ತುಮಕೂರಿನಲ್ಲಿ ದಟ್ಟ ಮಂಜು: ವಾಹನ ಸವಾರರ ಪರದಾಟ

Date:

ಮಳೆಯಿಲ್ಲದೆ ಕಂಗೆಟ್ಟಿರುವ ಜನತೆಗೆ ಕಳೆದ 2-3 ದಿನಗಳಿಂದ ಮೈ ಕೊರೆಯುವ ಚಳಿ ಶುರುವಾಗಿದ್ದು, ಗುರುವಾರ ಬೆಳಿಗ್ಗೆ ಕಲ್ಪತರುನಾಡಿನಲ್ಲಿ ದಟ್ಟ ಮಂಜು ಆವರಿಸಿ ವಾಹನ ಸವಾರರು ಸುಗಮವಾಗಿ ಸಂಚರಿಸಲಾಗದೆ ಪರದಾಡುವಂತಾಯಿತು.

- Advertisement -

ಕಳೆದ ಎರಡು-ಮೂರು ದಿನಗಳಿಂದ ಥಂಡಿ, ಚಳಿ ಹೆಚ್ಚಾಗಿದ್ದು, ಬೆಳಿಗ್ಗೆ 6 ಗಂಟೆಯಿಂದಲೇ ಸೂರ್ಯನ ರಶ್ಮಿ ಭೂಮಿಗೆ ತಾಗದಷ್ಟು ದಟ್ಟ ಮಂಜು ಆವರಿಸಿತ್ತು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ಕಪಕ್ಕದ ಮನೆಗಳೇ ಕಾಣದಷ್ಟು ಮಂಜು ಕವಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...
1004291859

ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಬೆಳಿಗ್ಗೆ 8.30ರವರೆಗೂ ಎದುರಿನಿಂದ ಬರುವ ವಾಹನಗಳು ಚಾಲಕರಿಗೆ ಕಾಣದಂತಾಗಿತ್ತು. ಬಸ್, ಲಾರಿ, ಕಾರುಗಳು ಹೆಡ್‌ಲೈಟ್ ಹಾಕಿಕೊಂಡು ಚಲಿಸಿದರೂ ರಸ್ತೆಯಲ್ಲಿ ಬೆಳಕು ಕಾಣದ ಸ್ಥಿತಿ ಇತ್ತು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ಚಾಲಕರನ್ನು ಹೊರತುಪಡಿಸಿ, ಸರಕು ಸಾಗಣೆ ಮತ್ತು ಲಾರಿ ಚಾಲಕರು ಚಳಿ ಹಾಗೂ ಮಂಜಿನಿಂದಾಗಿ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ, ಚಹಾ ಅಂಗಡಿಗಳಲ್ಲಿ ಟೀ ಕುಡಿಯುತ್ತಿದ್ದ ದೃಶ್ಯ ಕಂಡುಬಂತು.

ಬೆಳಿಗ್ಗೆ 8.45ರವರೆಗೂ ಮಂಜು ಇದ್ದರೂ, ಎಂದಿನಂತೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು 7 ಗಂಟೆಯಿಂದಲೇ ಸ್ವೆಟರ್, ಜರ್ಕಿನ್ ಧರಿಸಿ ಕೊರೆಯುವ ಚಳಿಯ ನಡುವೆಯೇ ಶಾಲಾ-ಕಾಲೇಜುಗಳತ್ತ ಹೆಜ್ಜೆ ಹಾಕುತ್ತಿದ್ದರು. ಬೆಳಿಗ್ಗೆ 8.50ರ ನಂತರ ಸೂರ್ಯನ ಕಿರಣಗಳು ಪ್ರಜ್ವಲಿಸುತ್ತಿದ್ದಂತೆ ಮಂಜು ನಿಧಾನವಾಗಿ ಕಡಿಮೆಯಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ಗುಬ್ಬಿ | ರೈತನ ಜಮೀನು ಹರಾಜಿಗೆ ವಿರೋಧ: ನ. 2ರಂದು ರೈತಸಂಘದ ಪ್ರತಿಭಟನೆ

 ಬರಗಾಲದಿಂದ ಬೆಳೆ ನಷ್ಟ ಹಾಗೂ ಕೊಳವೆಬಾವಿಗಳು ಬತ್ತಿರುವ ಸಂಕಷ್ಟದ ನಡುವೆಯೇ ಸಾಲ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...