ತಿಪಟೂರು | ಸೇವೆಯ ಮೂಲಕ ಶಿಕ್ಷಣ ಪಡೆಯುವುದು ಸಾರ್ಥಕವಾದುದು : ಗುರುಕುಲಶ್ರೀ

Date:

ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್)ಯ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಸೇವೆ ಸಲ್ಲಿಸುವುದರ ಜೊತೆಗೆ ಶಿಕ್ಷಣ ಪಡೆಯುವುದು ಅವರ ಜೀವನದ ಸಾರ್ಥಕತೆಯನ್ನು ಹೆಚ್ಚಿಸುತ್ತದೆ ಎಂದು ಸಿಡ್ಲೇಹಳ್ಳಿ ಮಹಾಸಂಸ್ಥಾನ ಶ್ರೀಮಠ,ಗುರುಕುಲಾನಂದಾಶ್ರಮದ ಸದ್ಗುರು ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

- Advertisement -

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಿಪಟೂರು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದ ಅವರು ಸೇವೆಯ ಮೂಲಕ ಶಿಕ್ಷಣ, ಶಿಕ್ಷಣದಿಂದ ಸೇವೆ ಮಾಡುವುದರಿಂದ ಲೋಕಕಲ್ಯಾಣ ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯು ಜವಾಬ್ದಾರಿಯುತ ವ್ಯಕ್ತಿಯನ್ನು ರೂಪಿಸುತ್ತದೆ. ಜಾತಿ, ಮತ, ಜನಾಂಗ, ಧರ್ಮಗಳ ಬೇಧ-ಭಾವವಿಲ್ಲದೆ ಬೆಳೆಯಲು ಈ ಯೋಜನೆಯು ಸಹಕಾರಿಯಾದುದು. ಶ್ರದ್ಧೆ, ಏಕಾಗ್ರತೆ, ಪ್ರಾಮಾಣಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವುದರಿಂದ ಮಹತ್ತರವಾದ ಸಾಧನೆಯನ್ನು ಮಾಡಬಹುದಾಗಿದೆ. ಇದರ ಜೊತೆಗೆ ನಮ್ಮ ದೇಶದ ಸಂವಿಧಾನದ ಆಶಯದಂತೆ ಎಲ್ಲರೂ ಗೌರವಾನ್ವಿತವಾಗಿ ಬದುಕಿ, ರಾಷ್ಟ್ರಸೇವೆಗೆ ಕೈಜೋಡಿಸಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಹೆಚ್.ಸಿ ಮಾತನಾಡಿ ವಿದ್ಯಾರ್ಥಿಗಳು ಶಿಬಿರದಲ್ಲಿ ನಡೆಯುವ ಕಾರ್ಯಕ್ರಮ ಮತ್ತು ಶ್ರಮದಾನ ಮುಂತಾದವು ವಿವಿಧ ರೀತಿಯ ಕೌಶಲ್ಯಗಳನ್ನು ಕಲಿತುಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.

    ಶಿಬಿರದ ಸಂಚಾಲಕರಾದ ಮೋಹನ ಕುಮಾರ ಎಚ್.ಆರ್ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ಗಾಂಧೀಜಿಯವರ ಕನಸಿನ ಕೂಸಾಗಿದ್ದು, ಸೇವೆಯ ಮೂಲಕ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಾಸಗೊಂಡು ಸಮಾಜ ಸೇವೆಯ ಪ್ರಜ್ಞೆಯನ್ನು ಬೆಳೆಸುತ್ತದೆ. ಶಿಬಿರಾರ್ಥಿಗಳು ಹೊಸ ಪರಿಸರಕ್ಕೆ ತಮ್ಮನ್ನು ಒಗ್ಗಿಸಿಕೊಂಡರೆ ಅಲ್ಲಿನ ಸಮಸ್ಯೆಗಳು ಅರಿವಾಗುತ್ತದೆ. ಇದರಿಂದ ಗ್ರಾಮೀಣ ಭಾರತದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸ್ಥಿತಿಗಳನ್ನು ಅರಿಯುವಂತೆ ಮಾಡುವಲ್ಲಿ ಶಿಬಿರವು ಸಹಕಾರಿಯಾಗಿದೆ ಎಂದರು.

 ವಿಶೇಷ ಆಹ್ವಾನಿತರಾದ ಬಿಲ್ಲೇಮನೆ ಚಂದ್ರಶೇಖರ್ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯು ಶಿಬಿರದಿಂದ ಉತ್ತಮವಾಗಿ ಬದುಕುವ ಮಾರ್ಗವನ್ನು ಕಲಿಯಬೇಕು. ತಮ್ಮ ಪೋಷಕರಿಗೆ ಹೆಚ್ಚಿನ ಗೌರವ ತರುವ ಕಾರ್ಯವನ್ನು ಮಾಡಿದರೆ ಸಾರ್ಥಕವಾಗುತ್ತದೆ ಎಂದರು.

ಹಿಂಡಿಸ್ಕೆರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ದೇವರಾಜು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬೆಳೆಯುತ್ತಾರೆ. ಗುರು ಹಿರಿಯರನ್ನು ಗೌರವಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ಯಾವ ಉದ್ಯೋಗ ಸಿಗದಿದ್ದರೂ ನಿರಾಶರಾಗದಿರಿ, ಹೈನುಗಾರಿಕೆಯನ್ನು ಅಳವಡಿಸಿಕೊಳ್ಳುವುದರ ಮೂಲಕ ಬದುಕನ್ನು ಕಟ್ಟಿಕೊಳ್ಳಿ ಎಂದರು.

 ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಸ್ಮಿತಾ ಹೆಚ್.ಎಸ್, ಭಾರತಿ ವೈ.ಕೆ , ಡಾ. ತುಕಾರಾಮ ವಿ, ಸಹ ಶಿಬಿರಾಧಿಕಾರಿಗಳಾದ ಜಾಯಿದಾಬಿ ಖಾನಬೋಗಿ, ಡಾ. ವೆಂಕಟೇಶ್ ಎಲ್. ಎಂ, ಜ್ಯೋತಿ ಎಸ್, ವೇದಮೂರ್ತಿ ಮುಂತಾದವರು ಭಾಗವಹಿಸಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನಾ ಧರಣಿ : ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ...

ತಿಪಟೂರು | ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷದ ನಾಯಕರನ್ನು ವಶಕ್ಕೆ ಪಡೆದ ಕ್ರಮ ಪ್ರಜಾಪ್ರಭುತ್ವದ ಮೇಲಿನ ದಾಳಿ : ಸಿ.ಬಿ. ಶಶಿಧರ್ (ಟೂಡಾ)

ನೀಟ್ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಶಾಂತಿಯುತ...

ರಾಜ್ಯದ 4 ಉತ್ಪನ್ನಗಳಿಗೆ ನಬಾರ್ಡ್ ಬೆಂಬಲ: ತಿಪಟೂರು ತೆಂಗಿಗೆ ಜಿಐ ಟ್ಯಾಗ್‌

ಕರ್ನಾಟಕದ ಸಾಂಪ್ರದಾಯಿಕ ಕೃಷಿ ಉತ್ಪನ್ನಗಳು ಮತ್ತು ಕರಕುಶಲ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ...

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಆತಂಕ : ಡಾ. ಎಚ್. ವಿ. ವಾಸು

ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...