ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿನಲ್ಲೇ ಸ್ಥಾಪಿಸಿ: ಮಾಜಿ ಸಂಸದ ಜಿ.ಎಸ್. ಬಸವರಾಜು ಆಗ್ರಹ

Date:

 ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲೇ ಸ್ಥಾಪಿಸಿದರೆ ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಆಗ್ರಹಿಸಿದರು.

- Advertisement -

ತುಮಕೂರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಭೌಗೋಳಿಕವಾಗಿ ಸೂಕ್ತ ಸ್ಥಳವಾಗಿದ್ದು, ಸಾಕಷ್ಟು ಸರ್ಕಾರಿ ಜಮೀನು ಲಭ್ಯವಿದೆ. ಇತರೆ ಪ್ರಸ್ತಾವಿತ ಸ್ಥಳಗಳಿಗೆ ಹೋಲಿಸಿದರೆ ಭೂಸ್ವಾಧೀನ ವೆಚ್ಚ ಕಡಿಮೆಯಾಗಲಿದ್ದು, ಕೈಗಾರಿಕಾ ಬೆಳವಣಿಗೆಗೂ ಇದು ಪೂರಕವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಬೆಂಗಳೂರು-ಪುಣೆ ಆರ್ಥಿಕ ಕಾರಿಡಾರ್, ಚೆನ್ನೈ-ಚಿತ್ರದುರ್ಗ ಕೈಗಾರಿಕಾ ಕಾರಿಡಾರ್, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ಹಾಗೂ ವಸಂತನರಸಾಪುರ ಕೈಗಾರಿಕಾ ವಲಯದ ಅಭಿವೃದ್ಧಿಗೆ ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ನೆರವಾಗಲಿದೆ. ಇದು 19 ಜಿಲ್ಲೆಗಳ ಜನರಿಗೆ ಅನುಕೂಲವಾಗುವ ಜತೆಗೆ ಅಭಿವೃದ್ಧಿಯಲ್ಲಿ ಸಾಮಾಜಿಕ ನ್ಯಾಯಕ್ಕೂ ಆದ್ಯತೆ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

2020ರಿಂದ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ನಿರಂತರವಾಗಿ ಒತ್ತಾಯಿಸುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ನಾಯಕರು ಈ ಪ್ರಸ್ತಾವನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ 19 ಜಿಲ್ಲೆಗಳ 37 ಜನಪ್ರತಿನಿಧಿಗಳು ಸಹ ಪಕ್ಷಾತೀತವಾಗಿ ತುಮಕೂರಿನ ಪರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಮಧುಗಿರಿ, ಕೊರಟಗೆರೆ, ಸಿರಾ ಹಾಗೂ ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸೂಕ್ತ ಜಮೀನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದ್ದರೂ, ಸರ್ಕಾರಿ ಜಮೀನು, ಬಗರ್‌ಹುಕುಂ ಅರ್ಜಿಗಳು ಹಾಗೂ ಖಾಸಗಿ ಭೂಸ್ವಾಧೀನ ಅಗತ್ಯದ ಕುರಿತು ಸಮಗ್ರ ಸಮೀಕ್ಷೆ ನಡೆಸಬೇಕಿದೆ. ಕಂದಾಯ ಸಚಿವರೂ ಆಗಿರುವ ಡಾ. ಪರಮೇಶ್ವರ್ ಅವರು ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ತುಮಕೂರಿನಲ್ಲಿ ಸಿಲಿಕಾನ್ ಮಾದರಿಯ ನಗರ ನಿರ್ಮಾಣದ ಕುರಿತು ಸಲಹೆ ನೀಡಿದ್ದರೂ, ರಾಜ್ಯ ಸರ್ಕಾರ ಇನ್ನೂ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ವಿಮಾನ ನಿಲ್ದಾಣ ಹಾಗೂ ಸಿಲಿಕಾನ್ ಸಿಟಿ ಎರಡಕ್ಕೂ ಅಗತ್ಯ ಜಮೀನು ಗುರುತಿಸಿ ಕೇಂದ್ರಕ್ಕೆ ಶೀಘ್ರ ಪ್ರಸ್ತಾವನೆ ಕಳುಹಿಸಬೇಕು ಎಂದರು.

ಉದ್ದೇಶಿತ ಮಾದವಾರ-ತುಮಕೂರು ಮೆಟ್ರೋ ಹಾಗೂ ಉಪನಗರ ರೈಲು ಮಾರ್ಗವನ್ನು ವಸಂತನರಸಾಪುರದವರೆಗೆ ವಿಸ್ತರಿಸಿದರೆ ವಿಮಾನ ನಿಲ್ದಾಣಕ್ಕೆ ಉತ್ತಮ ಸಂಪರ್ಕ ದೊರೆಯಲಿದೆ. ಜೊತೆಗೆ ಬೆಂಗಳೂರು-ತುಮಕೂರು ಹೆದ್ದಾರಿಯ ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಮೀನು ಕೇಳುವವರೆಗೂ ಕಾಯದೆ, ರಾಜ್ಯ ಸರ್ಕಾರವೇ ಅಗತ್ಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಿ ಪ್ರಸ್ತಾವನೆ ಸಲ್ಲಿಸಬೇಕು. ದೊಡ್ಡ ಯೋಜನೆಗಳನ್ನು ತರಲು ಪರಿಣಾಮಕಾರಿ ಅಭಿವೃದ್ಧಿ ಲಾಬಿ ಅಗತ್ಯ ಎಂದು ಬಸವರಾಜು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಕುಂದರನಹಳ್ಳಿ ರಮೇಶ್, ಶಿವರುದ್ರಪ್ಪ, ಮಲ್ಲಿಕಾರ್ಜುನಯ್ಯ ಬಿ.ಬಿ., ಮಹದೇವಯ್ಯ, ವೀರಭದ್ರಯ್ಯ, ರಕ್ಷಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...