ ಪುತ್ರಿಗೆ ಕ್ಷಮೆಯಾಚಿಸಲು ಹೈಕೋರ್ಟ್ ಸೂಚನೆ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...