ತಿಪಟೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಿಪಟೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ತಿಪಟೂರು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ತಿಪಟೂರು ಸಹಯೋಗದಲ್ಲಿ 2025-26ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನದ ಅಂಗವಾಗಿ ಗುರುವಾರ ಬೆಳಗ್ಗೆ 10 ಗಂಟೆಗೆ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ರವರ ಸಮಗ್ರ ಬರಹಗಳು ಮತ್ತು ಭಾಷಣಗಳು ಅಥವಾ ಡಾ. ಬಿ.ಆರ್. ಅಂಬೇಡ್ಕರ್ ರವರ ಚಿಂತನೆಗಳು ಮತ್ತು ತತ್ವ ಆದರ್ಶಗಳಿಂದ ಅಸ್ಪೃಶ್ಯತೆಯನ್ನು ನಿವಾರಿಸುವಲ್ಲಿ ಪ್ರಸ್ತುತ ಯುವಜನರ ಪಾತ್ರ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ, ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಏ.14 ರಂದು ಸರ್ಕಾರಿ ಪ್ರಥರ್ಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಸಂಯೋಜಕ ರಾಜಶೇಖರ್.ಕೆ ತಿಳಿಸಿದ್ದಾರೆ.
ಪ್ರಾಂಶುಪಾಲರಾದ ಡಾ.ಶಶಿಕುಮಾರ್.ಎಚ್.ಎಸ್ , ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಲೋಕೇಶ್.ಎಲ್.ಡಿ ಇದ್ದರು.




