ತುಮಕೂರು | ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

Date:

ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಸೂಚಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಮಕ್ಕಳ ಹಕ್ಕುಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ನಿಲಯಗಳ ಶೌಚಾಲಯ, ಅಡುಗೆ ಕೋಣೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನಿಯಮಾನುಸಾರ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಸತಿ ನಿಲಯಗಳಲ್ಲಿ ಅಡುಗೆ ಮಾಡಿದ ಬಳಿಕ ಆಹಾರದ ಮಾದರಿಯನ್ನು ಕಡ್ಡಾಯವಾಗಿ 24 ಗಂಟೆಗಳ ಕಾಲ ಸಂಗ್ರಹಿಸಿಡಬೇಕು. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಮಕ್ಕಳಿಗೆ ನೀಡಬಾರದು. ಆಹಾರ ಕೊಠಡಿಯಲ್ಲಿ ಸಂಗ್ರಹಿಸಿರುವ ಪದಾರ್ಥಗಳ ಅವಧಿ ಮುಕ್ತಾಯ ದಿನಾಂಕವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಎಚ್ಚರಿಕೆ ನೀಡಿದರು.

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿರುವ ಗ್ರಂಥಾಲಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಮಕ್ಕಳು ನಿಯಮಿತವಾಗಿ ಪುಸ್ತಕಗಳನ್ನು ತೆಗೆದುಕೊಂಡು ಓದುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ

ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಸದಸ್ಯ ಸತ್ಯನಾರಾಯಣ ಶೆಟ್ಟಿ ಅವರು ಮಂಗಳವಾರ ತುಮಕೂರು ಜಿಲ್ಲೆಗೆ ಭೇಟಿ ನೀಡಿ ವಿವಿಧ ಶಾಲೆಗಳು, ಅಂಗನವಾಡಿ ಕೇಂದ್ರಗಳು, ವಸತಿ ನಿಲಯಗಳು, ಪೊಲೀಸ್ ಠಾಣೆಗಳು, ಆಸ್ಪತ್ರೆಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಂತೋಷ್ ಕುಮಾರ್, ಮಕ್ಕಳಿಗೆ ತರಕಾರಿ, ಸೊಪ್ಪು, ಕಾಳು ಸೇರಿದಂತೆ ಪೌಷ್ಟಿಕ ಆಹಾರವನ್ನು ನೀಡುವಂತೆ ಸೂಚಿಸಿದರು.

ನಿಲಯದ ಅಡುಗೆ ಕೋಣೆಯನ್ನು ಪರಿಶೀಲಿಸಿದ ಅವರು, ಆಹಾರ ತಯಾರಿಸುವ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ಮಕ್ಕಳ ಆರೋಗ್ಯದ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ. ಸಿದ್ದರಾಮಣ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವೆರ್ಣೇಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ತಿಪಟೂರು | ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಎತ್ತಿನಗಾಡಿ, ಟ್ರ್ಯಾಕ್ಟರ್ ಜಾಥಾ

 ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು...