ತುಮಕೂರು | ದಲಿತ ಕುಟುಂಬದ ಮನವಿಗೆ ಸ್ಪಂದಿಸದ ತಹಶೀಲ್ದಾರ್; ಕ್ರಮಕ್ಕೆ ಆಗ್ರಹ

Date:

Advertisements

ದಲಿತ ಕುಟುಂಬವೊಂದು ತಮ್ಮ ಆಸ್ತಿಗೆ ಹದ್ದುಬಸ್ತು ಮತ್ತು ಪೋಡಿ ಮಾಡಿಕೊಡುವಂತೆ ಮನವಿ ಸಲ್ಲಿಸಿ, ವರ್ಷಾನುಗಟ್ಟಲೆ ಅಲೆದರೂ ಕೆಲಸವಾಗಿಲ್ಲ. ದಲಿತ ಕುಟುಂಬದ ಮನವಿಗೆ ಸ್ಪಂದಿಸದ ಶಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ತುಮಕೂರು ಎಸ್‌ಪಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

“ತುಮಕೂರು ತಾಲೂಕಿನ ಕೌತಮಾರನಹಳ್ಳಿಯ ನಿವಾಸಿ, ಆದಿ ದ್ರಾವಿಡ ಸಮುದಾಯದ ಎಲ್ಲಪ್ಪ ಅವರು ತಮ್ಮ ಜಮೀನನ್ನು ಹದ್ದುಬಸ್ತು ಮತ್ತು ಪೋಡಿ ಮಾಡಿಕೊಡುವಂತೆ ತುಮಕೂರು ತಹಶೀಲ್ದಾರ್ ಕಚೇರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ, ಅವರಿಗೆ ಸರ್ಕಾರಿ ಸೇವೆಯನ್ನು ಒದಗಿಸುವಲ್ಲಿ ತಹಶೀಲ್ದಾರ್  ಸಿದ್ದಯ್ಯ ವಿಫಲರಾಗಿದ್ದಾರೆ” ಎಂದು ವೇದಿಕೆಯ ಮುಖಂಡ ಎಚ್‌.ಎಂ ವೆಂಕಟೇಶ್ ಆರೋಪಿಸಿದ್ದಾರೆ.

“ತಮ್ಮ ಮನವಿ ಸ್ಪಂದಿಸದೆ, ವರ್ಷಾನುಗಟ್ಟಲೆ ಅಲೆದಾಡಿಸಿದ ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೆಕೆಂದು ಎಲ್ಲಪ್ಪ ಅವರು ತುಮಕೂರು ನಗರ ಉಪ ಪೋಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದರು. ಆದರೆ, ಈವರೆಗೆ ದೂರು ದಾಖಲಿಸಿಕೊಳ್ಳದೆ, ಪೊಲೀಸರೂ ಕರ್ತವ್ಯ ಲೋಪ ಎಸಗಿದ್ದಾರೆ” ಎಂದು ದೂರಿದ್ದಾರೆ.

Advertisements

“ದೂರುದಾರರಿಗೆ ರಕ್ಷಣೆ ನೀಡಬೇಕಾಗಿದ್ದ ತುಮಕೂರು ನಗರ ಪೊಲೀಸ್ ಅಧಿಕ್ಷಕರು ತಪ್ಪಿತಸ್ಥ ತಹಸಿಲ್ದಾರ್ ಮತ್ತು ಇತರ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದಾರೆ. ಇದು ದುರಾದೃಷ್ಟಕರ ಸಂಗತಿ. ಬಡತನ, ಜಾತಿ ದೌರ್ಜನ್ಯ, ಸರ್ಕಾರದ ನಿರ್ಲಕ್ಷ್ಯದಿಂದ ಎಲ್ಲಪ್ಪ ಕುಟುಂಬ ಸಾಕಷ್ಟ ನೋವುಂಡಿದೆ. ಆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X