ಗುಬ್ಬಿಯಲ್ಲಿ ಕಾವೇರಿ ನೀರಿಗಾಗಿ ರೈತರ ಆಕ್ರೋಶ : ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

Date:

ರಾಜ್ಯದಲ್ಲಿ ತೀವ್ರ ಬರಗಾಲ ಹಾಗೂ ಕುಡಿಯುವ ನೀರಿನ ಅಭಾವದ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

- Advertisement -

 ಗುಬ್ಬಿ    ಪಟ್ಟಣದ ಬಸ್ ನಿಲ್ದಾಣದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್ ಜಮಾಯಿಸಿದ ರೈತರು ರಸ್ತೆ ತಡೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಿದರು. ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು, ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳು ಬರಿದಾಗಿದ್ದು, ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 3,500 ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸಿರುವುದು ಅವೈಜ್ಞಾನಿಕ ಹಾಗೂ ಮಾನವೀಯತೆಯಿಲ್ಲದ ನಿರ್ಧಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ರಾಜ್ಯದ ನೈಜ ಬರ ಪರಿಸ್ಥಿತಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ತಮಿಳುನಾಡಿಗೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೆಆರ್‌ಎಸ್ ಸೇರಿದಂತೆ ಜಲಾಶಯಗಳಲ್ಲಿ ನೀರಿನ ಕೊರತೆ ಇರುವಾಗ ಬೇರೆ ಅಣೆಕಟ್ಟುಗಳಿಂದ ನೀರು ಹರಿಸುವ ಪ್ರಯತ್ನ ನಡೆದರೆ ರಾಜ್ಯಾದ್ಯಂತ ರೈತ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತರ ನೈಜ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸದೇ ಕಾವೇರಿ ನೀರು ಹರಿಸುವಂತೆ ನಿರ್ದೇಶನ ನೀಡಿರುವುದು ಸರಿಯಲ್ಲ. ರಾಜ್ಯ ಸರ್ಕಾರವೂ ಬರಗಾಲದ ತೀವ್ರತೆಯನ್ನು ಸಮರ್ಪಕವಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಹೇಮಾವತಿ ಜಲಾಶಯದ ನೀರು ಸಹ ತಮಿಳುನಾಡಿಗೆ ಹರಿಸುವ ಸಾಧ್ಯತೆ ಇದೆ. ಜಿಲ್ಲೆಯ ರೈತರು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.” ಎಂದು ರೈತ ಸಂಘದ ಗುಬ್ಬಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್ ಕರೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ತಹಸೀಲ್ದಾರ್ ಆರತಿ ಬಿ ಅವರಿಗೆ ರೈತರು ಮನವಿ ಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ನಿರ್ದೇಶನಗಳನ್ನು ನೀಡಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಾಲ್ಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಟಿ. ಕುಮಾರ್, ಮಂಜುನಾಥ್, ಗುರು ಚನ್ನಬಸಪ್ಪ, ದೇವೇಗೌಡ, ಬಸವರಾಜು, ಮಹಾದೇವಯ್ಯ, ವರ್ತಕರ ಸಂಘದ ದಯಾನಂದ್, ಮಾಜಿ ಸೈನಿಕರ ಸಂಘದ ವಿವೇಕಾನಂದ, ಜೈದೇವ್ ಸೇರಿದಂತೆ ನೂರಾರು ರೈತ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...