ತುಮಕೂರು | ಗ್ರಾಮೀಣ ಪದವೀಧರರಿಗೆ ಉದ್ಯೋಗದ ದಾರಿ ತೋರಿಸಲು ಹಾಲಪ್ಪ ಫೌಂಡೇಷನ್‌ನಿಂದ ಎರಡು ದಿನಗಳ ಕಾರ್ಯಾಗಾರ

Date:

ಗ್ರಾಮೀಣ ಭಾಗದ ಪದವೀಧರ ನಿರುದ್ಯೋಗಿ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗ ಕ್ಷೇತ್ರದಲ್ಲಿರುವ ಅವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಿ, ಸೂಕ್ತ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಹಾಲಪ್ಪ ಫೌಂಡೇಷನ್ ವತಿಯಿಂದ ನವೆಂಬರ್ 20 ಮತ್ತು 21ರಂದು ತುಮಕೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಖಾತರಿ ಕೋಶದ (ಐಕ್ಯೂಎಸಿ) ಸಹಯೋಗದಲ್ಲಿ ಎರಡು ದಿನಗಳ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ ಆಯೋಜಿಸಲಾಗಿದೆ.

- Advertisement -

ಈ ಕುರಿತು ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಾಗಾರದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಹಾಲಪ್ಪ ಫೌಂಡೇಷನ್ ಅಧ್ಯಕ್ಷ ಮುರುಳೀಧರ ಹಾಲಪ್ಪ, ತುಮಕೂರು ವಿಶ್ವವಿದ್ಯಾನಿಲಯದ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಜಿಲ್ಲೆಯ ನಿರುದ್ಯೋಗಿ ಯುವಜನರು ಭಾಗವಹಿಸಿ ತಜ್ಞರಿಂದ ಮಾರ್ಗದರ್ಶನ ಪಡೆಯಬಹುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜಯನಗರದಲ್ಲಿರುವ ತಮ್ಮ ಗೃಹ ಕಚೇರಿಗೆ ಪ್ರತಿದಿನ ಹಲವು ಪದವೀಧರರು ಉದ್ಯೋಗದ ನಿರೀಕ್ಷೆಯಲ್ಲಿ ಶಿಫಾರಸು ಪತ್ರಕ್ಕಾಗಿ ಬರುತ್ತಾರೆ. ಆದರೆ ಅವರಲ್ಲಿ ಬಹುತೇಕರಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ, ಐಬಿಪಿಎಸ್, ರೈಲ್ವೆ, ಎನ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮರ್ಪಕ ಮಾಹಿತಿ ಇರುವುದಿಲ್ಲ. ಯಾವ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕು, ಅರ್ಹತೆಗಳೇನು, ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಗೊಂದಲಗಳಿರುತ್ತವೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ತುಮಕೂರು ವಿವಿಯ ಐಕ್ಯೂಎಸಿ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಈಗಾಗಲೇ ತುಮಕೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಎಲ್ಲ ಪದವಿ ಕಾಲೇಜುಗಳು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘಟನೆಗಳಿಗೆ ಕಾರ್ಯಾಗಾರದ ಕುರಿತು ಮಾಹಿತಿ ನೀಡಲಾಗಿದೆ. ಅರ್ಹ 700 ಯುವಜನರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗದ ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಾಗಾರದಲ್ಲಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ಪ್ರೇರಕ ವಿನಯಕುಮಾರ್ ಜಿ.ಬಿ., ಸಲಹೆಗಾರ ಶರಣಯ್ಯ ಬಂಡಾರಿಮಠ, ಮಾರ್ಗದರ್ಶಕರಾದ ಡಾ. ಗರಣಿ ಕೃಷ್ಣಮೂರ್ತಿ, ದಿಲೀಪ್ ಅಪ್ಪೇನಹಳ್ಳಿ ಹಾಗೂ ಕೆಎಎಸ್ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಐಎಎಸ್, ಐಪಿಎಸ್ ಮತ್ತು ಕೆಎಎಸ್ ಅಧಿಕಾರಿಗಳು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.

ಐಎಎಸ್, ಐಪಿಎಸ್, ಕೆಎಎಸ್, ಎಫ್‌ಡಿಎ, ಎಸ್‌ಡಿಎ, ಆರ್‌ಆರ್‌ಬಿ, ಕೆಇಎ ಮತ್ತು ಎಸ್‌ಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ವಿಧಾನ, ಅರ್ಹತೆ, ಪಠ್ಯಕ್ರಮ, ಪರೀಕ್ಷಾ ಮಾದರಿ ಹಾಗೂ ಪರಿಣಾಮಕಾರಿ ಅಭ್ಯಾಸದ ಕ್ರಮಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ವಿವರಿಸಿದರು.

ಹಿರಿಯ ಕೆಂಚಮಾರಯ್ಯ ಮಾತನಾಡಿ, ನಿರುದ್ಯೋಗಿ ಯುವಜನರಿಗೆ ಉದ್ಯೋಗ ಮತ್ತು ವೃತ್ತಿಜೀವನದ ಕುರಿತು ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅಗತ್ಯವಾಗಿದೆ. ಹಾಲಪ್ಪ ಫೌಂಡೇಷನ್ ಮೂಲಕ ಮುರುಳೀಧರ ಹಾಲಪ್ಪ ಇಂತಹ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ. ಯುವಜನರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ನಿವೃತ್ತ ಪ್ರಾಂಶುಪಾಲರಾದ ಡಾ. ಲೀಲಾವತಿ ಮಾತನಾಡಿ, ತಾವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿದ್ದ ಸಂದರ್ಭದಲ್ಲಿ ಹಾಲಪ್ಪ ಫೌಂಡೇಷನ್ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಗಿ ಸ್ಮರಿಸಿದರು. ಇಂದಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯ ಅರಿವಿದ್ದರೂ, ಉದ್ಯೋಗಕ್ಕೆ ಅಗತ್ಯವಾದ ಅರ್ಜಿ ಸಲ್ಲಿಕೆ ಸೇರಿದಂತೆ ಮೂಲಭೂತ ಪ್ರಕ್ರಿಯೆಗಳ ಬಗ್ಗೆ ಸಾಕಷ್ಟು ತಿಳಿವಳಿಕೆ ಇಲ್ಲದಿರುವುದು ಕಂಡುಬರುತ್ತದೆ. ಆದ್ದರಿಂದ ಯುವಜನರು ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ಕೆಂಚಮಾರಣ್ಣ ಮಾತನಾಡಿ, ತಾನು ರೈತ ಕುಟುಂಬದಿಂದ ಬಂದಿದ್ದು, ಬಿ.ಕಾಂ ಪದವಿ ಪಡೆದಿದ್ದೇನೆ. ಕೃಷಿಯನ್ನೇ ಅವಲಂಬಿಸಿರುವ ಕುಟುಂಬದ ಹಿನ್ನೆಲೆಯಿಂದ ಬಂದಿರುವ ತಮಗೆ ಉದ್ಯೋಗ ಪಡೆಯುವ ಆಸೆಯಿದೆ. ಈ ಕಾರ್ಯಾಗಾರದಿಂದ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ದೊರೆಯುವ ನಿರೀಕ್ಷೆಯಿದ್ದು, ಆಸಕ್ತ ಯುವಜನರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖಂಡ ಮಂಜುನಾಥ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...