ತಿಪಟೂರು | ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು : ಮಾಹಿತಿ ಆಯುಕ್ತೆ ಡಾ. ಮಮತಾ

Date:

ಹೆಣ್ಣಿನಲ್ಲಿನ ಭಯವನ್ನು ಅವಳಿಗೆ ಬಳುವಳಿಯಾಗಿ ಕೊಡುತ್ತ ಬಂದಿರುವುದು ಹೆಣ್ಣೇ ಹೊರತು, ಗಂಡಲ್ಲ. ಮಹಿಳೆಯರು ತಮ್ಮಲ್ಲಿನ ದ್ವಂದ್ವ ಮತ್ತು ಭಯ ಬಿಟ್ಟು ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆಯಬೇಕು. ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಡಾ. ಮಮತಾ ಬಿ.ಆರ್. ತಿಳಿಸಿದರು. 

- Advertisement -

   ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸೆಮಿನಾರ್ ಹಾಲ್ ನಲ್ಲಿ ಬುಧವಾರ ಮಹಿಳಾ ಸಬಲೀಕರಣ ಕೋಶ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ, ಪಾಕ್, ಯುಕೆ, ಸ್ವೀಡನ್, ಸ್ವಿಜರ್ಲ್ಯಾಂಡ್ ದೇಶಗಳಲ್ಲಿನ ಹೆಣ್ಣಿನ ಸ್ಥಿತಿ ಗತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸಬಲೀಕರಣವೆಂದರೆ, ಗಂಡಿಗಿಂತ ತಾನು ಶ್ರೇಷ್ಠಳು ಎಂದು ತೋರಿಸಿಕೊಳ್ಳುವ ಅಧಿಕಾರವಲ್ಲ, ಸಬಲೀಕರಣವೆಂದರೆ ನಮ್ಮ ಅಡೆತಡೆಗಳನ್ನು ಮೀರಿ ಸಮಾಜಕ್ಕೆ ಹೆಚ್ಚಾಗಿ ಒಳ್ಳೆಯದನ್ನು ನೀಡುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಶಿಕುಮಾರ್. ಎಚ್. ಸಿ. ಮಾತನಾಡಿ, ಮಹಿಳೆಯರಿಗೆ ಮೊದಲಿಗಿಂತ ಇಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅವರು ಅಡಿಗೆ ಮನೆ, ಸಂಸಾರ ಎಂಬೆಲ್ಲ ಕಟ್ಟುಪಾಡುಗಳಿಂದ ಹೊರಬಂದು ತಮ್ಮ ಗುರಿ ಸಾಧನೆಯತ್ತ ಹೆಜ್ಜೆ ಹಾಕಬೇಕು ಎಂದರು.

Advertisements

   ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಯೋಗೀಶ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರೇಣುಕಾ.ಆರ್, ಐಕ್ಯೂಎಸಿ ಸಹ ಸಂಯೋಜಕ ಡಾ. ಸೈಯದ್ ಇಬ್ರಾಹಿಂ, ಕನ್ನಡ ವಿಭಾಗದ ಮುಖ್ಯಸ್ಥೆ ಸ್ಮಿತಾ, ಪ್ರಾಧ್ಯಾಪಕಿಯರಾದ ಸುಭದ್ರಮ್ಮ, ಅರಣಿ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ವರದಿ: ಹಣಮಂತ ಕಾಂಬಳೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷದ ನಾಯಕರನ್ನು ವಶಕ್ಕೆ ಪಡೆದ ಕ್ರಮ ಪ್ರಜಾಪ್ರಭುತ್ವದ ಮೇಲಿನ ದಾಳಿ : ಸಿ.ಬಿ. ಶಶಿಧರ್ (ಟೂಡಾ)

ನೀಟ್ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಶಾಂತಿಯುತ...

ರಾಜ್ಯದ 4 ಉತ್ಪನ್ನಗಳಿಗೆ ನಬಾರ್ಡ್ ಬೆಂಬಲ: ತಿಪಟೂರು ತೆಂಗಿಗೆ ಜಿಐ ಟ್ಯಾಗ್‌

ಕರ್ನಾಟಕದ ಸಾಂಪ್ರದಾಯಿಕ ಕೃಷಿ ಉತ್ಪನ್ನಗಳು ಮತ್ತು ಕರಕುಶಲ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ...

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಆತಂಕ : ಡಾ. ಎಚ್. ವಿ. ವಾಸು

ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು : ಸಿ. ಬಿ. ಶಶಿಧರ್ (ಟೂಡ)

 ಚುನಾವಣಾ ಆಯೋಗ ಹಮ್ಮಿಕೊಂಡಿರುವ ಈ ಎಸ್ಐಆರ್-ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು....