ತಿಪಟೂರು | ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ : ಡಾ. ಶಶಿಕುಮಾರ್. ಎಚ್.ಸಿ.

Date:

ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಕಾರ್ಯಕ್ರಮವೆಂದು ಪರಿಗಣಿಸದೆ, ನಮ್ಮೆಲ್ಲರ ಹಬ್ಬವೆಂದು ಭಾವಿಸಿ ಅರ್ಥಪೂರ್ಣವಾಗಿ ಆಚರಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಶಿಕುಮಾರ್. ಎಚ್.ಸಿ. ಹೇಳಿದರು.

- Advertisement -

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಸುಲಭವಾಗಿ ದೊರೆತದ್ದಲ್ಲ. ಅನೇಕ ಮಹನೀಯರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ. ಅವರ ಬಲಿದಾನ ಸಾರ್ಥಕವಾಗಬೇಕಾದರೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಅರಿತು, ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಸ್ವಾತಂತ್ರ್ಯದ ಜೊತೆಗೆ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ರಾಷ್ಟ್ರದ ಏಕತೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಯುವಜನರು ಅರಿವು ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಂತರ ಲೆಫ್ಟಿನೆಂಟ್ ಡಾ. ವಿರೂಪಾಕ್ಷ. ಜೆ.ಡಿ. ಅವರ ನೇತೃತ್ವದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವೇದಿಕೆ ಕಾರ್ಯಕ್ರಮದಲ್ಲಿ ದೇಶಪ್ರೇಮ, ರಾಷ್ಟ್ರದ ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕ ಜೀವನವನ್ನು ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.

Advertisements

ಕಾರ್ಯಕ್ರಮದ ನಂತರ ಭಾಗವಹಿಸಿದ್ದ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಕಾಲೇಜಿನ ವಿವಿಧ ವಿಭಾಗಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...