ತುಮಕೂರು | ಯುವ ಸೌರಭ : ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ : ತೇಜಸ್ವಿ

Date:

 ಆರೋಗ್ಯಕರ ಬದುಕು ಹಾಗೂ ಸಮಾಜಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇರುತ್ತದೆ ಎಂದು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತೇಜಸ್ವಿ ತಿಳಿಸಿದರು. 

- Advertisement -

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಶುಕ್ರವಾರ ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ಸೌರಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಓದುವುದರೊಂದಿಗೆ ಕಲೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಮಾತ್ರ ಸಮಾಜಕ್ಕೆ ದೊಡ್ಡ ಆಸ್ತಿಯಾಗುತ್ತಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ಕಾರ್ಯಕ್ರಮದ ಗೌರವ ಉಪಸ್ಥಿತಿವಹಿಸಿದ್ದ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕಿ ರಾಧಾ ಎಂ.ಎಸ್. ಅವರು ಮಾತನಾಡಿ, ಯುವ ಜನರು ಕಲೆ / ಕ್ರೀಡೆ ಮೊದಲಾದ ಆರೋಗ್ಯಕರ ಹವ್ಯಾಸಗಳ ಮುಖೇನ ಸ್ಪರ್ಧಾತ್ಮಕ ಬದುಕನ್ನು ಎದುರಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ, ಯುವ ಜನರಿಗೆ ಕಲೆ ಕೇವಲ ಮನರಂಜನೆ ಆದರೂ ಅವರಲ್ಲಿನ ಭಾವನೆಗಳ ಅಭಿವ್ಯಕ್ತಿಯಾಗಿರುತ್ತದೆ. ಕಲೆಯು ಯುವ ಜನಾಂಗವನ್ನು ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ ಹಾಗೂ ಅವರನ್ನು ಸಮಾಜಮುಖಿಗಳನ್ನಾಗಿ ಬೆಳೆಸಲು ಸಹಕಾರಿಯಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಪರಿಣಾಮಾತ್ಮಕವಾಗಿ ಎದುರಿಸಲು ಎಲ್ಲಾ ರೀತಿಯಲ್ಲೂ ಸಹಕರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಇನ್‌ಫರ‍್ಮಟಿಕ್ಸ್ ಇಂಡಿಯಾ ಲಿಮಿಟೆಡ್‌ನ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಎನ್.ವಿ. ಸತ್ಯನಾರಾಯಣ ಮಾತನಾಡಿ, ತನ್ನ ಕಾಲೇಜಿನ ಬೆಳವಣಿಗೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಸಿದ್ಧನಿರುತ್ತೇನೆ ಹಾಗೂ ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಅಪಾರ ಕೊಡುಗೆಯನ್ನು ನೀಡುತ್ತಿರುವ ಈ ನಾಡಿನಲ್ಲಿ ಇತ್ತೀಚೆಗೆ ಕಲೆಗಳು ಅವಸಾನದ ಅಂಚಿಗೆ ಸರಿಯುತ್ತಿರುವುದು ವಿಷಾದನೀಯ. ಯುವ ಜನರಿಗೆ ಕಲೆಯನ್ನು ಕುರಿತು ಅಭಿರುಚಿ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಪ್ರಸ್ತುತವಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಡಿ.ವಿ. ಸುರೇಶ್ ಕುಮಾರ್ ಮಾತನಾಡಿ, ಕಲಾವಿದರು ವೇದಿಕೆಯ ಮೇಲೆ ಕಲಾಪ್ರದರ್ಶನ ನೀಡುವುದನ್ನು ನಾವೆಲ್ಲರೂ ಗೌರವಿಸಿ, ಆಸ್ವಾದಿಸಬೇಕು. ಪ್ರತಿಯೊಬ್ಬ ಕಲಾವಿದನ ಪ್ರದರ್ಶನದ ಹಿಂದೆ ಅಪಾರವಾದ ಶ್ರಮ ಇರುತ್ತದೆ. ಪ್ರತಿ ಕಲಾವಿದರು ಹಲವಾರು ವರ್ಷಗಳ ಕಾಲ ತಪಸ್ಸಿನಂತೆ ಪ್ರಯತ್ನಿಸಿ ಕಲೆಯನ್ನು ತನ್ನದಾಗಿಸಿಕೊಂಡಿರುತ್ತಾರೆ. ಆದ್ದರಿಂದ ಕಲಾವಿದರನ್ನು ನಾವೆಲ್ಲರೂ ಗೌರವಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಜಾನಪದ ಗೀತೆ, ವೀರಗಾಸೆ, ನೃತ್ಯ ರೂಪಕ, ನಾಸಿಕ್‌ಡೋಲು, ಜಾನಪದ ನೃತ್ಯ ಮೊದಲಾದ ಪ್ರದರ್ಶನಗಳನ್ನು ಕಲಾವಿದರು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಕುಮಾರ್, ನಿವೃತ್ತ ಪ್ರಾಂಶುಪಾಲ ಅಕ್ಕಮ್ಮ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರದೀಪ್ ಮೊದಲಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...