ತಿಪಟೂರು | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನಾ ಧರಣಿ : ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ, ತಿಪಟೂರು ನಗರದ ನಗರಸಭೆ ವೃತ್ತದಲ್ಲಿ ಶನಿವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ (ಟೂಡಾ), ಕಳೆದ ಹತ್ತು ವರ್ಷಗಳಲ್ಲಿ ಏಳು ವರ್ಷ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಈ ವರ್ಷವೂ ಅದೇ ಪರಿಸ್ಥಿತಿ ಮರುಕಳಿಸಿದೆ. ಹೀಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ದೇಶದಲ್ಲಿ 21 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಎಂದು ವಿದ್ಯಾರ್ಥಿಗಳು ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವ ಮತ್ತು ಹೊಣೆಗಾರಿಕೆ ಕೇಳುತ್ತಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

1003709178

ವಿದ್ಯಾರ್ಥಿಗಳ ನ್ಯಾಯಯುತ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗದ ಕೇಂದ್ರ ಸರ್ಕಾರ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಬರ್ಬರವಾಗಿ ಲಾಠಿ ಪ್ರಹಾರ ನಡೆಸಿದೆ. ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ನಿಯಂತ್ರಿಸಲು ಬಳಸುವ ಪೆಲೇಟ್ ಗುಂಡುಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೂ ಬಳಸಲಾಗಿದೆ. ಬಿಜೆಪಿ ಬೆಂಬಲಿತ ಬಾಡಿಗೆ ಗೂಂಡಾಗಳು ಹಾಗೂ ಆ ಪಕ್ಷದ ಕೃಪಾಪೋಷಿತ ಸಂಘಟನೆಗಳ ಕಾರ್ಯಕರ್ತರನ್ನು ಕರೆಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಎಲ್ಲ ಘಟನೆಗಳಿಗೆ ಅಲ್ಲಿನ ಪೊಲೀಸರು ರಕ್ಷಣೆ ನೀಡಿರುವುದು ಖಂಡನೀಯ ಎಂದು ಆರೋಪಿಸಿದರು.

ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಇಲ್ಲ. ಆ ದೇಶವನ್ನು ಉದಾಹರಿಸುತ್ತಾ ಭಾರತದಲ್ಲೂ ಸರ್ವಾಧಿಕಾರಿ ಆಡಳಿತ ಸ್ಥಾಪಿಸಲು ಕೇಂದ್ರ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ. ಆದರೆ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು ವಿದ್ಯಾರ್ಥಿಗಳ ಮೇಲೆ ನಡೆಸಿರುವ ಲಾಠಿ ಪ್ರಹಾರ ಮತ್ತು ಅದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಹಿಂಸಾತ್ಮಕ ಹಾಗೂ ಶಾಂತಿಯುತ ಹೋರಾಟವು, ದೇಶದ ಯುವಜನರ ಧ್ವನಿಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಆದರೆ ಆ ಧ್ವನಿಯನ್ನು ಯಾರಿಂದಲೂ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇಂದಿನ ಯುವಜನತೆ ಸರ್ಕಾರದಿಂದ ಜವಾಬ್ದಾರಿತನ (Accountability) ಕೇಳುತ್ತಿದೆ. ಪ್ರಶ್ನೆಗಳನ್ನು ಕೇಳುವ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಬದಲು, ಅವರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ದೇಶದಲ್ಲಿ ದ್ವೇಷ ಮತ್ತು ವಿಭಜನೆಯ ರಾಜಕಾರಣಕ್ಕೆ ಅವಕಾಶ ನೀಡದೆ, ಶಾಂತಿ, ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕರೆ ನೀಡಿದರು.

ಹಿರಿಯ ಸಾಹಿತಿ ಹಾಗೂ ಕತೆಗಾರ ಎಸ್. ಗಂಗಾಧರಯ್ಯ ಮಾತನಾಡಿ, ಕೇಂದ್ರ ಸರ್ಕಾರ ಯುವಜನರೊಂದಿಗೆ ನಿರ್ಲಜ್ಜವಾಗಿ ನಡೆದುಕೊಂಡಿದೆ. ದೆಹಲಿಯ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಸರ್ಕಾರ ಸಕಲ ಪ್ರಯತ್ನ ನಡೆಸಿದ್ದು, ಮೂರು ಸಾವಿರ ಗೂಂಡಾಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದು ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೂ ವಿದ್ಯಾರ್ಥಿಗಳ ಹೋರಾಟ ದಿಕ್ಕುತಪ್ಪಿಲ್ಲ ಎಂದು ಹೇಳಿದರು.

ನೀಟ್ ಅಕ್ರಮದಿಂದ 21 ಮಂದಿ ವಿದ್ಯಾರ್ಥಿಗಳ ಸಾವಿಗೆ ನೈತಿಕ ಹೊಣೆ ಹೊತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕೆ ಇಷ್ಟೊಂದು ಭಯ ಎಂದು ಪ್ರಶ್ನಿಸಿದ ಅವರು, ಒಬ್ಬ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆಯಲೂ ಸಾಧ್ಯವಾಗದ ಅಸಹಾಯಕ ಪ್ರಧಾನಮಂತ್ರಿಯನ್ನು ದೇಶ ನೋಡುತ್ತಿದೆ ಎಂದು ಟೀಕಿಸಿದರು.

1003709179

ಪ್ರಧಾನಮಂತ್ರಿಯವರು ಮಧ್ಯರಾತ್ರಿ ವಿಡಿಯೋ ಸಂದೇಶ ನೀಡುವ ಬದಲು, ಸುದ್ದಿಗೋಷ್ಠಿ ನಡೆಸಿ ದೇಶದ ಜನರ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಸಂವಿಧಾನಬದ್ಧವಾಗಿ ದೊರೆತ ಅಧಿಕಾರವನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಹೇಳಿದರು.

ಕೇಂದ್ರದ ಮೋದಿ ಸರ್ಕಾರ ಜನರ ಮೇಲೆ ಎರಚುತ್ತಿರುವ ಮಂಕುಬೂದಿ ಈಗ ಯುವಜನರಿಗೆ ಅರ್ಥವಾಗಿದೆ. ಇನ್ನು ಮುಂದೆ ಈ ರೀತಿಯ ರಾಜಕಾರಣ ನಡೆಯುವುದಿಲ್ಲ. ನೀಟ್ ಪರೀಕ್ಷೆಯನ್ನು ರಾಜ್ಯಗಳಿಗೇ ವಹಿಸಬೇಕು. ರಾಜ್ಯಗಳು ತಮ್ಮದೇ ಪರೀಕ್ಷಾ ವ್ಯವಸ್ಥೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಸಾಮರ್ಥ್ಯ ಹೊಂದಿವೆ. ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ಯೋಗ್ಯತೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಆರೋಪಿಸಿದರು.

ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೋಟಿ ರೂಪಾಯಿ ಪರಿಹಾರ ನೀಡಬಹುದು. ಆದರೆ ಮಕ್ಕಳ ಜೀವವನ್ನು ಮರಳಿ ನೀಡಲು ಸಾಧ್ಯವಿಲ್ಲ. ಈ ನೋವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗಂಗಾಧರಯ್ಯ ಹೇಳಿದರು.

ರೖತ ಮುಖಂಡ ಚನ್ನಬಸವಣ್ಣ ಮಾತನಾಡಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತಿಪಟೂರು ಪ್ರಗತಿಪರ ಸಂಘಟನೆಗಳ ಸಂಪೂರ್ಣ ಬೆಂಬಲ ಇರಲಿದೆ. ಯುವಜನರ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. 

ಪ್ರತಿಭಟನೆ ನಡೆಯುತ್ತಿದ್ದ ಮಧ್ಯಾಹ್ನದ ವೇಳೆಗೆ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ ವಿಷಯ ತಿಳಿಯುತ್ತಿದ್ದಂತೆ ಪ್ರತಿಭಟನಾ ನಿರತರು ಪಾಟಕಿ ಸಿಡಿಸಿ ಜಯಘೋಷ ಮೊಳಗಿಸಿದರು

ಪ್ರತಿಭಟನೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...

ಗುಬ್ಬಿಯಲ್ಲಿ ಅರ್ಧಕ್ಕೆ ನಿಂತ ವೈಟ್ ಟಾಪಿಂಗ್ ರಸ್ತೆ: ಧೂಳು, ಗುಂಡಿಗಳ ನಡುವೆ ಜನರ ಪರದಾಟ

ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್...

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...