ತುಮಕೂರು | ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ

Date:

 ವಿದ್ಯಾರ್ಥಿಗಳಲ್ಲಿ ರ‍್ಯಾಗಿಂಗ್‌ನ ಮಾರಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಕ್ಯಾಂಪಸ್ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ ನಗರದ ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರ‍್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

- Advertisement -

ಕ್ಯಾಂಪಸ್‌ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಗಣೇಶ್ ಬಿ. ಉದ್ಘಾಟಿಸಿ ಮಾತನಾಡಿ, ಕ್ಯಾಂಪಸ್‌ನಲ್ಲಿ ರ‍್ಯಾಗಿಂಗ್ ತಡೆಯುವ ಕ್ರಮಗಳು ಹಾಗೂ ವಿದ್ಯಾರ್ಥಿಗಳನ್ನು ಕಿರುಕುಳ, ಬೆದರಿಕೆ ಮತ್ತು ತಾರತಮ್ಯದಿಂದ ರಕ್ಷಿಸುವ ಅಗತ್ಯವನ್ನು ವಿವರಿಸಿದರು. ಪ್ರತಿಯೊಬ್ಬರೂ ಘನತೆ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣ ಪಡೆಯುವ ವಾತಾವರಣ ಸೃಷ್ಟಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಹಾಗೂ ರ‍್ಯಾಗಿಂಗ್ ಸಮಸ್ಯೆಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಪಿ.ಎಂ. ಅಮ್ಮಂಗಿ ಮಾತನಾಡಿ, ರ‍್ಯಾಗಿಂಗ್‌ನ ದುಷ್ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಗೌರವದ ಅಗತ್ಯದ ಬಗ್ಗೆ ಬೆಳಕು ಚೆಲ್ಲಿದರು. ರ‍್ಯಾಗಿಂಗ್ ತಡೆಯಲು ಮತ್ತು ಕ್ಯಾಂಪಸ್ ಸುರಕ್ಷತೆ ಖಚಿತಪಡಿಸಲು ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಪೊಲೀಸರ ನಡುವೆ ಸಹಕಾರ ಅಗತ್ಯ ಎಂದರು.

ಪ್ರಾಂಶುಪಾಲ ಡಾ. ಪ್ರವೀಣ್ ಕುಡ್ವ ಮಾತನಾಡಿ, ಶಿಸ್ತು, ಪರಸ್ಪರ ಗೌರವ ಮತ್ತು ಆರೋಗ್ಯಕರ ಶೈಕ್ಷಣಿಕ ವಾತಾವರಣವನ್ನು ಕಾಪಾಡಿಕೊಳ್ಳಬೇಕು. ಜೂನಿಯರ್ ಮತ್ತು ಸೀನಿಯರ್ ವಿದ್ಯಾರ್ಥಿಗಳ ನಡುವೆ ಸಕಾರಾತ್ಮಕ ಬಾಂಧವ್ಯ ಬೆಳೆಸಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ವಾರ್ಡನ್ ಡಾ. ರವಿ ಭಾಸ್ಕರ್, ಪೋಷಕರ ಪ್ರತಿನಿಧಿ ಶ್ರೀಮತಿ ಅನಿತಾ, ಸಂಸ್ಥೆಯ ಕೌನ್ಸಿಲರ್ ಡಾ. ಚೈತನ್ಯ ವರ್ಧನ್, ‘ಕಲ್ಪತರು ವಾಯ್ಸ್’ ಇಂಗ್ಲಿಷ್ ದಿನಪತ್ರಿಕೆಯ ಮುಖ್ಯ ಸಂಪಾದಕಿ ಹುಸ್ನಾ ಅರಾ ಭಾಗವಹಿಸಿದ್ದರು. ರ‍್ಯಾಗಿಂಗ್ ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಅರಿವು, ಜಾಗರೂಕತೆ ಮತ್ತು ಸಾಮುದಾಯಿಕ ಜವಾಬ್ದಾರಿಯ ಪ್ರಾಮುಖ್ಯತೆಯನ್ನು ಈ ಕಾರ್ಯಕ್ರಮ ಮತ್ತಷ್ಟು ಪುಷ್ಟೀಕರಿಸಿತು.

eedina
ಈ ದಿನ ಡೆಸ್ಕ್‌
Website | + posts

Previous article

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ಗುಬ್ಬಿ | ರೈತನ ಜಮೀನು ಹರಾಜಿಗೆ ವಿರೋಧ: ನ. 2ರಂದು ರೈತಸಂಘದ ಪ್ರತಿಭಟನೆ

 ಬರಗಾಲದಿಂದ ಬೆಳೆ ನಷ್ಟ ಹಾಗೂ ಕೊಳವೆಬಾವಿಗಳು ಬತ್ತಿರುವ ಸಂಕಷ್ಟದ ನಡುವೆಯೇ ಸಾಲ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...