ತಿಪಟೂರು | ಜೂನ್ 22ಕ್ಕೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆ ಜಾಥಾ

Date:

 ಖಾತೆದಾರರು ಮತ್ತು ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಖಂಡಿಸಿ ಇದೇ ಜೂನ್ 22’ರ ಸೋಮವಾರ ಬೆಳಗ್ಗೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಿನ ರೈತರು ಜಂಟಿ-ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

- Advertisement -

ತಿಪಟೂರು ತಾಲೂಕಿನ ಕಸಬಾ ಹೋಬಳಿಯ ಈರಲಗೆರೆ ಗ್ರಾಮದಿಂದ ಉಪವಿಭಾಗಾಧಿಕಾರಿಗಳ ಕಛೇರಿಯವರೆಗೆ ರೈತರ ಈ ಬೃಹತ್ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕಿನ ಸಾವಿರಾರು ಮಂದಿ ರೈತರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಚೆನ್ನಬಸವಣ್ಣ ಮಾಧ್ಯಮಗಳಿಗೆ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ(KPRS), ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ(AIKKMS)ಗಳ ಸಂಯುಕ್ತಾಶ್ರಯದಲ್ಲಿ ಈ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ-ಹಸಿರುಸೇನೆಯ ತಿಮ್ಲಾಪುರ ದೇವರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಲೆಕಾವಲು ಸಮಿತಿಯ ರಾಜ್ಯ ಕಾರ್ಯದರ್ಶಿ ಶ್ರೀಕಾಂತ್, ಬಗರ್ ಹುಕುಂ ಹೋರಾಟಗಾರರ ಸಮಿತಿಯ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಬಗರ್ ಹುಕುಂ ಹೋರಾಟಗಾರರಾದ ಬಳುವನೇರಲು ಸಿದ್ಧಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಖಂಜಾಂಚಿ ರಾಜಮ್ಮ, ಎಐಕೆಕೆಎಂಎಸ್’ನ ರಂಗಧಾಮ, ಹೋರಾಟಗಾರ ಅಲ್ಲಾಬಕ್ಷ್, ರುದ್ರಾಪುರ ಸಿದ್ಧಬಸಪ್ಪ, ರುದ್ರಾಪುರ ಪರಮೇಶ್, ಶಂಕರಪ್ಪ ಆದಿನಾಯ್ಕನಹಳ್ಳಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...