ತುಮಕೂರು | ವಿದ್ಯುತ್ ಪರಿವರ್ತಕಗಳ ಸುತ್ತಲಿನ ಬೇಲಿಗಿಡಗಳ ತೆರವಿಗೆ ಆಗ್ರಹ

Date:

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.

- Advertisement -

ತಾಲೂಕಿನ ಎಸ್ ಕೊಡಗೀಹಳ್ಳಿ, ಜಿಹೊಸಹಳ್ಳಿ, ಹಿಂಡಿಸಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ತಂತಿಗೆ ಆವರಿಸಿಕೊಂಡಿರುವ ಬೇಲಿಗಳನ್ನು ತೆರವು ಮಾಡದ ಕಾರಣ ರೈತಾಪಿ ಜನರ ತೋಟದ ಪಂಪ್‌ಸೆಟ್‌ಗಳು ಸುಟ್ಟು ಹೋಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಿ.ಎಸ್ ಪುರ, ಗುಬ್ಬಿ ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯುತ್ ತಂತಿ ಕೆಳಗೆ ಮಕ್ಕಳು ಅಥವಾ ಜಾನುವಾರುಗಳು ತೆರಳಿ ಗಿಡಮರ ಸ್ಪರ್ಶಿಸಿದರೂ ಜೀವ ಹೋಗುವ ಆತಂಕವಿದೆ. ಕೂಡಲೇ ಕ್ರಮ ವಹಿಸಿದೇ ಇದ್ದರೆ ಹೋರಾಟದ ಮೂಲಕ ಸರ್ಕಾರದ ಗಮನಕ್ಕೆ ತರುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2023 10 22 at 11.16.17 AM

“11 ಕೆವಿಜಿ ವ್ಯಾಟ್ ವಿದ್ಯುತ್ ಸಾಮರ್ಥ್ಯದ ತಂತಿಗೆ ಅಡ್ಡಲಾಗಿ ಇರಿಸಿರುವ ಪರಿಕರ ರಸ್ತೆಯ ಹೊರ ಚಾಚಿದೆ. ಇದು ತುಂಬಾ ಅಪಾಯಕಾರಿ. ರಸ್ತೆಯಲ್ಲಿ ನಿತ್ಯ ಸಂಚರಿಸುವ ಲಾರಿಗಳು, ಗೂಡ್ಸ್ ವಾಹನಗಳಿಗೆ ತಂತಿಯು ತಗುಲುವ ಸಮೀಪದಲ್ಲಿದೆ. ವಿದ್ಯುತ್ ಸ್ಪರ್ಷಿಸಿ ವಾಹನ ಸವಾರರು ಸಾವನ್ನಪ್ಪಿದರೆ, ಅದಕ್ಕೆ ಬೆಸ್ಕಾಂ ಅಧಿಕಾರಿಗಳು ನೇರ ಹೊಣೆಯಾಗುತ್ತಾರೆ” ಎಂದು ಸ್ಥಳೀಯ ಮುಖಂಡ ದಿವಾಕರ್ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

WhatsApp Image 2023 10 22 at 11.18.45 AM

“ಜಿ ಹೊಸಹಳ್ಳಿಯಲ್ಲಿ ರಸ್ತೆಯ ಬದಿಯಲ್ಲೇ ವಿದ್ಯುತ್ ಕಂಬವಿದೆ. ಆದರೆ, ವಿದ್ಯುತ್ ಕಂಬವೇ ಕಾಣದಂತಹ ಮಟ್ಟಕ್ಕೆ ಬೇಲಿಗಳು ಬೆಳೆದುಕೊಂಡಿವೆ. ಇದು ಗ್ರಾಮದ ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗಲಿದೆ. ಪಕ್ಕದಲ್ಲಿರುವ ಮನೆಯ ನಿವಾಸಿಗಳು ನಿತ್ಯ ಪ್ರಾಣ ಕೈಯಲ್ಲಿಡಿದು ಓಡಾಡುವ ದುಸ್ಥಿತಿ ಬಂದಿದೆ” ಎನ್ನುತ್ತಾರೆ ಹೊಸಹಳ್ಳಿ ಗ್ರಾಮದ ನಿವಾಸಿ ಅನುಸೂಯಮ್ಮ.

“ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಏರುಪೇರು ಸಮಸ್ಯೆ ಕಂಡು ಬರುತ್ತಿದೆ. ಬೇಲಿ ಬೆಳೆದು ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋಗುತ್ತಿವೆ. ಈ ಜೊತೆಗೆ ಮನೆಗಳಲ್ಲಿ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿವೆ. ಹೀಗೆ ಲಕ್ಷಾಂತರ ರೂ.ಗಳ ವಸ್ತುಗಳು ಕಳೆದುಕೊಂಡ ರೈತಾಪಿ ವರ್ಗಕ್ಕೆ ಪಂಪ್ ಸೆಟ್ ಗಳು ಕರೆಂಟ್ ವ್ಯತ್ಯಯಕ್ಕೆ ಸಿಲುಕಿ ಪರದಾಡಿದ್ದಾರೆ” ಎಂದು ಸಾಮಾಜಿಕ ಹೋರಾಟಗಾರ ನಾಗಸಂದ್ರ ವಿಜಯಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...