ತಿಪಟೂರು | ಎಸ್ಐಆರ್ ಪ್ರಕ್ರಿಯೆ ಕುರಿತು ಜೂನ್ 19 ರಂದು ತರಬೇತಿ ಕಾರ್ಯಾಗಾರ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜನಸ್ಪಂದನ ಟ್ರಸ್ಟ್ ಹಾಗೂ ಜನಪರ ಸಂಘಟನೆಗಳ ಸಹಯೋಗದಲ್ಲಿ ಜೂನ್ 19ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ (ಟೂಡ) ತಿಳಿಸಿದ್ದಾರೆ.

- Advertisement -

ತಿಪಟೂರು ನಗರದ ಬಿ.ಎಚ್. ರಸ್ತೆಯ ಪಲ್ಲಾಗಟ್ಟಿ ಅಡವಪ್ಪ ಲೇಔಟ್ ಸಮೀಪದ ರೋಟರಿ ಭವನದಲ್ಲಿ ಜೂನ್ 19ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಾಗಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಭಾರತ ಸಂವಿಧಾನವು ನಾಗರಿಕರಿಗೆ ನೀಡಿರುವ ಅತ್ಯಮೂಲ್ಯ ಹಕ್ಕಾದ ಮತದಾನದ ಹಕ್ಕನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ಉಳಿಯಲಿದ್ದು, ಈ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸಿ.ಬಿ. ಶಶಿಧರ್ (ಟೂಡ) ತಿಳಿಸಿದ್ದಾರೆ.

ಪ್ರತಿಯೊಬ್ಬ ಮತದಾರರ ಮತವನ್ನು ಉಳಿಸುವುದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವುದು ಹಾಗೂ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಾಗಾರದಲ್ಲಿ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಮನವಿ ಮಾಡಿದ್ದಾರೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7899810812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...