ತಿಪಟೂರು | ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್

Date:

 ಮಕ್ಕಳಲ್ಲಿ ಮೂಢನಂಬಿಕೆಗಳ ಬದಲಿಗೆ ವೈಚಾರಿಕತೆ, ವೈಜ್ಞಾನಿಕ ಚಿಂತನೆ ಹಾಗೂ ತರ್ಕಬದ್ಧ ಆಲೋಚನೆಗಳನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರು ವೈಜ್ಞಾನಿಕ ಮನೋಭಾವಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ (ಟೂಡಾ) ತಿಳಿಸಿದರು.

- Advertisement -

ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ‘ನವಭಾರತ ನಿರ್ಮಾತೃ ನೆಹರು’ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದು ಹಾಗೂ ಪಂಡಿತ್ ಜವಾಹರಲಾಲ್ ನೆಹರು ಅವರ ಜೀವನ, ಚಿಂತನೆಗಳು ಮತ್ತು ಆಧುನಿಕ ಭಾರತದ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಪರಿಚಯಿಸುವ ಉದ್ದೇಶದಿಂದ ಪುಸ್ತಕಗಳನ್ನು ವಿತರಿಸಲಾಗಿದೆ. ನಮ್ಮ ಉದ್ದೇಶ ಕೇವಲ ಪುಸ್ತಕ ವಿತರಿಸುವುದಲ್ಲ. ಮಕ್ಕಳಲ್ಲಿ ಓದುವ ಸಂಸ್ಕೃತಿ ಬೆಳೆಸುವುದು, ಸಂವಿಧಾನಿಕ ಮೌಲ್ಯಗಳನ್ನು ಬಿತ್ತುವುದು ಮತ್ತು ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದಾಗಿದೆ. ಮಕ್ಕಳ ಕೈಯಲ್ಲಿ ಪುಸ್ತಕವಿದ್ದರೆ ಮನಸ್ಸಿನಲ್ಲಿ ಜ್ಞಾನ ಮೂಡುತ್ತದೆ. ಜ್ಞಾನದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು.

1004399086

ಭಾರತವು ಕೇವಲ ರಾಜಕೀಯವಾಗಿ ಸ್ವತಂತ್ರವಾದರೆ ಸಾಲದು, ಆರ್ಥಿಕವಾಗಿ, ವೈಜ್ಞಾನಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿಯೂ ಬಲಿಷ್ಠವಾಗಬೇಕು ಎಂಬುದು ನೆಹರು ಅವರ ಆಶಯವಾಗಿತ್ತು. ಈ ಹಿನ್ನೆಲೆಯಲ್ಲಿ ದೊಡ್ಡ ಅಣೆಕಟ್ಟುಗಳು, ಕೈಗಾರಿಕೆಗಳು, ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅವರು ಒತ್ತು ನೀಡಿದ್ದರು. ಐಐಟಿ, ಏಮ್ಸ್ ಸೇರಿದಂತೆ ಹಲವು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಬೆಳವಣಿಗೆಗೆ ಅವರ ಆಡಳಿತದಲ್ಲಿ ಮಹತ್ವದ ಪ್ರೋತ್ಸಾಹ ದೊರೆಯಿತು ಎಂದು ಹೇಳಿದರು.

IMG 20261114 WA0365

ಶಿಕ್ಷಣವನ್ನು ಕೇವಲ ಉದ್ಯೋಗ ಪಡೆಯುವ ಸಾಧನವಾಗಿ ನೆಹರು ಅವರು ಪರಿಗಣಿಸಿರಲಿಲ್ಲ. ಶಿಕ್ಷಣವು ಮನುಷ್ಯನಲ್ಲಿ ಪ್ರಶ್ನಿಸುವ ಮನೋಭಾವ, ಆಲೋಚನಾ ಶಕ್ತಿ ಹಾಗೂ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಬೇಕು ಎಂದು ನಂಬಿದ್ದರು. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಸುಮ್ಮನೆ ನಂಬದೆ ಪ್ರಶ್ನಿಸಬೇಕು, ಉತ್ತರ ಹುಡುಕಬೇಕು ಮತ್ತು ಸತ್ಯವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಂಶುಪಾಲ ಮಧು, ಹಿರಿಯ ಶಿಕ್ಷಕ ಶಿವಕುಮಾರ್ ಎಚ್.ಪಿ., ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕೆ.ಎಸ್., ಶಾಂತರಾಜು, ಸಹ ಶಿಕ್ಷಕರಾದ ಮನೋಹರ್, ಚಂದ್ರಕಲಾ, ಎನ್. ಪುಷ್ಪಲತಾ, ವೀರಕುಮಾರ್, ಪುಟ್ಟಸ್ವಾಮಿ ಹಾಗೂ ಬೆಲೆ ಕಾವಲು ಸಮಿತಿಯ ರಾಜ್ಯ ಕಾರ್ಯದರ್ಶಿ ಶ್ರೀಕಾಂತ್ ಕೆಳಹಟ್ಟಿ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ತುಮಕೂರು | ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ: ದಾಖಲಾತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ...

ಮಧುಗಿರಿ | ಸಂವಿಧಾನ ದೇಶದ ಚರಿತ್ರೆ, ವರ್ತಮಾನ ಮತ್ತು ಭವಿಷ್ಯವನ್ನು ಪ್ರತಿನಿಧಿಸುತ್ತದೆ: ಎ. ನಾರಾಯಣ

 ಪ್ರಪಂಚದಲ್ಲೇ ಬೃಹತ್ ಲಿಖಿತ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸಂವಿಧಾನವು ಏಕಕಾಲಕ್ಕೆ...