ತುಮಕೂರು ನಗರದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಮಹಾನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯು ವೃತ್ತದ ಹೆಸರನ್ನು ಬದಲಾಯಿಸುವ ಅಥವಾ ಮರುನಾಮಕರಣ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಪಷ್ಟಪಡಿಸಿದ್ದಾರೆ.
ವೃತ್ತದ ಮೆರುಗು ಹೆಚ್ಚಿಸುವ ಉದ್ದೇಶದಿಂದ ಅಲಂಕಾರಿಕ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ವೃತ್ತದ ಹೆಸರಿನಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.




