ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

Date:

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ (SIR-2026) ಪ್ರಕ್ರಿಯೆಯಡಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 20,94,762 ಮತದಾರರು ನೋಂದಣಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯಲ್ಲಿ 10,36,724 ಪುರುಷರು, 10,57,981 ಮಹಿಳೆಯರು ಹಾಗೂ 57 ತೃತೀಯ ಲಿಂಗದ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಅಂತಿಮ ಪಟ್ಟಿಯಲ್ಲಿ 18ರಿಂದ 19 ವರ್ಷದೊಳಗಿನ 30,301 ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ಇವರಲ್ಲಿ 15,754 ಪುರುಷರು, 14,543 ಮಹಿಳೆಯರು ಹಾಗೂ ನಾಲ್ವರು ತೃತೀಯ ಲಿಂಗದ ಮತದಾರರಿದ್ದಾರೆ ಎಂದು ತಿಳಿಸಿದರು.

ನಮೂನೆ–7ರ ಅಡಿಯಲ್ಲಿ ಜಿಲ್ಲೆಯ ಮತದಾರರ ಪಟ್ಟಿಯಿಂದ ಒಟ್ಟು 7,248 ಹೆಸರುಗಳನ್ನು ಕೈಬಿಡಲಾಗಿದೆ. ಇವರಲ್ಲಿ 162 ಮಂದಿ ಮರಣ ಹೊಂದಿದವರು, 25 ಮಂದಿ ಗೈರುಹಾಜರಾದವರು, 63 ಮಂದಿ ಈಗಾಗಲೇ ನೋಂದಣಿಯಾಗಿರುವವರು, 4,777 ಮಂದಿ ಸ್ಥಳಾಂತರಗೊಂಡವರು ಹಾಗೂ 2,221 ಮಂದಿ ಇತರೆ ಕಾರಣಗಳಿಗೆ ಸಂಬಂಧಿಸಿದವರಾಗಿದ್ದಾರೆ ಎಂದು ವಿವರಿಸಿದರು.

ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳು, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಎನ್‌ಐಸಿ ವೆಬ್‌ಸೈಟ್ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಬಿಟ್ಟುಹೋಗಿದ್ದರೆ, ವಿವರಗಳಲ್ಲಿ ತಿದ್ದುಪಡಿ ಅಗತ್ಯವಿದ್ದರೆ ಅಥವಾ ಇತರ ನ್ಯೂನತೆಗಳು ಕಂಡುಬಂದರೆ ನಿರಂತರ ಪರಿಷ್ಕರಣೆ ಪ್ರಕ್ರಿಯೆಯಡಿ ನಿಗದಿತ ನಮೂನೆ–6, 7 ಮತ್ತು 8ರಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.

ಅರ್ಹ ಮತದಾರರು ಆನ್‌ಲೈನ್‌ನಲ್ಲಿ ಮತದಾರರ ಸೇವೆಗಳ ಪೋರ್ಟಲ್ ಅಥವಾ ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯ ಹಾರ್ಡ್‌ಕಾಪಿ ಹಾಗೂ ಸಾಫ್ಟ್‌ಕಾಪಿಗಳನ್ನು ವಿತರಿಸಲಾಯಿತು. ಚುನಾವಣಾ ಶಾಖೆಯ ನಾಗಭೂಷಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಗುಬ್ಬಿ | ಶಾಂತಿಯುತವಾಗಿ ನಡೆದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ

 ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ...