ತಿಪಟೂರು | ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಿ : ಉಮೇಶ್.ಟಿ.ಎಸ್

Date:

ವಿದ್ಯಾರ್ಥಿಗಳು ಆರೋಗ್ಯದ ವಿಚಾರದಲ್ಲಿ ಯಾವುದೇ ಮೌಢ್ಯಗಳನ್ನು ನಂಬದೇ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳಬೇಕು. ಜನರ ವೈಜ್ಞಾನಿಕ ಆಲೋಚನೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿಯ ವಿಶ್ವ ಆರೋಗ್ಯ ದಿನವನ್ನು ಆರೋಗ್ಯಕ್ಕಾಗಿ ಒಂದಾಗೋಣ, ವಿಜ್ಞಾನವನ್ನು ನಂಬೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಕೌನ್ಸಿಲರ್ ಉಮೇಶ್.ಟಿ.ಎಸ್ ತಿಳಿಸಿದರು. 

- Advertisement -

ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯು ಮೊದಲ ವಿಶ್ವ ಆರೋಗ್ಯ ದಿನದ ಪ್ರಯುಕ್ತವೇ ತನ್ನ ಧ್ಯೇಯ ವಾಕ್ಯ ಎಲ್ಲರಿಗಾಗಿ ಆರೋಗ್ಯ ಎಂದು ಹೇಳುವುದರ ಮೂಲಕ ತನ್ನ ಗುರಿ ತಿಳಿಸಿತ್ತು. ಅದೇ ರೀತಿಯಲ್ಲಿ ಪ್ರತಿ ವರ್ಷ ಅದನ್ನು ಸಾಕಾರಗೊಳಿಸುವಲ್ಲಿ ಕಾರ್ಯನಿರತವಾಗಿದೆ. ವಿದ್ಯಾರ್ಥಿಗಳಾದ ನೀವುಗಳು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆ ಗಮನಕೊಡಬೇಕು. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪ್ರಾಂಶುಪಾಲ ಡಾ.ಶಶಿಕುಮಾರ್.ಎಚ್.ಸಿ ಮಾತನಾಡಿ, ವಿದ್ಯಾರ್ಥಿಗಳಾದ ನೀವು ದಡ್ಡರಲ್ಲ, ಆಲಸ್ಯವಹಿಸುತ್ತಿದ್ದಿರಷ್ಟೇ. ನಿಮ್ಮಲ್ಲಿನ ಆಲಸ್ಯ ಬಿಟ್ಟು, ಆಲಿಕೆ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ. ಹೆಚ್ಚು ಹೆಚ್ಚು ಕೇಳುತ್ತಾ ಹೋದಷ್ಟು ಕಲಿಯುತ್ತೀರಿ. ಆರೋಗ್ಯ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಲೆಪ್ಟಿನೆಂಟ್ ಡಾ.ವಿರುಪಾಕ್ಷ.ಜೆ.ಡಿ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, ಇಂದಿನ ಯುವಜನತೆ ಸ್ಟಾರ ನಟ, ನಟಿ, ಸೇರಿದಂತೆ ಸೆಲೆಬ್ರಿಟಿಗಳನ್ನ ಅನುಸರಿಸುತ್ತಿದ್ದು, ಅವರನ್ನು ಅನುಸರಿಸುವ ಭರದಲ್ಲಿದೆ. ಆದರೆ, ಯಾವುದೇ ಸೆಲೆಬ್ರಿಟಿಗಳು ತಾವು ನೀಡುವ ಜಾಹೀರಾತು ಉತ್ಪನ್ನಗಳನ್ನು ಬಳಸುವುದಿಲ್ಲ. ಇದರ ಕುರಿತು ವಿದ್ಯಾರ್ಥಿಗಳಿಗೆ ಯೋಚಿಸಿ ನಿರ್ಧಾರ ಕೈಗೊಳ್ಳಿ ಎಂದರು. 

ಕಾರ್ಯಕ್ರಮದಲ್ಲಿ ಗ್ರಾಮೀಣ ಶಿಕ್ಷಣಾಭಿವೃದ್ಧಿ ಸಂಸ್ಥೆಯ ವತಿಯಿಂದ ರಕ್ತ ಹೀನತೆ ಕುರಿತು ಉಚಿತ ತಪಾಸಣೆ ಮತ್ತು ಔಷಧ ವಿತರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಚಂದ್ರಶೇಖರ್ ಮತ್ತು ವಿನೋದ, ಐಕ್ಯೂಎಸಿ ಸಂಯೋಜಕರಾದ ಡಾ. ಯೋಗೀಶ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ನಾಗರಾಜು.ಬಿ.ಎಸ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಶ್ವಿನಿ.ಆರ್, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಶಿಕುಮಾರ್.ಬಿ.ಎಸ್, ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ...