ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಆತಂಕ : ಡಾ. ಎಚ್. ವಿ. ವಾಸು

Date:

ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಾಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ. ಎಚ್.ವಿ. ವಾಸು ಆತಂಕ ವ್ಯಕ್ತಪಡಿಸಿದರು.

- Advertisement -

ತಿಪಟೂರು ನಗರದ ಗಾಂಧಿನಗರದಲ್ಲಿ ಜನಸ್ಪಂದನ ಟ್ರಸ್ಟ್, ಸೌಹಾರ್ದ ತಿಪಟೂರು, ಎಂಎಂಟಿ ಸಹಯೋಗದಲ್ಲಿ ಎಸ್ಐಆರ್ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೃತಪಟ್ಟವರು ಹಾಗೂ ವಿದೇಶಿ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಅಗತ್ಯವೇ ಸರಿ. ಆದರೆ ಅನರ್ಹರನ್ನು ಹೊರಗಿಡುವ ಹೆಸರಿನಲ್ಲಿ ಅರ್ಹ ನಾಗರಿಕರನ್ನು ಪಟ್ಟಿಯಿಂದ ಕೈಬಿಡುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ದೇಶದ ಸುಮಾರು 14 ರಾಜ್ಯಗಳಲ್ಲಿ ಈಗಾಗಲೇ ಆರು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದ್ದು, ಅವರಲ್ಲಿ ಬಹುಪಾಲು ಜೀವಂತ ನಾಗರಿಕರೇ ಆಗಿದ್ದಾರೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿಯೂ ಇದೇ ಮಾದರಿಯ ಪ್ರಕ್ರಿಯೆ ಆರಂಭವಾಗುತ್ತಿದ್ದು, ಜೂನ್ 30ರಿಂದ ಮನೆ ಮನೆಗೆ ಅಧಿಕಾರಿಗಳು ತೆರಳಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಹಿಂದೆ ಅನೇಕ ಬಾರಿ ಮತ ಚಲಾಯಿಸಿದ್ದವರೂ ಸೇರಿದಂತೆ ಎಲ್ಲರೂ ಮತ್ತೆ ದಾಖಲೆಗಳನ್ನು ಸಲ್ಲಿಸಿ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

1003531397

ಭಾರತದಲ್ಲಿ ಮತದಾನದ ಹಕ್ಕು ದೀರ್ಘ ಹೋರಾಟದ ಫಲವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲಾ ಸಮುದಾಯಗಳ ತ್ಯಾಗದ ಪ್ರತಿಫಲವಾಗಿ ಸಂವಿಧಾನ ಜಾರಿಗೆ ಬಂದ ಮೊದಲ ದಿನದಿಂದಲೇ ಸಾರ್ವತ್ರಿಕ ಮತದಾನದ ಹಕ್ಕು ನೀಡಲಾಗಿದೆ ಎಂದು ತಿಳಿಸಿದರು. 

ಮಹಿಳೆಯರು, ದಲಿತರು, ಆದಿವಾಸಿಗಳು, ಅಲೆಮಾರಿ ಸಮುದಾಯಗಳು ಹಾಗೂ ಅಲ್ಪಸಂಖ್ಯಾತರು ದಾಖಲೆಗಳ ತಾಂತ್ರಿಕ ಸಮಸ್ಯೆಯಿಂದ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು ಎಂದು ಒತ್ತಾಯಿಸಿದರು.

1003531398

ಎಸ್‌ಐಆರ್ ಪ್ರಕ್ರಿಯೆಯು ಎನ್‌ಆರ್‌ಸಿ, ಸಿಎಎ ಹಾಗೂ ಎನ್‌ಪಿಆರ್ ಜಾರಿಯ ಮುಂದುವರಿದ ಭಾಗವಾಗಿದೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ ಎಂದು ಹೇಳಿದ ಅವರು, ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲ ಸಮುದಾಯಗಳ ಜನರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಮತದಾರರ ಪಟ್ಟಿಯಿಂದ ಯಾರ ಹೆಸರೇ ಕೈಬಿಡಲ್ಪಟ್ಟರೂ ಅವರ ಪರವಾಗಿ ಕಾನೂನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ನಡೆಸಲು ಸಿದ್ಧರಾಗಬೇಕಿದೆ. ಮೊದಲಿಗೆ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

1003531399

ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ. ಬಿ. ಶಶಿಧರ್ (ಟೂಡಾ) ಮಾತನಾಡಿ  ಮತದಾನದ ಹಕ್ಕಿನ ಸಂರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು ಮಹತ್ವದ ಪಾತ್ರ ವಹಿಸಬೇಕಿದ್ದು, ಮೊದಲು ತಮ್ಮ ಮನೆಯವರು ಹಾಗೂ ನೆರೆಹೊರೆಯವರ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಪರಿಶೀಲಿಸಿ ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಅಥವಾ ಚುನಾವಣಾ ಆಯೋಗವೇ ಎಲ್ಲವನ್ನೂ ಮಾಡುತ್ತದೆ ಎಂದು ಕಾಯದೆ ನಾಗರಿಕರು ಸ್ವತಃ ಎಚ್ಚರಿಕೆ ವಹಿಸಬೇಕಾಗಿದೆ ಎಂದರು.

ಬೆರಳೆಣಿಕೆಯ ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದ ಕೋಟ್ಯಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ಈ ದೇಶದ ಕಾನೂನು ಒಪ್ಪುವುದಿಲ್ಲ ಎಂದು ಹೇಳಿದರು.

“ಎಸ್ಐಆರ್ ಸರಿಯಾಗಿ ನಡೆದರೆ ಮುಂದಿನ ಐವತ್ತು ವರ್ಷ ನಮ್ಮ ಪಕ್ಷವೇ ಅಧಿಕಾರದಲ್ಲಿರುತ್ತದೆ” ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರ ಹೇಳಿಕೆ ಚುನಾವಣಾ ಆಯೋಗ ಮತ್ತು ಬಿಜೆಪಿ ಪಕ್ಷದ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ತಿಳಿಸಿದ ಅವರು, ಮತದಾರರಿಗೆ ನೆರವಾಗುವ ಉದ್ದೇಶದಿಂದ ಜನ ಸ್ಪಂದನ ಟ್ರಸ್ಟ್ ಶೀಘ್ರದಲ್ಲೇ ಸಹಾಯವಾಣಿ (ಹೆಲ್ಪ್‌ಲೈನ್) ಆರಂಭಿಸಲಿದೆ ಎಂದು ಘೋಷಿಸಿದರು. ಮತದಾರರ ಪಟ್ಟಿಯಿಂದ ಹೆಸರು ಕೈಬಿಡದಂತೆ ಪ್ರತಿಯೊಬ್ಬರೂ ಪರಿಶೀಲನೆ ನಡೆಸಿ, ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿಯ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಜಾಗೃತ ಕರ್ನಾಟಕದ ಆದಂ ಖಾನ್ ಅವರು ಎಸ್ಐಆರ್ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು

ಕಾರ್ಯಕ್ರಮದಲ್ಲಿ ಸಿಐಟಿಯು ಮುಖಂಡ ಎನ್. ಕೆ. ಸುಬ್ರಮಣ್ಯ, ಹಜ್ರತ್ ಫಾರೋಕ್, ಜಲೀಲ್, ಸೌಹಾರ್ದ ತಿಪಟೂರಿನ ಅಲ್ಲಾಬಕಾಶ್, ಬೆಲೆ ಕಾವಲು ಸಮಿತಿ ರಾಜ್ಯ ಸಮಿತಿ ಸದಸ್ಯ ಶ್ರೀಕಾಂತ್ ಕೆಳಹಟ್ಟಿ ಸೇರಿದಂತೆ ಗಾಂಧೀನಗರದ ಎಲ್ಲ ವರ್ಗದ ನಾಗರೀಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಇಸಿ’ ಬಿಕ್ಕಟ್ಟು, ಮೋದಿ ಸರ್ಕಾರಕ್ಕೆ ಇಕ್ಕಟ್ಟು: ಕೇಂದ್ರದ ವಿರುದ್ಧವೇ ಮಿತ್ರಪಕ್ಷಗಳ ಬಂಡಾಯದ ಸುಳಿವು?

ಚುನಾವಣಾ ಆಯೋಗದ (EC) ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ...

ಪುತ್ರ ಚುನಾವಣಾ ಆಯೋಗದ ವಕೀಲರಾಗಿದ್ದರೂ ಕಾಯ್ದೆ ವಿಚಾರಣೆ: ಸುಪ್ರೀಂ ಜಡ್ಜ್ ನಡೆಗೆ ನೈತಿಕತೆಯ ಪ್ರಶ್ನೆ

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...