ತಿಪಟೂರು | ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಎತ್ತಿನಗಾಡಿ, ಟ್ರ್ಯಾಕ್ಟರ್ ಜಾಥಾ

Date:

 ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ವಿತರಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಬರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಳ್ಳಿಕಾರ್ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ–ರೈತ ಶಕ್ತಿ ಸಂಘಟನೆಗಳ ನೇತೃತ್ವದಲ್ಲಿ ರೈತರು ಗುರುವಾರ ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್ ಜಾಥಾ ನಡೆಸಿದರು.

- Advertisement -

ನಗರದ ಹಾಸನ ವೃತ್ತದಿಂದ ಆರಂಭವಾದ ಜಾಥಾವು ಬಿ.ಎಚ್. ರಸ್ತೆಯ ಮೂಲಕ ಸಾಗಿ ನಗರಸಭಾ ವೃತ್ತ ತಲುಪಿತು. ಬಳಿಕ ಪ್ರತಿಭಟನಾ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸಂದರ್ಭದಲ್ಲಿ ಮಾತನಾಡಿದ ಹಳ್ಳಿಕಾರ್ ರೈತ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಮಾಡೇನೂರು, ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಎದುರಾಗಿದೆ. ಈ ಕುರಿತು ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಕೂಡಲೇ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ವಿತರಿಸಬೇಕು. ಪ್ರತಿ ರೈತರ ಖಾತೆಗೆ ₹25 ಸಾವಿರ ಬರ ಪರಿಹಾರ ಜಮಾ ಮಾಡಬೇಕು. ಸಹಕಾರಿ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ಅರಣ್ಯ ಒತ್ತುವರಿ ಹೆಸರಿನಲ್ಲಿ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ, ರೈತರು ಸಾಗುವಳಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ–ರೈತ ಶಕ್ತಿ ಸಂಘದ ಜಿಲ್ಲಾಧ್ಯಕ್ಷ ಪದ್ದಣ್ಣ ಮಾತನಾಡಿ, ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಬರದಿಂದಾಗಿ ರೈತರು ಬೆಳೆದ ಬೆಳೆಗಳು ನಷ್ಟವಾಗಿದ್ದು, ತಕ್ಷಣ ಪ್ರತಿ ಎಕರೆಗೆ ₹25 ಸಾವಿರ ತಾತ್ಕಾಲಿಕ ಬರ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ವಿತರಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ದೇವರಾಜ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು. ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಿರುವ ರೈತರಿಗೆ ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಗೌರವಾಧ್ಯಕ್ಷ ತೀರ್ಥನಾಗೇಂದ್ರ, ಬಿಜೆಪಿ ಯುವ ಮುಖಂಡ ವಿಶ್ವದೀಪ್ ನಾಗೇಶ್, ಪ್ರಸನ್ನ ಕುಮಾರ್, ತಾಲ್ಲೂಕು ಅಧ್ಯಕ್ಷ ಈಶ್ವರ್, ಹೊನ್ನೇನಹಳ್ಳಿ ವಿರೂಪಾಕ್ಷಯ್ಯ, ಮಾದಿಹಳ್ಳಿ ಗೊಲ್ಲರಹಟ್ಟಿ ಮಂಜಣ್ಣ, ಹಾಲ್ಕುರಿಕೆ ಪರಮೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...