ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

Date:

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಘಟಕ ರಚಿಸಿದೆ. ತುಮಕೂರು ಜಿಲ್ಲಾ ಘಟಕವು ರಾಜ್ಯ ಸಂಘದ ಅಂಗ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದು, ಅಧ್ಯಕ್ಷರಾಗಿ ಹೆಚ್.ಎಸ್. ಪರಮೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಘು ಎ.ಎನ್. ಆಯ್ಕೆಯಾಗಿದ್ದಾರೆ.

- Advertisement -

ನಗರದ ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು ಮಾತನಾಡಿ, ಮುಂದಿನ ದಿನಗಳಲ್ಲಿ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರು ಹತ್ತಕ್ಕೂ ಹೆಚ್ಚು ಇರುವ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಪತ್ರಿಕೆಗಳ ಗುಣಮಟ್ಟ ಕಾಪಾಡಿಕೊಳ್ಳಲು ಸಂಪಾದಕರಿಗಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು. ಪತ್ರಿಕಾರಂಗದಲ್ಲಿನ ಹೊಸ ಆವಿಷ್ಕಾರ ಮತ್ತು ತಂತ್ರಜ್ಞಾನ ಅಳವಡಿಕೆಯ ಬಗ್ಗೆ ತರಬೇತಿಯನ್ನೂ ನೀಡಲಾಗುವುದು ಎಂದು ಅವರು ಹೇಳಿದರು.

1004116141

ರಾಜ್ಯ ಸಂಘಟನಾ ಕಾರ್ಯದರ್ಶಿ ಟೆಲೆಕ್ಸ್ ರವಿಕುಮಾರ್ ಮಾತನಾಡಿ, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಶೋಷಿತ ಸಮುದಾಯಗಳ ಧ್ವನಿಯನ್ನು ಬಲಪಡಿಸಲು ದಲಿತ ಮತ್ತು ಶೂದ್ರ ಸಮುದಾಯಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಾಧ್ಯಮ ಕ್ಷೇತ್ರ ಪ್ರವೇಶಿಸಬೇಕು ಎಂದು ಕರೆ ನೀಡಿದರು. “ಕೇವಲ ಜಾತಿಯ ಆಧಾರದ ಮೇಲೆ ಪತ್ರಕರ್ತರಾಗಲು ಸಾಧ್ಯವಿಲ್ಲ; ಜ್ಞಾನ, ವೃತ್ತಿ ಕೌಶಲ್ಯ ಮತ್ತು ಸಮರ್ಪಣಾ ಭಾವದಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಪತ್ರಕರ್ತರಾಗಿ ಹೊರಹೊಮ್ಮಲು ಸಾಧ್ಯ” ಎಂದರು.

ಸಂಘಟನೆಯು ಅಂಬೇಡ್ಕರ್, ಬಸವಲಿಂಗಪ್ಪ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ ಹೆಸರಿನ ಪ್ರಶಸ್ತಿಗಳ ಮೂಲಕ, ದಲಿತ ಸಂವೇದನೆಯಿಂದ ಕೆಲಸ ಮಾಡುವ ಎಲ್ಲಾ ಸಮುದಾಯದ ಪತ್ರಕರ್ತರನ್ನು ಗೌರವಿಸುತ್ತಿದೆ ಎಂದು ಅವರು ತಿಳಿಸಿದರು.

ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಸರ್ಕಾರ ಬೆಂಬಲ ನೀಡಬೇಕು, ಜಾಹೀರಾತು ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಪಾಲಿಸಬೇಕು, ಪತ್ರಕರ್ತರಿಗೆ ವಿಶೇಷ ತರಬೇತಿ ಹಾಗೂ ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಅಧ್ಯಕ್ಷ ಚೆಲುವರಾಜ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ಹಾಗೂ ಪತ್ರಿಕಾರಂಗದ ಏಳಿಗೆಗಾಗಿ ಒಗ್ಗೂಡಿ ಹೋರಾಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಕಳೆದ 26 ವರ್ಷಗಳಿಂದ ಸಂಘಟನೆ ಸಂಪಾದಕರ ಏಳಿಗೆ ಮತ್ತು ಸೌಲಭ್ಯಗಳಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. 2001ರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹಾಕಿಕೊಟ್ಟ ಬಲವಾದ ಬುನಾದಿಯ ಮೇಲೆ ಹಂತ ಹಂತವಾಗಿ ಬೆಳೆದು ಬಂದಿದೆ. ಸಮಾಜಮುಖಿ ಸೇವೆ ಮಾಡಿದವರನ್ನು ಗುರುತಿಸಲು ದತ್ತಿನಿಧಿಗಳನ್ನು ಸ್ಥಾಪಿಸಲಾಗಿದ್ದು, ಎಲ್ಲರನ್ನೂ ಒಳಗೊಂಡು ಸೌಹಾರ್ದತೆಯಿಂದ ಕಾರ್ಯನಿರ್ವಹಿಸುತ್ತಾ ಪತ್ರಿಕಾರಂಗದ ಸದಸ್ಯರ ಹಿತ ಕಾಯಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಚಿ.ನಿ. ಪುರುಷೋತ್ತಮ್, ಟಿ.ಇ. ರಘುರಾಮ್, ಹರೀಶ್ ಆಚಾರ್ಯ, ಜಗನ್ನಾಥ್ ಕಾಳೇನಹಳ್ಳಿ, ಜಯಣ್ಣ ಬೆಳೆಗೆರೆ ಮತ್ತು ಸುರೇಶ್ ಶ್ರೀವತ್ಸ ಅವರು ನೂತನ ಘಟಕಕ್ಕೆ ಶುಭ ಹಾರೈಸಿದರು.

ರಾಮಚಂದ್ರಯ್ಯ, ಹಾಲ್ಕುರಿಕೆ ಮಂಜುನಾಥ್, ಡಿ. ಕುಮಾರ್, ದೇವರಾಜು, ಗೋವಿಂದರಾಜು, ಭಾನುಪ್ರಕಾಶ್, ಮಾರುತಿ ಪ್ರಸಾದ್, ಮಧು ಇಂಗದಾಳ್, ದೊಡ್ಡೇರಿ ಕಣಿಮಯ್ಯ, ಯೋಗೀಶ್ ಮೆಳೇಕಲ್ಲಹಳ್ಳಿ, ಮೈತ್ರಿ ವೆಂಕಟಾಚಲ, ಸಿದ್ದೇಶ್, ವಿನಿ, ಪೀರ್, ಶಿವಕುಮಾರ್, ಸುರೇಶ್, ದಲಿತ ಮುಖಂಡ ರಂಜನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು

ಗೌರವಾಧ್ಯಕ್ಷರು: ಗಂಗಹನುಮಯ್ಯ

ಗೌರವ ಉಪಾಧ್ಯಕ್ಷರು: ಜಯನುಡಿ ಜಯಣ್ಣ

ಪೋಷಕರು: ಸೊಗಡು ವೆಂಕಟೇಶ್, ಮಾರುತಿ ಗಂಗಹನುಮಯ್ಯ

ಅಧ್ಯಕ್ಷರು: ಹೆಚ್.ಎಸ್. ಪರಮೇಶ್

ಉಪಾಧ್ಯಕ್ಷರು: ಕಂಬಣ್ಣ

ಪ್ರಧಾನ ಕಾರ್ಯದರ್ಶಿ: ರಘು ಎ.ಎನ್.

ಕಾರ್ಯದರ್ಶಿ: ರವಿಕುಮಾರ್ ಚಿಂಪುಗಾನಹಳ್ಳಿ

ಖಜಾಂಚಿ: ಸತೀಶ್ ಹಾರೋಗೆರೆ

ಸಂಘಟನಾ ಸಂಚಾಲಕರು: ಸುರೇಶ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ವೃತ್ತಿ ಗುರಿ ಸ್ಪಷ್ಟವಾಗಿದ್ದರೆ ಯಶಸ್ಸು ಖಚಿತ: ಪ್ರೊ.ರಾಮು ಜೆ

ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು...

ಮಧುಗಿರಿ | ಸಿಂಹಾದ್ರಿ ಕುಟುಂಬಕ್ಕೆ ಸಾಂತ್ವನ : ತಾಯಿಗೆ ಉದ್ಯೋಗ, ಮನೆ ನಿರ್ಮಾಣದ ಭರವಸೆ

ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿಯ ಸಿಂಹಾದ್ರಿ...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300...