ತುಮಕೂರು | ಡಿಸಿಎಂ ಪರಮೇಶ್ವರ್‌ ತವರಲ್ಲಿ ಮಲಹೊರುವ ಪದ್ದತಿ ಜೀವಂತ

Date:

ಮಲಹೊರುವ ಅನಿಷ್ಠ ಪದ್ದತಿ ಕಾನೂನಿನ ಮೂಲಕ ನಿಷೇಧಗೊಂಡಿದ್ದರೂ ಕೂಡ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ತವರು ತುಮಕೂರು ನಗರದಲ್ಲಿ ಕಂಡುಬಂದ ಘಟನೆಯೇ ಇನ್ನೂ ಮಲಹೊರುವ ಪದ್ದತಿ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ.

- Advertisement -

ನಗರದ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರನ್ನು ಬರಿಗೈ ಮತ್ತು ಬರಿಮೈಯಲ್ಲೇ ಶೌಚಗುಂಡಿಯ ಮಲವನ್ನು ಬಾಚಿಸಿ ಟ್ರ್ಯಾಕ್ಟರ್‌ಗೆ ತುಂಬಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ತುಮಕೂರಿನ ನಂದೀಶ್, ಅರುಣ್, ಮಧುಗಿರಿ ಮೂಲದ ಮೂರ್ತಿ ನಾಯ್ಕ ಹಾಗೂ ನವೀನ್ ಎಂಬ ಕಾರ್ಮಿಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಶೌಚಗುಂಡಿಯಲ್ಲಿದ್ದ ಮಲವನ್ನು ಕೈಯಿಂದಲೇ ಹೊರತೆಗೆದು ಸಾಗಿಸುವ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ತುಮಕೂರು ನಗರದಲ್ಲಿ ಮಲಹೊರುವ ಪದ್ದತಿ 1

ಕಾರ್ಮಿಕರ ಪ್ರಕಾರ, “ಆರಂಭದಲ್ಲಿ ಮಣ್ಣು ತುಂಬುವ ಕೆಲಸವಿದೆ ಎಂದು ಕರೆತಂದಿದ್ದು, ಸ್ಥಳಕ್ಕೆ ಬಂದ ನಂತರ ಅದು ಶೌಚಗುಂಡಿ ಎಂಬುದು ತಿಳಿಯಿತು. ಹೊಟ್ಟೆಪಾಡಿನ ಕಾರಣದಿಂದ ಕೆಲಸ ಒಪ್ಪಿಕೊಳ್ಳಬೇಕಾಯಿತು. ಇಂತಹ ಕೆಲಸ ಮಾಡಿಸುವುದು ಕಾನೂನುಬಾಹಿರ ಎಂಬ ಮಾಹಿತಿ ನಮಗೆ ಇರಲಿಲ್ಲ. ಇನ್ನು ಮುಂದೆ ಇಂತಹ ಕೆಲಸಕ್ಕೆ ಹೋಗುವುದಿಲ್ಲ” ಎಂಬ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಮಲಹೊರುವ ಪದ್ಧತಿಯನ್ನು ನಿಷೇಧಿಸಿ ಕಠಿಣ ಕಾನೂನು ಜಾರಿಯಲ್ಲಿದ್ದರೂ, ತುಮಕೂರಿನ ಮಧ್ಯಭಾಗದಲ್ಲಿಯೇ ಈ ಅಮಾನವೀಯ ಪದ್ಧತಿ ಮುಂದುವರಿದಿರುವುದು ಆತಂಕ ಮೂಡಿಸಿದೆ. ವಿಶೇಷವಾಗಿ ಈ ಕಾರ್ಯವನ್ನು ಕೆಇಬಿ ಎಂಜಿನಿಯರ್ಸ್ ಸಂಘದ ವತಿಯಿಂದ ಮಾಡಿಸಿರುವ ಆರೋಪ ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ನೀಡಿದೆ.

ಇದಕ್ಕೂ ಮುನ್ನ ಕೊರಟಗೆರೆ ಬಸ್ ನಿಲ್ದಾಣದಲ್ಲಿ ದಲಿತ ಬಾಲಕಾರ್ಮಿಕನಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆ ವರದಿಯಾಗಿತ್ತು. ಇದೀಗ ತುಮಕೂರು ನಗರದಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಪ್ರಶ್ನಿಸುವಂತಾಗಿದೆ.

“ಘಟನೆಯ ಮಾಹಿತಿ ದೊರೆತರೂ ಸ್ಥಳಕ್ಕೆ ಭೇಟಿ ನೀಡದಿರುವುದು ತುಮಕೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಯಲಿಗೆಳೆದಿದೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಇದನ್ನೂ ಓದಿದ್ದೀರಾ? ದಲಿತ ಜನಾಗ್ರಹ ಸಮಾವೇಶ ; ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ದಲಿತ ಮುಖಂಡ ಜಟ್ಟಿ ಅಗ್ರಹಾರ ನಾಗರಾಜು, “ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಮಲಹೊರುವ ಪದ್ದತಿ 2

ಮಲಹೊರುವ ಅನಿಷ್ಠ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಸರ್ಕಾರದ ಹೇಳಿಕೆಗಳ ನಡುವೆಯೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು, ಕಾನೂನು ಜಾರಿಯ ಪರಿಣಾಮಕಾರಿತ್ವದ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಅಧಿಕಾರಿಗಳು ಈ ಪ್ರಕರಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...