ತುಮಕೂರು ಓಪನ್ ಮಹಿಳಾ ಟೆನ್ನಿಸ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಡಿಸಿ ಸೂಚನೆ

Date:

 ಮೇ 3ರಿಂದ 10ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕ್ರೀಡಾಕೂಟಕ್ಕೆ ಸಂಬಂಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸುವಂತೆ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ವಿವಿಧ ಸುಮಾರು 12 ದೇಶಗಳಿಂದ ಕ್ರೀಡಾಪಟುಗಳು ತುಮಕೂರಿಗೆ ಬರಲಿದ್ದಾರೆ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತೀರ್ಪುಗಾರರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಅವರಿಗೆಲ್ಲಾ ವಸತಿ, ಊಟ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕು ಎಂದರು.

ಈ ಕ್ರೀಡಾಕೂಟವು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆಯುತ್ತಿದ್ದು ತುಮಕೂರಿನ ನಾಲ್ಕು ಕ್ರೀಡಾ ಅಂಕಣಗಳಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಸುಮಾರು 100ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ದಾನಿಗಳೆ ನೀಡಲಿದ್ದಾರೆ. ಟೆನ್ನಿಸ್ ಅಸೋಸಿಯೇಷನ್ ಖಾತೆಗೆ ನೇರವಾಗಿ ದಾನಿಗಳು ತಮ್ಮ ನೆರವನ್ನು ನೀಡಬಹುದು. ಸದ್ಯದಲ್ಲೆ ಅವರ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎ.ಅಶೋಕ್ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...