ಕರಟಕ್ಕೂ ಬಂತು ಕಾಲ: ತೆಂಗಿನ ಚಿಪ್ಪು ಮಾರಿ ರೂ. 27,000 ಗಳಿಸಿದ ತುಮಕೂರಿನ ರೈತ !

Date:

ಒಂದು ಕಾಲದಲ್ಲಿ ಕೊಬ್ಬರಿ ತೆಗೆದ ಬಳಿಕ ಯಾವುದೇ ಬೆಲೆ ಇಲ್ಲದೆ ಒಲೆಗೆ ಉರಿಸುವುದಕ್ಕೋ, ಹೊಲದ ಅಂಚಿನಲ್ಲಿ ರಾಶಿ ಹಾಕುವುದಕ್ಕೋ ಬಳಸುತ್ತಿದ್ದ ಕೊಬ್ಬರಿ ಚಿಪ್ಪು (ಕರಟ) ಇಂದು ರೈತರಿಗೆ ಹೊಸ ಆದಾಯದ ಮೂಲವಾಗಿದೆ. ಎಳನೀರು, ತೆಂಗಿನಕಾಯಿ ಬೆಲೆ ಏರಿಕೆಯ ನಡುವೆಯೇ ಈಗ ಕೊಬ್ಬರಿ ಚಿಪ್ಪಿನ ಬೆಲೆಯೂ ಗಗನಕ್ಕೇರಿದ್ದು, ಸಾವಿರ ಚಿಪ್ಪಿಗೆ ₹4,500 ದರ ಗಳಿಸುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ.

- Advertisement -

ತುಮಕೂರು ಜಿಲ್ಲೆಯ ರೈತರೊಬ್ಬರು 6 ಸಾವಿರ ಕೊಬ್ಬರಿ ಚಿಪ್ಪುಗಳನ್ನು ₹27,000ಕ್ಕೆ ಮಾರಾಟ ಮಾಡಿ ಉತ್ತಮ ಲಾಭ ಗಳಿಸಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಹೆಚ್ಚಿನ ದರಕ್ಕೆ ಚಿಪ್ಪು ಮಾರಾಟವಾಗಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಚಿಪ್ಪು ಮಾರಾಟ ಮಾಡಿದ ರೈತ ಟಿ.ಎಸ್. ಲೋಕೇಶ್ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಸಂಖ್ಯೆ ಆಧಾರದಲ್ಲಿ ಮಾರಾಟ ಮಾಡಿದರೆ ಪ್ರತಿ ಚಿಪ್ಪಿಗೆ ₹4.50 ಸಿಗುತ್ತಿದೆ. ತೂಕದ ಆಧಾರದ ಮೇಲೆ ವ್ಯಾಪಾರಿಗಳು ಕ್ವಿಂಟಲ್‌ಗೆ ₹3,600 ದರ ನೀಡುತ್ತಿದ್ದಾರೆ. ಹಿಂದೆ ಮೌಲ್ಯವಿಲ್ಲದ ವಸ್ತುವೆಂದು ಪರಿಗಣಿಸಲಾಗುತ್ತಿದ್ದ ಚಿಪ್ಪು ಇಂದು ರೈತರಿಗೆ ಹೆಚ್ಚುವರಿ ಆದಾಯ ತಂದುಕೊಡುತ್ತಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಕೊಬ್ಬರಿ ಚಿಪ್ಪಿನ ಬೆಲೆ ಏರಿಕೆಗೆ ಹಲವು ಕಾರಣಗಳಿವೆ. ತೆಂಗು ಹೆಚ್ಚಾಗಿ ಬೆಳೆಯುವ ಕೇರಳ ಮತ್ತು ತಮಿಳುನಾಡಿನಲ್ಲಿ ಚಿಪ್ಪಿನ ಉತ್ಪಾದನೆ ಕಡಿಮೆಯಾಗಿರುವುದು ಕರ್ನಾಟಕದ ಚಿಪ್ಪಿಗೆ ಭಾರೀ ಬೇಡಿಕೆ ತಂದಿದೆ.

ಇನ್ನೊಂದೆಡೆ, ಇತ್ತೀಚಿನ ದಿನಗಳಲ್ಲಿ ಎಳನೀರು ಮತ್ತು ತೆಂಗಿನಕಾಯಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಅನೇಕ ರೈತರು ಕೊಬ್ಬರಿ ಉತ್ಪಾದನೆಗೆ ಕಡಿಮೆ ಆದ್ಯತೆ ನೀಡುತ್ತಿದ್ದಾರೆ. ಇದರ ಪರಿಣಾಮವಾಗಿ ಚಿಪ್ಪಿನ ಲಭ್ಯತೆ ಕೂಡ ಕುಸಿದಿದೆ.

ಈದಿನ.ಕಾಮ್‌ ಜೊತೆಗೆ ಮಾತನಾಡಿದ ಜೋನಿಗರಹಳ್ಳಿಯ ಚಿಪ್ಪು ಖರೀದಿದಾರ ಪ್ರಸಾದ್, “ಹಿಂದೆ ವಾರಕ್ಕೆ ಒಂದು ಟನ್ ಚಿಪ್ಪು ರೈತರಿಂದ ಖರೀದಿಸುತ್ತಿದ್ದೆ. ಆದರೆ ಈಗ ತಿಂಗಳಿಗೆ ಒಂದು ಟನ್ ಸಿಗುವುದೂ ಕಷ್ಟವಾಗಿದೆ. ಬೇಡಿಕೆ ಹೆಚ್ಚಿದರೂ ಪೂರೈಕೆ ಇಲ್ಲದ ಕಾರಣ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ” ಎನ್ನುತ್ತಾರೆ.

ಚಿಪ್ಪಿನಿಂದ ಏನೇನು ತಯಾರಾಗುತ್ತದೆ?

ಕೊಬ್ಬರಿ ಚಿಪ್ಪು ಕೇವಲ ಉರುವಲಲ್ಲ. ಇದರ ಬಳಕೆಯ ವ್ಯಾಪ್ತಿ ಈಗ ವಿಸ್ತರಿಸಿಕೊಂಡಿದೆ. ಉತ್ತಮ ಗುಣಮಟ್ಟದ ಇದ್ದಿಲು (Charcoal), ಸಕ್ರಿಯ ಕಾರ್ಬನ್ (Activated Carbon), ನೀರು ಶುದ್ಧೀಕರಣ ಘಟಕ, ಸೌಂದರ್ಯವರ್ಧಕ ಉತ್ಪನ್ನಗಳು, ಫೇಸ್ ಕ್ರೀಮ್ ಹಾಗೂ ಕಾಸ್ಮೆಟಿಕ್ಸ್, ಕರಟದ ಎಣ್ಣೆ, ಕೈಗಾರಿಕಾ ಫಿಲ್ಟರ್ ಮೊದಲಾದ ಉತ್ಪನ್ನಗಳ ತಯಾರಿಕೆಗೆ ತೆಂಗಿನ ಚಿಪ್ಪಿನ ಬೇಡಿಕೆಯಿದೆ.

ತುಮಕೂರಿನ ಚಿಪ್ಪು ಸಂಸ್ಕರಣಾ ಘಟಕಗಳ ಮಾಲೀಕರು ಈದಿನ.ಕಾಮ್‌ ಜೊತೆಗೆ ಮಾತನಾಡಿ, “ರಾಜ್ಯದಲ್ಲಿ ಖರೀದಿಸುವ ಚಿಪ್ಪನ್ನು ಇದ್ದಿಲಾಗಿ ಪರಿವರ್ತಿಸಿ ಇತರೆ ರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಅಲ್ಲಿಂದ ಅದನ್ನು ಸಂಸ್ಕರಿಸಿ ವಿವಿಧ ಕೈಗಾರಿಕೆಗಳಿಗೆ ಹಾಗೂ ವಿದೇಶಗಳಿಗೂ ರಫ್ತು ಮಾಡಲಾಗುತ್ತದೆ” ಎಂದಿದ್ದಾರೆ.

ವ್ಯಾಪಾರಿಗಳ ಅಭಿಪ್ರಾಯದಂತೆ, ತೆಂಗು ಬೆಳೆಗಾರರು ಮತ್ತೆ ಕೊಬ್ಬರಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದರೆ ಚಿಪ್ಪಿನ ಲಭ್ಯತೆ ಹೆಚ್ಚಾಗಿ ಬೆಲೆ ಇಳಿಕೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕಡಿಮೆ ಇರುವುದರಿಂದ ಕೊಬ್ಬರಿ ಚಿಪ್ಪಿನ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಒಮ್ಮೆ ತ್ಯಾಜ್ಯವೆಂದು ಪರಿಗಣಿಸಲಾಗುತ್ತಿದ್ದ ಕೊಬ್ಬರಿ ಚಿಪ್ಪು ಇಂದು ರೈತರಿಗೆ ಹೆಚ್ಚುವರಿ ಆದಾಯದ ಹೊಸ ದಾರಿಯನ್ನು ತೆರೆದಿದೆ. ತೆಂಗಿನ ಪ್ರತಿಯೊಂದು ಭಾಗಕ್ಕೂ ಮಾರುಕಟ್ಟೆಯಲ್ಲಿ ಮೌಲ್ಯ ಸಿಗುತ್ತಿರುವುದು ತೆಂಗು ಬೆಳೆಗಾರರ ಪಾಲಿಗೆ ಸಂತಸದ ಬೆಳವಣಿಗೆಯಾಗಿದ್ದು, ಗ್ರಾಮೀಣ ಆರ್ಥಿಕತೆಗೆ ಹೊಸ ಬಲ ನೀಡುತ್ತಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...