ತುಮಕೂರು ಪೆರಿಫೆರಲ್ ರಿಂಗ್ ರಸ್ತೆ: ರೈತರ ಬದುಕು ಮತ್ತು ಅಭಿವೃದ್ಧಿಯ ನಡುವಿನ ಸಂಘರ್ಷ

Date:

ತುಮಕೂರು ತಾಲ್ಲೂಕಿನ ನಂದಿಹಳ್ಳಿಯಿಂದ ಮಲ್ಲಸಂದ್ರ-ವಸಂತಾನರಸಾಪುರದವರೆಗೆ ಸುಮಾರು 44.10 ಕಿ.ಮೀ. ಉದ್ದದ ನಾಲ್ಕು ಪಥದ ಹೊರವರ್ತುಲ (ಪೆರಿಫೆರಲ್ ರಿಂಗ್) ರಸ್ತೆ ನಿರ್ಮಾಣ ಯೋಜನೆ ಪ್ರಸ್ತುತ ಜಿಲ್ಲೆಯ ಪ್ರಮುಖ ಚರ್ಚೆಯ ವಿಷಯವಾಗಿದೆ.

ಒಂದೆಡೆ ಈ ಯೋಜನೆ ಕೈಗಾರಿಕೆ ಮತ್ತು ಸಾರಿಗೆ ಅಭಿವೃದ್ಧಿಗೆ ನೆರವಾಗಲಿದೆ ಎಂಬ ವಾದವಿದ್ದರೆ, ಮತ್ತೊಂದೆಡೆ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ನಾಶವಾಗಿ ನೂರಾರು ರೈತ ಕುಟುಂಬಗಳು ಬದುಕು ಕಳೆದುಕೊಳ್ಳಲಿವೆ ಎಂಬ ಆತಂಕ ರೈತರಲ್ಲಿ ತೀವ್ರವಾಗಿದೆ.

- Advertisement -

ನಂದಿಹಳ್ಳಿ, ಕೌತಮಾರನಹಳ್ಳಿ, ಭೈರಸಂದ್ರ, ಗೂಳೆಹರವಿ, ವಡ್ಡರಹಳ್ಳಿ, ದೊಡ್ಡಸಾರಂಗಿ, ಚಿಕ್ಕಸಾರಂಗಿ, ಮಲ್ಲಸಂದ್ರ ಹಾಗೂ ವಸಂತಾನರಸಾಪುರ ಸೇರಿದಂತೆ ಒಟ್ಟು 26 ಗ್ರಾಮಗಳ ಮೂಲಕ ಸಾಗುವ ಈ ರಸ್ತೆಗಾಗಿ ಸುಮಾರು 765 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಇದರಿಂದ 750ಕ್ಕೂ ಹೆಚ್ಚು ರೈತ ಕುಟುಂಬಗಳು ನೇರವಾಗಿ ಬಾಧಿತರಾಗಲಿವೆ ಎಂದು ರೈತರು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭೂಮಿ ಕಳೆದುಕೊಂಡರೆ ಕೃಷಿಯನ್ನೇ ನಂಬಿಕೊಂಡಿರುವ ಕುಟುಂಬಗಳ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಲಿದೆ. ಸರ್ಕಾರ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಈ ಯೋಜನೆಯ ಹಿಂದೆ ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿವೆ ಎಂದು ರೈತರು ಗಂಭೀರ ಆರೋಪ ಮಾಡುತ್ತಿದ್ದಾರೆ. ರಸ್ತೆ ನಿರ್ಮಾಣದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಯ ಬೆಲೆ ಏರಿಕೆಯಾಗುವುದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ದೊಡ್ಡ ಲಾಭವಾಗಲಿದೆ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ಯಾವುದೇ ಶಾಶ್ವತ ಪ್ರಯೋಜನವಿಲ್ಲ ಎಂಬುದು ಅವರ ವಾದ.

ಗ್ರಾಮಸ್ಥರು ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಯೋಜನೆಯನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದು, “ರೈತರ ಬದುಕು ಉಳಿಸಿ” ಎಂದು ಒತ್ತಾಯಿಸಿದ್ದಾರೆ.

ತುಮಕೂರು ನಗರ ವ್ಯಾಪ್ತಿಯ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಹಾಗೂ ಶಿವಮೊಗ್ಗ ರಸ್ತೆ ಮತ್ತು ವಸಂತಾನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಹಲವು ವರ್ಷಗಳ ಹಿಂದೆಯೇ ಪ್ರಸ್ತಾಪಗೊಂಡಿತ್ತು. ಮಾಜಿ ಸಂಸದರು ಎಸ್.ಪಿ. ಮುದ್ದಹನುಮೇಗೌಡ ಮತ್ತು ಜಿ.ಎಸ್. ಬಸವರಾಜ ಅವರ ಅವಧಿಯಲ್ಲಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದ್ದವು.

2024ರಲ್ಲಿ ಕೇಂದ್ರ ಸಚಿವರಾದ ಬಳಿಕ ತುಮಕೂರು ಸಂಸದ ವಿ. ಸೋಮಣ್ಣ ಅವರ ಅವಧಿಯಲ್ಲಿ ಯೋಜನೆಗೆ ಮತ್ತೆ ವೇಗ ಸಿಕ್ಕಿದೆ. ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ಈ ಯೋಜನೆಯ ಅನುಷ್ಠಾನ ಪ್ರಕ್ರಿಯೆ ಮುಂದುವರಿದಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಭೂಮಿ ಗುರುತು ಮಾಡುವ ಕೆಲಸ ಆರಂಭಿಸಿದೆ. ಆದರೆ ಭೂಸ್ವಾಧೀನ ಕಾಯ್ದೆಯ ನಿಯಮಗಳನ್ನು ಪಾಲಿಸಲಾಗಿಲ್ಲ, ಪರಿಸರ ಪರಿಣಾಮ ಅಧ್ಯಯನ ಸಮರ್ಪಕವಾಗಿ ನಡೆದಿಲ್ಲ ಹಾಗೂ ಫಲವತ್ತಾದ ಭೂಮಿಯನ್ನು ಪಹಣಿಯಲ್ಲಿ ಖುಷ್ಕಿ ಭೂಮಿಯೆಂದು ದಾಖಲಿಸಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಜಿಲ್ಲಾಡಳಿತಕ್ಕೆ ಹಲವು ಮನವಿಗಳನ್ನು ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ ಎಂದು ರೈತ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಶೂಲದ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ರೈತ ಸಮಾವೇಶದಲ್ಲಿ ಯೋಜನೆಯ ಡಿಪಿಆರ್ ಪ್ರತಿಯನ್ನು ಸುಟ್ಟು ಪ್ರತಿಭಟನೆ ನಡೆಸಲಾಗಿತ್ತು. ಯೋಜನೆ ಕೈಬಿಡದಿದ್ದರೆ ಗಾಂಧಿ ಮಾರ್ಗದಲ್ಲಿ ಅಸಹಕಾರ ಚಳವಳಿ ಸೇರಿದಂತೆ ವಿವಿಧ ಹಂತದ ಹೋರಾಟಗಳನ್ನು ಹಮ್ಮಿಕೊಳ್ಳುವುದಾಗಿ ರೈತರು ಘೋಷಿಸಿದ್ದಾರೆ.

ರಾಷ್ಟ್ರೀಯ ಏಕತಾ ಪರಿಷತ್ ನಾಯಕ ಪಿ.ವಿ. ರಾಜಗೋಪಾಲ್ ಸೇರಿದಂತೆ ವಿವಿಧ ರೈತಪರ ಸಂಘಟನೆಗಳು, ಎಡಪಂಥೀಯ ಪಕ್ಷಗಳ ನಾಯಕರು ಹಾಗೂ ಕೆಲ ಮಾಜಿ ಶಾಸಕರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳು ರೈತರ ಪರ ನಿಲ್ಲಬೇಕೆಂದು ಅವರು ಕರೆ ನೀಡಿದ್ದಾರೆ.

ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಅವರು ಕೂಡ ರೈತರ ಪರವಾಗಿ ಹೋರಾಟ ರೂಪಿಸುವ ಭಾಗವಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ. ರೈತರ ಸಭೆ ನಡೆಸಿ ಯೋಜನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ.

ತುಮಕೂರು ವೇಗವಾಗಿ ವಿಸ್ತರಿಸುತ್ತಿರುವ ನಗರ. ಸಂಚಾರ ದಟ್ಟಣೆ ನಿವಾರಣೆ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಹೊಸ ಸಂಪರ್ಕ ರಸ್ತೆಗಳ ಅಗತ್ಯವಿದೆ ಎಂಬುದು ಸರ್ಕಾರದ ವಾದ. ಆದರೆ ಮತ್ತೊಂದೆಡೆ ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುವುದು, ರೈತರ ಜೀವನೋಪಾಯಕ್ಕೆ ಧಕ್ಕೆ ಉಂಟಾಗುವುದು ಹಾಗೂ ಪರಿಸರದ ಮೇಲೆ ಪರಿಣಾಮ ಬೀರುವುದು ಎಂಬ ಆತಂಕವೂ ಅಷ್ಟೇ ಗಂಭೀರವಾಗಿದೆ.

ಅಭಿವೃದ್ಧಿ ಯೋಜನೆಗಳು ಅಗತ್ಯವಾದರೂ, ಅವು ರೈತರ ಬದುಕಿಗೆ ಹೊರೆಯಾಗದಂತೆ ಪರ್ಯಾಯ ಮಾರ್ಗಗಳ ಪರಿಶೀಲನೆ, ನ್ಯಾಯಯುತ ಪರಿಹಾರ, ಪಾರದರ್ಶಕ ಭೂಸ್ವಾಧೀನ ಹಾಗೂ ಸ್ಥಳೀಯರ ಅಭಿಪ್ರಾಯಕ್ಕೆ ಗೌರವ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ರೈತರು, ಜನಪರ ಸಂಘಟನೆಗಳು ಹಾಗೂ ಭೂಸ್ವಾಧೀನ ಹೋರಾಟ ಸಮಿತಿ ಈಗಾಗಲೇ ಮತ್ತೊಂದು ಹಂತದ ಹೋರಾಟಕ್ಕೆ ಸಿದ್ಧತೆ ನಡೆಸಿವೆ. ಸರ್ಕಾರ ಯೋಜನೆಯ ಮಾರ್ಗ ಬದಲಾವಣೆ, ಮರುಪರಿಶೀಲನೆ ಅಥವಾ ರೈತರ ಬೇಡಿಕೆಗಳನ್ನು ಪರಿಗಣಿಸುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ತುಮಕೂರಿನ ಅಭಿವೃದ್ಧಿ ಮತ್ತು ರೈತರ ಬದುಕಿನ ನಡುವಿನ ಈ ಸಂಘರ್ಷ ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...