ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

Date:

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದರೂ, ಇದುವರೆಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಆರೋಪಿಸಿದರು.

- Advertisement -

ತುಮಕೂರು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ಜಿಲ್ಲೆಯ ಶೇ.70ರಷ್ಟು ಭೂಮಿಯಲ್ಲಿ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿರುವ ಶೇ.30ರಷ್ಟು ಪ್ರದೇಶದಲ್ಲಿನ ಬೆಳೆಗಳೂ ಸಕಾಲದಲ್ಲಿ ಮಳೆಯಾಗದ ಕಾರಣ ಒಣಗುತ್ತಿವೆ. ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಮುಂದಿನ 15ರಿಂದ 20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಗೋಶಾಲೆಗಳನ್ನು ತೆರೆಯಬೇಕು. ರೈತರಿಗೆ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು. ಕೃಷಿಕರು ಹಾಗೂ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಡೆಯಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ವಿಜಿ-ರಾಮ್-ಜಿ) ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ.75ರಷ್ಟು ನೀರಿನ ಸಂಗ್ರಹವಿತ್ತು. ಆಗಲೇ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರು ಎಚ್ಚೆತ್ತುಕೊಂಡು ಜಿಲ್ಲೆಯ ಕೆರೆ, ಕಟ್ಟೆಗಳಿಗೆ ನೀರು ಹರಿಸಿದ್ದರೆ ಅಂತರ್ಜಲ ಕುಸಿತವನ್ನು ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಜಿಲ್ಲೆಗೆ ಬರಬೇಕಾಗಿದ್ದ ನೀರನ್ನು ತಮಿಳುನಾಡಿಗೆ ಹರಿಸಿ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ದೂರಿದರು.

ಜಿಲ್ಲೆಯ ತೋಟಗಳು ಹಾಗೂ ತುಡಿಕೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಲಾದರೂ ಜಿಲ್ಲಾಡಳಿತ ಜಿಲ್ಲೆಯ ಎಲ್ಲ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು ಎಂದು ಎ. ಗೋವಿಂದರಾಜು ಒತ್ತಾಯಿಸಿದರು.

ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆರಂಭವಾಗಿದ್ದು, ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಒಂದು ಗಂಟೆಯೂ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ. ನಿರ್ಮಾಣಗೊಂಡಿರುವ 220 ಕೆ.ವಿ. ಉಪಕೇಂದ್ರಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ. ಬೆಸ್ಕಾಂ ಅಧಿಕಾರಿಗಳು ಅಸಹಾಯಕರಾಗಿದ್ದಾರೆ ಎಂದು ಆರೋಪಿಸಿದರು.

ಬೆಸ್ಕಾಂನ ಸೂಪರಿಂಟೆಂಡಿಂಗ್ ಎಂಜಿನಿಯರ್, ಮುಖ್ಯ ಎಂಜಿನಿಯರ್ ಹಾಗೂ ಕಾರ್ಯಪಾಲಕ ಎಂಜಿನಿಯರ್‌ಗಳು ಸೆಪ್ಟೆಂಬರ್ 21ರೊಳಗೆ ರೈತರು ಹಾಗೂ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಸೆಪ್ಟೆಂಬರ್ 23ರಿಂದ ಹಂತ ಹಂತವಾಗಿ ಎಲ್ಲ ತಾಲೂಕುಗಳ ಬೆಸ್ಕಾಂ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗಳ ಎದುರು ಪಿಕೆಟಿಂಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23ರಂದು ಮಧುಗಿರಿ ಎ.ಸಿ. ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ ಹಾಗೂ ರೈಲ್ವೆ ಯೋಜನೆಗಳಿಗೆ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಂಡು 20ರಿಂದ 30 ವರ್ಷಗಳು ಕಳೆದಿದ್ದರೂ ವೈಜ್ಞಾನಿಕ ಪರಿಹಾರ ನೀಡಿಲ್ಲ ಎಂದು ಅವರು ಆರೋಪಿಸಿದರು.

ನ್ಯಾಯಾಲಯದ ಮೊರೆ ಹೋದ ರೈತರಿಗೆ ನ್ಯಾಯಾಲಯದ ಆದೇಶದಂತೆ ಸುಮಾರು ₹500 ಕೋಟಿಗೂ ಹೆಚ್ಚಿನ ಪರಿಹಾರ ಹಣವನ್ನು ಪಾವತಿಸಬೇಕಿದೆ. ಆದರೆ ಇದುವರೆಗೂ ಒಂದು ನಯಾಪೈಸೆಯನ್ನೂ ನೀಡಿಲ್ಲ. ಈ ಅವಧಿಯಲ್ಲಿ ಹಲವು ಮೂಲ ಜಮೀನುದಾರರು ಮೃತಪಟ್ಟಿದ್ದಾರೆ. ಸರ್ಕಾರ ಕೂಡಲೇ ಬಾಕಿ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ಸಾಲಿನಲ್ಲಿ ನಾಫೆಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತಿನ ಸುಮಾರು ₹400 ಕೋಟಿ ಹಣ ಬಾಕಿ ಬರಬೇಕಿದೆ. ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಈ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದರು.

ಬರದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದಿರುವುದು ಹಾಗೂ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಕೆಲವರು ಆತ್ಮಹತ್ಯೆಯ ದಾರಿ ತುಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಾಗಿ ರೈತರ ಸಾಲಮನ್ನಾ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಬ್ಯಾಂಕ್‌ಗಳು ಹಾಗೂ ಕಿರು ಹಣಕಾಸು ಸಂಸ್ಥೆಗಳು ಬಲವಂತದ ಸಾಲ ವಸೂಲಿ ಮಾಡದಂತೆ ಸರ್ಕಾರ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ ಮಾತನಾಡಿ, ಬರ ಹಾಗೂ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ ಬೇಳೆ, ಬೆಲ್ಲ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ವಿತರಿಸಬೇಕು. ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ನೀಡಬೇಕು. ಪ್ರತಿ ಲೀಟರ್ ಹಾಲಿಗೆ ₹40 ನೀಡಬೇಕು ಎಂದು ಒತ್ತಾಯಿಸಿದರು.

ನಂದಿಹಳ್ಳಿ–ಮಲ್ಲಸಂದ್ರ–ವಸಂತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಅಧಿಕಾರಿಗಳು ಭೂಸ್ವಾಧೀನಕ್ಕೆ ಮುಂದಾಗುತ್ತಿದ್ದಾರೆ. ಜನರಿಗೆ ಹೆಚ್ಚಿನ ಪ್ರಯೋಜನವಿಲ್ಲದ ಔಟರ್ ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು. ಜಿಲ್ಲೆಯ 7–8 ತಾಲೂಕುಗಳಿಗೆ ಮರಣಶಾಸನವಾಗಿರುವ ಎಕ್ಸ್‌ಪ್ರೆಸ್ ಕೇನಾಲ್ ಯೋಜನೆಯನ್ನು ಸರ್ಕಾರ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಕುಣಿಗಲ್ ಹೆಸರಿನಲ್ಲಿ ಬಿಡದಿ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿ.ಸಿ. ಶಂಕರಪ್ಪ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವ ಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ...

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ಗುಬ್ಬಿ | ರೈತನ ಜಮೀನು ಹರಾಜಿಗೆ ವಿರೋಧ: ನ. 2ರಂದು ರೈತಸಂಘದ ಪ್ರತಿಭಟನೆ

 ಬರಗಾಲದಿಂದ ಬೆಳೆ ನಷ್ಟ ಹಾಗೂ ಕೊಳವೆಬಾವಿಗಳು ಬತ್ತಿರುವ ಸಂಕಷ್ಟದ ನಡುವೆಯೇ ಸಾಲ...