ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

Date:

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ 220 ಫಲಾನುಭವಿಗಳಿಗೂ ನಿವೇಶನ ಹಂಚಿಕೆ ಮಾಡಬೇಕು. ಲಾಟರಿ ಮೂಲಕ ಕೇವಲ 32 ಮಂದಿಯನ್ನು ಆಯ್ಕೆ ಮಾಡುವ ಕ್ರಮ ಕೈಬಿಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಮಂಜುನಾಥ್ ಹೆತ್ತೇನಹಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಹೊನ್ನುಡಿಕೆ ಗ್ರಾಮ ಪಂಚಾಯಿತಿಯಲ್ಲಿ ನವೆಂಬರ್ 11ರಂದು ಆಶ್ರಯ ನಿವೇಶನ ಹಂಚಿಕೆ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಮುಂದಿಟ್ಟುಕೊಂಡು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುವುದಾಗಿ ತಿಳಿಸಲಾಗಿತ್ತು. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ, ಲಾಟರಿ ಮೂಲಕ ಆಯ್ಕೆ ಮಾಡುವ ಬದಲು ಸ್ಥಳೀಯ ನಿವಾಸಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು ಎಂದು ಮಾಹಿತಿ ನೀಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...
1004411992

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋಳಂಬಳ್ಳಿ ಗ್ರಾಮದ ಸರ್ವೆ ನಂಬರ್ 62/2ರಲ್ಲಿ 4 ಎಕರೆ 12 ಗುಂಟೆ ಹಾಗೂ ಹುಳ್ಳೇನಹಳ್ಳಿ ಮತ್ತು ವೀರನಾಯಕನಹಳ್ಳಿ ವ್ಯಾಪ್ತಿಯ ಸರ್ವೆ ನಂಬರ್ 127/2ರಲ್ಲಿ 3 ಎಕರೆ 22 ಗುಂಟೆ ಸರ್ಕಾರಿ ಜಮೀನು ಲಭ್ಯವಿದೆ. ಹಾಗೂ ಆಶ್ರಯ ಯೋಜನೆ ನಿವೇಶನ ಹಂಚಿಕೆಗೆ ಮೀಸಲಿರಿಸಿವುದುಪಹಣಿಯಲ್ಲಿ ದಾಖಲಾಗಿದೆ. ಈ ಜಮೀನುಗಳನ್ನು ನಿವೇಶನಗಳನ್ನಾಗಿ ಪರಿವರ್ತಿಸಿ, ಅರ್ಜಿ ಸಲ್ಲಿಸಿರುವ 220 ಫಲಾನುಭವಿಗಳಿಗೂ ನಿವೇಶನ ಹಂಚಿಕೆ ಮಾಡಬೇಕು ಎಂದು ಮುಖಂಡ ಬೂಚನಹಳ್ಳಿ ವೆಂಕಟೇಶ್ ಒತ್ತಾಯಿಸಿದರು.

ವಸತಿ ಸೌಲಭ್ಯಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿರುವ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು. ಕೇವಲ 32 ಮಂದಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಉಳಿದವರನ್ನು ವಂಚಿಸುವ ಕ್ರಮ ಸರಿಯಲ್ಲ. ಲಭ್ಯವಿರುವ ಸರ್ಕಾರಿ ಜಮೀನನ್ನು ಬಳಸಿಕೊಂಡು ಎಲ್ಲ 220 ಫಲಾನುಭವಿಗಳಿಗೂ ನಿವೇಶನ ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ರುದ್ರೇಶ್ ಆಗ್ರಹಿಸಿದರು

ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣಪ್ಪ, ಅಮಿತ್, ಶಾಜೂ, ನರಸಿಂಹಮೂರ್ತಿ(ಪಾಪಣ್ಣ), ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಗುಬ್ಬಿ | ರಸ್ತೆ ವಿವಾದಕ್ಕೆ ವಿದ್ಯಾರ್ಥಿನಿಯ ಶಿಕ್ಷಣ ಬಲಿ?

ತೋಟದ ಸಾಲಿನಲ್ಲಿನ ರಸ್ತೆಗೆ ಓಡಾಡದಂತೆ ನಿರ್ಬಂಧ ಹೇರಿ ಒಂದು ಕುಟುಂಬಕ್ಕೆ ದಿಗ್ಬಂಧನ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...