ತುಮಕೂರು | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ: ಪಿಎಸ್‌ಐ ತಾರ ಕೆ.ಸಿ.

Date:

ಯುವಜನರು ಜಾಗೃತರಾಗಿರಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ಸಮಾಜದ ಆಸ್ತಿಯಾಗಬೇಕು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಮಾದಕ ವ್ಯಸನಗಳಿಂದ ದೂರವಿದ್ದು, ತಮ್ಮ ಸುತ್ತಮುತ್ತ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೆಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ತಾರ ಕೆ.ಸಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- Advertisement -

ಹೆಬ್ಬೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತಕ್ಕಾಗಿ ನಶಾಮುಕ್ತ ಯುವಜನತೆ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಅಚರ್ಡ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮುತ್ತುರಾಯಪ್ಪ.ವಿ. ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು. ಮಾದಕ ವ್ಯಸನಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಭಾರತದ ಭವಿಷ್ಯ ಯುವಜನರ ಕೈಯಲ್ಲಿದ್ದು, ದೇಶಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣ.ಡಿ. ಮಾತನಾಡಿ, ನಾವೆಲ್ಲರೂ ಮಾದಕ ವಸ್ತುಗಳು ಮತ್ತು ವ್ಯಸನಗಳಿಂದ ದೂರವಿರುವ ಸಂಕಲ್ಪ ಮಾಡಬೇಕು. ನಶಾಮುಕ್ತ ಭಾರತದ ಅಭಿಯಾನ ನಮ್ಮ ಕಾಲೇಜಿನಿಂದಲೇ ಆರಂಭವಾಗಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಜಗದೀಶ್.ಡಿ.ಬಿ. ಮತ್ತು ತಂಡದವರು ಮಾದಕ ವಸ್ತುಗಳ ವ್ಯಸನದ ಅಪಾಯಗಳ ಕುರಿತು ಜಾಗೃತಿ ಮೂಡಿಸುವ ಕಿರು ನಾಟಕ ಪ್ರದರ್ಶಿಸಿದರು.

ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಅಧಿಕಾರಿ ಮಧುಸೂಧನ.ಕೆ.ಪಿ. ಕಾರ್ಯಕ್ರಮ ಆಯೋಜಿಸಿದ್ದರು. ಪ್ರಾಧ್ಯಾಪಕರಾದ ಡಾ. ದಿನೇಶ್ ಕುಮಾರ್.ಸಿ., ಡಾ. ಗೋವಿಂದರಾಜು.ಎನ್., ಡಾ. ಮೋಹನ್ ಕುಮಾರ್.ಬಿ.ಎಸ್., ಜಗದೀಶ್.ಎಂ.ಎಸ್. ಹಾಗೂ ಪೊಲೀಸ್ ಅಧಿಕಾರಿಗಳಾದ ವೆಂಕಟೇಶ್ ಮತ್ತು ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು...

ತುಮಕೂರಿನಲ್ಲಿ ನಾಳೆ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಸನ್ಮಾನ

ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ...

ತುಮಕೂರು | ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ

 ವಿದ್ಯಾರ್ಥಿಗಳಲ್ಲಿ ರ‍್ಯಾಗಿಂಗ್‌ನ ಮಾರಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಕ್ಯಾಂಪಸ್...

ತುಮಕೂರಿನಲ್ಲಿ ದಟ್ಟ ಮಂಜು: ವಾಹನ ಸವಾರರ ಪರದಾಟ

ಮಳೆಯಿಲ್ಲದೆ ಕಂಗೆಟ್ಟಿರುವ ಜನತೆಗೆ ಕಳೆದ 2-3 ದಿನಗಳಿಂದ ಮೈ ಕೊರೆಯುವ ಚಳಿ...