ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

Date:

ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯಮಟ್ಟದಲ್ಲಿ ಗುರುತಿನ ವೇದಿಕೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2026ರ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದಸರಾವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಉತ್ಸವದಲ್ಲಿ ಹೊಸತನ ಪರಿಚಯಿಸುವುದರ ಜೊತೆಗೆ ಯುವ ಕಲಾವಿದರು, ನೃತ್ಯ ತಂಡಗಳು ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಸರಾ ಸಂದರ್ಭದಲ್ಲಿ ತುಮಕೂರು ನಗರದ ಅಮಾನಿಕೆರೆಯನ್ನು ಆಕರ್ಷಕವಾಗಿ ಅಲಂಕರಿಸಿ, ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸುವಂತೆ ಮಾಡಬೇಕು. ಅಮಾನಿಕೆರೆಯನ್ನು ದಸರಾ ಉತ್ಸವದ ಪ್ರಮುಖ ಆಕರ್ಷಣೆಯನ್ನಾಗಿ ರೂಪಿಸಿ ಸಾರ್ವಜನಿಕರನ್ನು ಸೆಳೆಯಬೇಕು ಎಂದು ಸೂಚಿಸಿದರು.

ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡುವ ಮೂಲಕ ಇಡೀ ನಗರ ಹಬ್ಬದ ವಾತಾವರಣದಿಂದ ಕಂಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ದಸರಾ ಉತ್ಸವ ಕೇವಲ ಮನರಂಜನೆಗೆ ಸೀಮಿತವಾಗದೆ ಮಕ್ಕಳ, ಯುವಜನರ ಹಾಗೂ ಸ್ಥಳೀಯ ಕಲಾವಿದರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಬೇಕು. ತುಮಕೂರು ದಸರಾವನ್ನು ‘ಊರ ಹಬ್ಬ’ದ ರೀತಿಯಲ್ಲಿ ಎಲ್ಲರನ್ನೂ ಒಳಗೊಂಡು ಯಶಸ್ವಿಯಾಗಿ ಆಚರಿಸಬೇಕು ಎಂದು ಹೇಳಿದರು.

ಅಕ್ಟೋಬರ್ 11ರಿಂದ 21ರವರೆಗೆ ತುಮಕೂರು ದಸರಾ ಉತ್ಸವ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...